ಮೈಕ್ರೋ ಫೈನಾನ್ಸ್‌ಗಳ ಕಿರುಕುಳ ತಡೆಗೆ ಆಗ್ರಹ

 ಬಾಗಲಕೋಟೆ ನಗರದಲ್ಲಿ ಎಸ್ಪಿ ಸಿದ್ದಾರ್ಥ ಗೋಯಲ್ ಅವರಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಪದಾಧಿಕಾರಿಗಳು ಗುರುವಾರ ಮನವಿ ಸಲ್ಲಿಸಿದರು. ಸಮಿತಿ ಸಂಚಾಲಕರಾದ ಹನುಮಂತ ಚಿಮ್ಮಲಗಿ, ಸಂಗಣ್ಣ ಮಡ್ಡಿ, ಪ್ರಭು ದೊಡ್ಡಮನಿ ಇದ್ದರು.
ಬಾಗಲಕೋಟೆ ನಗರದಲ್ಲಿ ಎಸ್ಪಿ ಸಿದ್ದಾರ್ಥ ಗೋಯಲ್ ಅವರಿಗೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಪದಾಧಿಕಾರಿಗಳು ಗುರುವಾರ ಮನವಿ ಸಲ್ಲಿಸಿದರು. ಸಮಿತಿ ಸಂಚಾಲಕರಾದ ಹನುಮಂತ ಚಿಮ್ಮಲಗಿ, ಸಂಗಣ್ಣ ಮಡ್ಡಿ, ಪ್ರಭು ದೊಡ್ಡಮನಿ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ದಲಿತ ಸಂಘರ್ಷ ಸಮಿತಿ ಪದಾಧಿಕಾರಿಗಳಿಂದ ಡಿಸಿ., ಎಸ್‌ಪಿಗೆ ಮನವಿ
  • ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಮಹಿಳೆಯರು ಬೇಸತ್ತು ಹೋಗಿದ್ದಾರೆ
  • ಮೈಕ್ರೋ ಫೈನಾನ್ಸ್‌ಗಳು ಅಧಿಕ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಿದ್ದಾರೆ
ಬಾಗಲಕೋಟೆ : ಜಿಲ್ಲೆಯಲ್ಲಿ ಮೈಕ್ರೋ ಫೈನಾನ್ಸ್‌ಗಳ ಕಿರುಕುಳಕ್ಕೆ ಮಹಿಳೆಯರು ಬೇಸತ್ತು ಹೋಗಿದ್ದಾರೆ. ಕೂಡಲೇ ಸಂಬಂಧಪಟ್ಟವರ ಮೇಲೆ ಕ್ರಮ ತೆಗೆದುಕೊಳ್ಳಬೇಕು ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ (ನಾಗವಾರ ಬಣ) ಪದಾಧಿಕಾರಿಗಳು ಗುರುವಾರ ಎಸ್ಪಿ ಸಿದ್ದಾರ್ಥ ಗೋಯಲ್, ಜಿಲ್ಲಾಧಿಕಾರಿ ಸಂಗಪ್ಪ ಎಂ. ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲೆಯಲ್ಲಿ ಗ್ರಾಮೀಣ ಪ್ರದೇಶದಲ್ಲಿ ಮೈಕ್ರೋ ಫೈನಾನ್ಸ್‌ಗಳು ಅಧಿಕ ಬಡ್ಡಿ ದರದಲ್ಲಿ ಸಾಲ ವಿತರಣೆ ಮಾಡಿದ್ದಾರೆ. ಪ್ರತಿ ವಾರಕ್ಕೆ, 15 ದಿನಕ್ಕೊಮ್ಮೆ ಕಂತಿನ ರೂಪದಲ್ಲಿ ಸಾಲ ವಸೂಲಿ ಮಾಡಲಾಗುತ್ತಿದೆ. ಸಾಲ ಕಟ್ಟುವುದು ಸ್ವಲ್ಪ ತಡವಾದರೇ ಸಾಕು ಮಹಿಳೆಯರಿಗೆ ಕಿರುಕುಳ ನೀಡುವುದು, ಬೆದರಿಕೆ ಹಾಕುವುದು ಸೇರಿ ನಾನಾ ರೀತಿಯಲ್ಲಿ ತೊಂದರೆ ನೀಡಲಾಗುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಫೈನಾನ್ಸ್‌ಗಳ ನೀಡುತ್ತಿರುವುದು ಕಿರುಕುಳಕ್ಕೆ ಮಹಿಳೆಯರು ಜೀವನ ಸಾಗಿಸುವುದು ಕಷ್ಟದಾಯಕವಾಗಿದೆ. ಅನಾರೋಗ್ಯಕ್ಕೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗುತ್ತಿದ್ದಾರೆ. ನಿಧನರಾದರು ಸಹ ಸಾಲ ಪಾವತಿಗೆ ಸಮಯ ನೀಡುವುದಿಲ್ಲ. ಕೆಟ್ಟ ಪದಗಳಿಂದ ನಿಂದನೆ ಮಾಡುವ ಫೈನಾನ್ಸ್ ಪ್ರತಿನಿಧಿಗಳು ರಾತ್ರಿವರೆಗೂ ಮನೆ ಮುಂದೆ ಕುಳಿತು ಗದ್ದಲ ಸೃಷ್ಟಿಸುತ್ತಿದ್ದಾರೆ. ಇದರಿಂದ ಗ್ರಾಮೀಣ ಪ್ರದೇಶದಲ್ಲಿ ಭಯದ ವಾತಾವರಣ ನಿರ್ಮಾಣವಾಗಿದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ ಈ ಬಗ್ಗೆ ಕ್ರಮ ತೆಗೆದುಕೊಳ್ಳಬೇಕು ಎಂದು ಸಮಿತಿ ಸಂಚಾಲಕರಾದ ಹನುಮಂತ ಚಿಮ್ಮಲಗಿ, ಸಂಗಣ್ಣ ಮಡ್ಡಿ, ಪ್ರಭು ದೊಡ್ಡಮನಿ, ಶಂಕ್ರಪ್ಪ ದೊಡ್ಡಮನಿ, ನಾಗಪ್ಪ ದೊಡ್ಡಮನಿ ಆಗ್ರಹಿಸಿದ್ದಾರೆ.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net