ಸಾಧನೆಯ ಮನೋಭಾವ ಬೆಳೆಸಿಕೊಳ್ಳಿ

ಜಮಖಂಡಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾಜಿ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಿದರು. ಆಲಗೂರ ಲಕ್ಷ÷್ಮಣಮುತ್ಯಾ, ಮುತ್ತಿನಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಓಲೆಮಠದ ಆನಂದ ದೇವರು, ಉದ್ಯಮಿ ಸಂಗಮೇಶ ನಿರಾಣಿ, ಬಸವರಾಜ ದಲಾಲ, ಸಿ.ಪಿ. ಜನವಾಡ ಇತರರಿದ್ದರು.
ಜಮಖಂಡಿಯಲ್ಲಿ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಮಾಜಿ ಸಚಿವ ಮುರುಗೇಶ ನಿರಾಣಿ ಉದ್ಘಾಟಿಸಿದರು. ಆಲಗೂರ ಲಕ್ಷ÷್ಮಣಮುತ್ಯಾ, ಮುತ್ತಿನಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಓಲೆಮಠದ ಆನಂದ ದೇವರು, ಉದ್ಯಮಿ ಸಂಗಮೇಶ ನಿರಾಣಿ, ಬಸವರಾಜ ದಲಾಲ, ಸಿ.ಪಿ. ಜನವಾಡ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿಕೆ
  • ವಿಶೇಷ ಸಾಧಕರ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ

ಜಮಖಂಡಿ: ವಿದ್ಯಾರ್ಥಿಗಳು ಕೇವಲ ಪದವಿ ಪಡೆಯುವುದಕ್ಕೆ ಸೀಮಿತವಾಗದೆ, ತಮ್ಮ ಆಸಕ್ತಿಯ ಕ್ಷೇತ್ರದಲ್ಲಿ ಕೌಶಲ ಬೆಳೆಸಿಕೊಂಡು ಉದ್ಯಮಿಗಳಾಗಿ ಸಾಧನೆ ಮಾಡಬೇಕು ಎಂದು ಮಾಜಿ ಸಚಿವ ಮುರುಗೇಶ ನಿರಾಣಿ ಹೇಳಿದರು.

ನಗರದ ಮೈಗೂರ ರಸ್ತೆಯ ಪಂಚಮಸಾಲಿ ಕಲ್ಯಾಣ ಮಂಟಪದಲ್ಲಿ ತಾಲೂಕು ವೀರಶೈವ ಪಂಚಮಸಾಲಿ ಸಂಘ ಹಾಗೂ ರಾಣಿ ಚನ್ನಮ್ಮ ಬ್ಯಾಂಕ್ ಆಶ್ರಯದಲ್ಲಿ ಭಾನುವಾರ ನಡೆದ ಪ್ರತಿಭಾವಂತ ವಿದ್ಯಾರ್ಥಿಗಳು ಹಾಗೂ ವಿಶೇಷ ಸಾಧಕರ ಪ್ರತಿಭಾ ಪುರಸ್ಕಾರ ಮತ್ತು ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಇಂದಿನ ಯುವಜನತೆ ಪ್ರತಿಭಾವಂತರು ಹಾಗೂ ಬುದ್ಧಿವಂತರಾಗಿದ್ದು, ಲಭ್ಯವಿರುವ ಅವಕಾಶಗಳನ್ನು ಸಮರ್ಪಕವಾಗಿ ಬಳಸಿಕೊಳ್ಳಬೇಕು. ವಿದ್ಯಾರ್ಥಿಗಳು ತಮ್ಮ ಗುರುಗಳನ್ನು ಮೀರಿಸುವಂತಹ ಸಾಧನೆಯ ಗುರಿ ಹೊಂದಬೇಕು. ಒಂದು ಬಾರಿ ದೊರೆತ ಯಶಸ್ಸಿಗೆ ತೃಪ್ತರಾಗದೆ, ಜೀವನದ ಪ್ರತಿಯೊಂದು ಹಂತದಲ್ಲೂ ಹೊಸ ಸಾಧನೆ ಮಾಡುವ ಮನೋಭಾವ ಬೆಳೆಸಿಕೊಳ್ಳಬೇಕು ಎಂದರು.
ಪ್ರತಿಭಾ ಪುರಸ್ಕಾರ ಪಡೆದ ವಿದ್ಯಾರ್ಥಿಗಳು ನಯ, ವಿನಯ ಹಾಗೂ ಸಂಸ್ಕಾರವನ್ನು ಬೆಳೆಸಿಕೊಂಡು ಗುರು-ಹಿರಿಯರು ಮತ್ತು ಪಾಲಕರಿಗೆ ಗೌರವ ನೀಡಬೇಕು. ತಮ್ಮ ಸಾಧನೆ ಸಮಾಜದ ಇತರರಿಗೆ ಪ್ರೇರಣೆಯಾಗುವಂತಿರಬೇಕು. ಪಾಲಕರು ಮತ್ತು ಸಮಾಜ ನೀಡಿದ ಅವಕಾಶಗಳಿಗೆ ಕೃತಜ್ಞತೆಯಿಂದ ನಡೆದುಕೊಳ್ಳಬೇಕು ಎಂದು ಸಲಹೆ ನೀಡಿದರು.
ಪಂಚಮಸಾಲಿ ಸಮಾಜದ ರೈತರು ಕೃಷಿಯಲ್ಲಿ ಆಧುನಿಕ ಪದ್ಧತಿಗಳನ್ನು ಅಳವಡಿಸಿಕೊಂಡು ಹೆಚ್ಚಿನ ಇಳುವರಿ ಪಡೆಯುವುದರ ಜೊತೆಗೆ ಸ್ವ-ಉದ್ಯೋಗ ಮತ್ತು ಉದ್ಯಮ ಆರಂಭಿಸುವತ್ತ ಗಮನಹರಿಸಬೇಕು. ಮಕ್ಕಳಿಗೆ ಶಿಕ್ಷಣದ ಜತೆಗೆ ಉತ್ತಮ ಸಂಸ್ಕಾರ ನೀಡಬೇಕು. ಹೆಣ್ಣು-ಗಂಡು ಎಂಬ ಭೇದವಿಲ್ಲದೆ ಸಮಾನ ಶಿಕ್ಷಣಾವಕಾಶ ಕಲ್ಪಿಸಬೇಕು ಎಂದು ಹೇಳಿದರು.
ತಾಲೂಕು ಪಂಚಮಸಾಲಿ ಸಮಾಜದ ಅಧ್ಯಕ್ಷ ಪಿ.ಎನ್. ಪಾಟೀಲ ಮಾತನಾಡಿ, ಜಿಎಲ್‌ಬಿಸಿ ಸಮೀಪದ ಕಿತ್ತೂರು ರಾಣಿ ಚನ್ನಮ್ಮ ವೃತ್ತದಲ್ಲಿ ಚನ್ನಮ್ಮನ ಕಂಚಿನ ಪ್ರತಿಮೆ ಸ್ಥಾಪಿಸಲು ಸಿದ್ಧತೆ ನಡೆಸಲಾಗಿದ್ದು, ಈ ಉದ್ದೇಶಕ್ಕಾಗಿ ಸಮಿತಿ ರಚಿಸಲಾಗಿದೆ. ಪ್ರತಿಮೆ ನಿರ್ಮಾಣ ಕಾರ್ಯಕ್ಕೆ ಸಮಾಜದ ಎಲ್ಲರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.
ಆಲಗೂರ ಲಕ್ಷ÷್ಮಣಮುತ್ಯಾ, ಮುತ್ತಿನಕಂತಿ ಮಠದ ಶಿವಲಿಂಗ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿ ಹಾಗೂ ಓಲೆಮಠದ ಆನಂದ ದೇವರು ಸಾನ್ನಿಧ್ಯ ವಹಿಸಿ ಆಶೀರ್ವಚನ ನೀಡಿದರು.
ಉದ್ಯಮಿ ಸಂಗಮೇಶ ನಿರಾಣಿ, ಬಸವರಾಜ ದಲಾಲ, ಸಿ.ಪಿ. ಜನವಾಡ, ಅಪ್ಪಾಸಾಹೇಬ ಜನಗೌಡ, ಸಂಗಣ್ಣ ಪಿಡಶೆಟ್ಟಿ, ಮಹಾಂತೇಶ ನರಸನಗೌಡ್ರ, ವಿನಾಯಕ ಕಾಸರ, ಸುನಿತಾ ಬಳಗಾರ, ಪ್ರಭು ಜನವಾಡ, ಸಂಗಮೇಶ ಕೌಜಲಗಿ ಸೇರಿ ಹಲವರು ಉಪಸ್ಥಿತರಿದ್ದರು.
ಚನ್ನಮ್ಮ ಬ್ಯಾಂಕ್ ಅಧ್ಯಕ್ಷ ಪ್ರಕಾಶಗೌಡ ಪಾಟೀಲ ಸ್ವಾಗತಿಸಿದರು. ಗಿರೀಶ ಮನಗೂಳಿ ನಿರೂಪಿಸಿದರು. ನ್ಯಾಯವಾದಿ ಪಿ.ಎಂ. ಝುಲಪಿ ವಂದಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net