ಇದೇ ವೇಳೆ ಕಾಲೇಜಿನ ವತಿಯಿಂದ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮತ್ತು ಹೃದ್ರೋಗ ತಜ್ಞ ಡಾ. ಗಿರೀಶ ನವಸುಂದಿ ಅವರನ್ನು ಸನ್ಮಾನಿಸಲಾಯಿತು. ಬಿವಿವಿ ಸಂಘದ ಗೌರವ ಕಾರ್ಯದರ್ಶಿ ಮಹೇಶ ಅಥಣಿ, ವೈದ್ಯಕೀಯ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಸಜ್ಜನ, ವೈದ್ಯಕೀಯ ಅಧೀಕ್ಷಕ ಡಾ. ಶ್ರೀರಾಮ ಕೋರಾ, ವಿದ್ಯಾರ್ಥಿ ಸಂಘದ ಉಪಾಧ್ಯಕ್ಷರಾದ ಡಾ. ಮಂಜುಳಾ ಪಾಟೀಲ ಮತ್ತು ಡಾ. ಮಹಾಂತೇಶ ಭೂತಲ್ ಮತ್ತಿತರರಿದ್ದರು.