ನ್ಯಾಯ ಒದಗಿಸುವುದೇ ಕಾನೂನಿನ ಮುಖ್ಯ ಉದ್ದೇಶ

ಬಾಗಲಕೋಟೆ ಬಿವಿವಿ ಸಂಘದ ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಾಽÃಶೆ ಪ್ರಭಾವತಿ ಹಿರೇಮಠ ಅವರು ಕಾನೂನು ಪದವಿಧರರಿಗೆ ಪದವಿ ಪ್ರದಾನ ಮಾಡಿದರು. ನಿವೃತ್ತ ವಿಶೇಷ ಸಾರ್ವಜನಿಕ ಅಭಿಯೋಜಕ ಕೆ.ಜಿ.ಪುರಾಣಿಕಮಠ ಇದ್ದರು.
ಬಾಗಲಕೋಟೆ ಬಿವಿವಿ ಸಂಘದ ಎಸ್.ಸಿ.ನಂದಿಮಠ ಕಾನೂನು ಮಹಾವಿದ್ಯಾಲಯದಲ್ಲಿ ಶನಿವಾರ ನಡೆದ ಕಾರ್ಯಕ್ರಮದಲ್ಲಿ ನಿವೃತ್ತ ನ್ಯಾಯಾಽÃಶೆ ಪ್ರಭಾವತಿ ಹಿರೇಮಠ ಅವರು ಕಾನೂನು ಪದವಿಧರರಿಗೆ ಪದವಿ ಪ್ರದಾನ ಮಾಡಿದರು. ನಿವೃತ್ತ ವಿಶೇಷ ಸಾರ್ವಜನಿಕ ಅಭಿಯೋಜಕ ಕೆ.ಜಿ.ಪುರಾಣಿಕಮಠ ಇದ್ದರು.
Published on
ಬಾಗಲಕೋಟೆ: ಜನರಿಗೆ ಪ್ರಾಮಾಣಿಕವಾಗಿ ನ್ಯಾಯ ಒದಗಿಸುವುದೇ ಕಾನೂನಿನ ಪ್ರಮುಖ ಉದ್ದೇಶವಾಗಿದೆ. ಕಾನೂನು ಪದವೀಧರರು ಸಮಾಜದಲ್ಲಿ ನ್ಯಾಯ, ನೈತಿಕತೆ ಮತ್ತು ಮಾನವೀಯ ಮೌಲ್ಯಗಳನ್ನು ಎತ್ತಿಹಿಡಿಯುವ ಜವಾಬ್ದಾರಿಯನ್ನು ಹೊತ್ತು ಕಾರ್ಯನಿರ್ವಹಿಸಬೇಕು ಎಂದು ಬೆಂಗಳೂರಿನ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದ ನಿವೃತ್ತ ನ್ಯಾಯಾಽÃಶೆ ಪ್ರಭಾವತಿ ಹಿರೇಮಠ ಹೇಳಿದರು.
ನಗರದ ಬಸವೇಶ್ವರ ಇಂಜಿನಿಯರಿAಗ್ ಕಾಲೇಜಿನ ಗ್ಯಾಲರಿ ಸಭಾಂಗಣದಲ್ಲಿ ಶನಿವಾರ ನಡೆದ ಬಿವಿವಿ ಸಂಘದ ಎಸ್.ಸಿ. ನಂದಿಮಠ ಕಾನೂನು ಮಹಾವಿದ್ಯಾಲಯದ ೨೦೨೩-೨೦೨೬ನೇ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ೧೧೪ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದವರು.
ಕಾನೂನು ಆಳಕ್ಕೆ ಇಳದಷ್ಷು ಅದು ಸರಳವಾಗುತ್ತದೆ. ಕಾನೂನು ಪದವಿದರರಿಗೆ ಸಾಕಷ್ಟು ಅವಕಾಶಗಳಿವೆ, ವಕೀಲ ವೃತ್ತಿಯಲ್ಲಿ ಹೆಸರಿನ ಜೊತೆ ಹಣವು ಕೂಡ ಬರುತ್ತದೆ. ಆದರೆ, ನಾವು ಪ್ರಾಮಾಣಿಕವಾಗಿ ಜನರಿಗೆ ನ್ಯಾಯವನ್ನು ಒದಗಿಸುವ ಮೂಲಕ ಸಮಾಜದಲ್ಲಿ ಮಾದರಿಯಾಗಬೇಕು ಎಂದರು.
ನಿವೃತ್ತ ವಿಶೇಷ ಸಾರ್ವಜನಿಕ ಅಭಿಯೋಜಕ ಕೆ.ಜಿ.ಪುರಾಣಿಕಮಠ ಮಾತನಾಡಿ, ಕಾನೂನು ವೃತ್ತಿಯಲ್ಲಿ ಪ್ರಾಮಾಣಿಕತೆ, ಸೇವಾ ಮನೋಭಾವ ಮತ್ತು ವೃತ್ತಿ ನಿಷ್ಠೆ ಅತ್ಯಂತ ಮುಖ್ಯವಾಗಿದೆ. ಸಮಾಜದ ವಿಶ್ವಾಸವನ್ನು ಉಳಿಸಿಕೊಳ್ಳುವಂತೆ ಪದವಿಧರರಿಗೆ ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ ಮಾತನಾಡಿ, ಗುಣಮಟ್ಟದ ಕಾನೂನು ಶಿಕ್ಷಣದ ಮೂಲಕ ಸಮಾಜಮುಖಿ ವಕೀಲರನ್ನು ರೂಪಿಸುವ ಕಾರ್ಯವನ್ನು ಸಂಘ ನಿರಂತರವಾಗಿ ನಡೆಸುತ್ತಿದೆ ಎಂದು ಹೇಳಿದರು.
ಕಾಲೇಜು ಆಡಳಿತ ಮಂಡಳಿಯ ಕಾರ್ಯಾಧ್ಯಕ್ಷ ಗುರುಬಸವ ಸೂಳಿಭಾವಿ, ಸಂಘದ ಆಡಳಿತಾಽಕಾರಿ ವಿ.ಆರ್. ಶಿರೋಳ, ಪ್ರಾಚಾರ್ಯ ಡಾ. ಎಂ.ಪಿ. ಚೆಂದ್ರಿಕಾ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net