ಗುಳೇದಗುಡ್ಡದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಮಾತನಾಡಿದರು. ಮಾಜಿ ಪುರಸಭೆ ಅಧ್ಯಕ್ಷ ವೈ.ಆರ್. ಹೆಬ್ಬಳ್ಳಿ, ಚಿದಾನಂದಸಾ ಕಾಟವಾ, ಗೋಪಾಲ ಭಟ್ಟಡ ಜಮೀರ್ ಮೌಲ್ವಿ, ರಮೇಶ ಬೂದಿಹಾಳ, ರಾಜು ಸಂಗಮ ಇತರರಿದ್ದರು.
ಗುಳೇದಗುಡ್ಡ : ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣವು ಕೇಂದ್ರ ಸರ್ಕಾರದ ವೈಲ್ಯವನ್ನು ತೋರಿಸುತ್ತದೆ ಎಂದು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ ಬರಗುಂಡಿ ಆರೋಪಿಸಿದರು.
ನಗರದಲ್ಲಿ ಮಂಗಳವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಘಟನೆದಿಂದ ಪರೀಕ್ಷೆ ಬರೆದ ಲಕ್ಷಾಂತರ ವಿದ್ಯಾರ್ಥಿಗಳಿಗೆ ಅನ್ಯಾಯವಾಗಿದ್ದು, ಅವರ ಭವಿಷ್ಯ ಆತಂಕಕ್ಕೀಡಾಗಿದೆ ಎಂದು ಹೇಳಿದರು. ಪ್ರಶ್ನೆಪತ್ರಿಕೆ ಸೋರಿಕೆಯ ಹಿಂದೆ ಇರುವವರನ್ನು ತಕ್ಷಣ ಬಂಧಿಸಬೇಕು ಎಂದು ಆಗ್ರಹಿಸಿದರು.
ಯುವಕರ ಪರವಾಗಿದ್ದೇವೆ ಎಂದು ಹೇಳಿಕೊಳ್ಳುವ ಸರ್ಕಾರವೇ ಯುವಕರಿಗೆ ಅನ್ಯಾಯ ಮಾಡುತ್ತಿದೆ. ಉದ್ಯೋಗ ಸಷ್ಟಿಯ ಭರವಸೆ ನೀಡಿದರೂ, ಯುವಕರ ಅವಕಾಶಗಳನ್ನು ಕಸಿಯುತ್ತಿದೆ ಎಂದು ಟೀಕಿಸಿದರು. ಇನ್ನು ಪೆಟ್ರೋಲ್ ಹಾಗೂ ಗ್ಯಾಸ್ ಬೆಲೆ ಏರಿಕೆಯಿಂದ ಸಾಮಾನ್ಯ ಜನರು ಸಂಕಷ್ಟ ಎದುರಿಸುತ್ತಿದ್ದಾರೆ ಎಂದು ಹೇಳಿದರು.