ಸೌಲಭ್ಯಗಳು ಫಲಾನುಭವಿಗಳಿಗೆ ತಲುಪಿಸಿ

ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಪಿಡಿಒ ರಾಜು ವಾರದ ಮಾತನಾಡಿದರು. ಆಡಳಿತಾಧಿಕಾರಿ ಹನುಮಂತ ಡೋಣಿ, ಸತ್ಯಪ್ಪ ಮಿರ್ಜಿ ಇತರರಿದ್ದರು.
ಮುಧೋಳ ತಾಲೂಕಿನ ಮೆಳ್ಳಿಗೇರಿ ಗ್ರಾಮ ಪಂಚಾಯತಿ ಸಭಾ ಭವನದಲ್ಲಿ ನಡೆದ ವಿಶೇಷ ಗ್ರಾಮ ಸಭೆಯಲ್ಲಿ ಪಿಡಿಒ ರಾಜು ವಾರದ ಮಾತನಾಡಿದರು. ಆಡಳಿತಾಧಿಕಾರಿ ಹನುಮಂತ ಡೋಣಿ, ಸತ್ಯಪ್ಪ ಮಿರ್ಜಿ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಿಡಿಒ ರಾಜು ವಾರದ ಹೇಳಿಕೆ
  • ಮೆಳ್ಳಿಗೇರಿ ಗ್ರಾಪಂನಲ್ಲಿ ವಿಶೇಷ ಗ್ರಾಮಸಭೆ
  • ವಿಬಿ-ಜಿ ರಾಮ-ಜಿ ಯೋಜನೆಯ ಕಾಮಗಾರಿಗಳಿಗೆ ಚಾಲನೆ

ಮುಧೋಳ : ಗ್ರಾಮದ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದ್ದು, ನಿರ್ಮಲತೆ, ಕುಡಿಯುವ ನೀರು, ರಸ್ತೆ ಹಾಗೂ ಚರಂಡಿ ವ್ಯವಸ್ಥೆ ಸುಧಾರಣೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ರಾಜು ವಾರದ ತಿಳಿಸಿದರು.

ತಾಲೂಕಿನ ಮೆಳ್ಳಿಗೇರಿ ಗ್ರಾಮ ಪಂಚಾಯಿತಿ ಸಭಾ ಭವನದಲ್ಲಿ ವಿಶೇಷ ಗ್ರಾಮ ಸಭೆ ಹಾಗೂ ವಿಬಿ-ಜಿ ರಾಮ-ಜಿ ಯೋಜನೆಯಡಿ ಕೈಗೆತ್ತಿಕೊಳ್ಳಲಾದ ನೂತನ ಕಾಮಗಾರಿಗಳಿಗೆ ಚಾಲನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸರ್ಕಾರದ ಸೌಲಭ್ಯಗಳು ಯಾವುದೇ ಮಧ್ಯವರ್ತಿಗಳ ಹಸ್ತಕ್ಷೇಪವಿಲ್ಲದೆ ಅರ್ಹ ಫಲಾನುಭವಿಗಳಿಗೆ ನೇರವಾಗಿ ತಲುಪಿಸುವುದು ಪಂಚಾಯಿತಿಯ ಪ್ರಮುಖ ಉದ್ದೇಶವಾಗಿದೆ ಎಂದರು.
ಆಡಳಿತಾಧಿಕಾರಿ ಹನುಮಂತ ಡೋಣಿ ಮಾತನಾಡಿ, ವಿಶೇಷ ಗ್ರಾಮ ಸಭೆಗಳ ಮೂಲಕ ಸರ್ಕಾರದ ಯೋಜನೆಗಳು ಹಾಗೂ ಅಭಿವೃದ್ಧಿ ಕಾರ್ಯಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ದೊರೆಯಲಿದೆ. ವಿಬಿ-ಜಿ ರಾಮ-ಜಿ ಯೋಜನೆಯಡಿ ನಡೆಯುವ ಕಾಮಗಾರಿಗಳಲ್ಲಿ ಗುಣಮಟ್ಟ ಮತ್ತು ಪಾರದರ್ಶಕತೆ ಕಾಪಾಡಬೇಕು. ಕಾಮಗಾರಿಗಳ ಪ್ರಗತಿ ಹಾಗೂ ಗುಣಮಟ್ಟದ ಮೇಲೆ ಸಾರ್ವಜನಿಕರು ಮತ್ತು ಜನಪ್ರತಿನಿಧಿಗಳು ನಿಗಾ ವಹಿಸಬೇಕು ಎಂದು ಸೂಚಿಸಿದರು.
ಗ್ರಾಮಸ್ಥರು ಕುಡಿಯುವ ನೀರಿನ ಸಮಸ್ಯೆ, ವಿವಿಧ ಮೂಲ ಸೌಕರ್ಯಗಳ ಅಭಿವೃದ್ಧಿ ಹಾಗೂ ಸರ್ಕಾರದ ಯೋಜನೆಗಳ ಅನುಷ್ಠಾನ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದರು. ಬಳಿಕ ಗ್ರಾಮದ ಪ್ರಮುಖರು ಹಾಗೂ ಸಾರ್ವಜನಿಕರ ಸಮ್ಮುಖದಲ್ಲಿ ವಿಬಿಜಿ ರಾಮಜಿ ಯೋಜನೆಯ ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿ ಚಾಲನೆ ನೀಡಲಾಯಿತು.
ಗ್ರಾಮದ ಮುಖಂಡರಾದ ಸತ್ಯಪ್ಪ ಮರ್ಜಿ, ಮಲ್ಲಪ್ಪ ಮೂಲಿಮನಿ, ಆನಂದ ಬದನೂರ, ಅಶೋಕ್ ಬದನೂರ, ಸತ್ಯಪ್ಪ ಜೈನಾಪುರ ಸೇರಿ ಹಲವರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net