ಬೀದಿ ನಾಯಿಗಳ ಹಾವಳಿ ತಡೆಗೆ ಆಗ್ರಹ

ಗುಳೇದಗುಡ್ಡ ಪಟ್ಟಣದಲ್ಲಿ ಹಿಂಡು ಹಿಂಡಾಗಿ ಅಲೆಯುತ್ತಿರುವ ಬೀದಿ ನಾಯಿಗಳು.
ಗುಳೇದಗುಡ್ಡ ಪಟ್ಟಣದಲ್ಲಿ ಹಿಂಡು ಹಿಂಡಾಗಿ ಅಲೆಯುತ್ತಿರುವ ಬೀದಿ ನಾಯಿಗಳು.
Published on

ಪ್ರಮುಖ ಮುಖ್ಯಾಂಶಗಳು

  • ಬೀದಿ ನಾಯಿಗಳ ಹಾವಳಿ
  • ಸಾರ್ವಜನಿಕರಿಗೆ ಭಯ
ಗುಳೇದಗುಡ್ಡ : ಪಟ್ಟಣದ ಪ್ರಮುಖ ಬೀದಿಗಳಲ್ಲಿ, ಬಸ್ ನಿಲ್ದಾಣ, ಮಾರ್ಕೆಟ್ ಪ್ರದೇಶದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದು, ಸಾರ್ವಜನಿಕರು ಭಯ ಪಡುವಂತಾಗಿದೆ.
ಮಕ್ಕಳು, ಮಹಿಳೆಯರು, ವೃದ್ಧರು ಸೇರಿ ಸಾರ್ವಜನಿಕರಿಗೆ ಕಚ್ಚುತ್ತಿವೆ. ಕೆಲವು ಪ್ರದೇಶದಲ್ಲಿ ಹಿಂಡು ಹಿಂಡಾಗಿ ಬೀದಿನಾಯಿಗಳು ತಿರುಗಾಡಿ ಸಾರ್ವಜನಿಕರಿಗೆ ಭಯ ಮೂಡಿಸುತ್ತಿವೆ. ದ್ವಿಚಕ್ರ ವಾಹನಗಳ ಬೆನ್ನು ಹತ್ತುವುದು, ಅಡ್ಡಗಟ್ಟಿ ಕಚ್ಚಲು ಬರುತ್ತಿವೆ. ಬೀದಿ ನಾಯಿಗಳ ಹಾವಳಿ ನಿಯಂತ್ರಣಕ್ಕೆ ಆದೇಶವಿದ್ದರೂ ಪುರಸಭೆ ಈ ವರೆಗೆ ಯಾವ ಕ್ರಮ ಕೈಗೊಂಡಿಲ್ಲ. ಬೀದಿ ನಾಯಿಗಳನ್ನು ನಿಯಂತ್ರಿಸುವ ಮೂಲಕ ಸಾರ್ವಜನಿಕರಿಗೆ ತೊಂದರೆಯಾಗುವುದನ್ನು ತಪ್ಪಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದರು.
"

ಪಟ್ಟಣದಲ್ಲಿ ಕಳೆದ ನಾಲ್ಕು ತಿಂಗಳಲ್ಲಿ ಒಟ್ಟು 162 ಜನರು ಬೀದಿ ನಾಯಿ ಕಚ್ಚಿಸಿಕೊಂಡು, ಆಸ್ಪತ್ರೆಯಲ್ಲಿ ಚುಚ್ಚುಮದ್ದು ಪಡೆದಿದ್ದಾರೆ. ನಾಯಿ ಕಡಿತದ ರೇಬಿಸ್ ನಿರೋಧಕ ಚುಚ್ಚುಮದ್ದು ಸಂಗ್ರಹವಿದೆ. ನಾಯಿ ಕಡಿತಕ್ಕೆ ಒಳಗಾದ ಎಲ್ಲರಿಗೂ ಚುಚ್ಚುಮದ್ದು ನೀಡಲಾಗುತ್ತಿದೆ.

— | ಡಾ. ನಾಗರಾಜ ಕುರಿ, ಮುಖ್ಯ ವೈದ್ಯಾಽಕಾರಿ ಸಮುದಾಯ ಆರೋಗ್ಯ ಕೇಂದ್ರ.

"

ಸರ್ಕಾರದ ನಿರ್ದೇಶನದಂತೆ ಬೀದಿ ನಾಯಿಗಳ ನಿಯಂತ್ರಣಕ್ಕೆ ಜಿಲ್ಲೆಯಲ್ಲಿ ಜಮಖಂಡಿ ಹಾಗೂ ಬಾಗಲಕೋಟೆ ಎರಡು ಘಟಕಗಳನ್ನು ತೆರೆದು, ನಿರ್ವಹಣೆಗಾಗಿ ಟೆಂಡರ್ ಕರೆಯಲಾಗಿದೆ. ಜಿಲ್ಲಾ ನಗರಾಭಿವೃದ್ಧಿ ಕೋಶದೊಂದಿಗೆ ಪುರಸಭೆ ಕೂಡ ಸಹಕಾರ ನೀಡಿ, ಶೀಘ್ರ ಬೀದಿ ನಾಯಿ ಹಾವಳಿ ತಡೆಗಟ್ಟಲು ಕ್ರಮ ಕೈಗೊಳ್ಳಲಾಗುವುದು.

— | ಎ.ಎಚ್. ಮುಜಾವರ, ಪುರಸಭೆ ಮುಖ್ಯಾಧಿಕಾರಿ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net