ಬಾಗಲಕೋಟೆ ತಾಲೂಕಿನ ಬೇವಿನಮಟ್ಟಿ ಗ್ರಾಮದಲ್ಲಿ ಮೇಣದಬತ್ತಿ ಬೆಳಕಿನಲ್ಲಿ ಭಾರತ ನಕ್ಷೆ ಅರಳಿಸುವ ಮೂಲಕ ಮತದಾನ ಜಾಗೃತಿ ಮೂಡಿಸಲಾಯಿತು. ಜಿಲ್ಲಾಧಿಕಾರಿ ಸಂಗಪ್ಪ ಎಂ., ಸಿಇಒ ಶಶಿಧರ ಕುರೇರ, ಜಿ.ಪಂ. ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಜಿಲ್ಲಾಧಿಕಾರಿ ಸಂಗಪ್ಪ ಎಂ. ಹೇಳಿಕೆ
ಬೇವಿನಮಟ್ಟಿಯಲ್ಲಿ ಮತದಾನ ಜಾಗೃತಿ ಅಭಿಯಾನ
ಮೇಣದಬತ್ತಿ ಬೆಳಕಲ್ಲಿ ಅರಳಿದ ಭಾರತ ನಕ್ಷೆ
ಬಾಗಲಕೋಟೆ: ಮತದಾನ ಪ್ರಕ್ರಿಯೆ ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಹಬ್ಬದಲ್ಲಿ ಪ್ರತಿಯೊಬ್ಬ ಅರ್ಹ ಮತದಾರರು ತಪ್ಪದೇ ಪಾಲ್ಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸಂಗಪ್ಪ ಎಂ. ಹೇಳಿದರು.
ಜಿಲ್ಲಾ ಸ್ವೀಪ್ ವತಿಯಿಂದ ಬೇವಿನಮಟ್ಟಿಯಲ್ಲಿ ಹಮ್ಮಿಕೊಂಡ ಮತದಾನ ಜಾಗೃತಿ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಏ.9ರಂದು ನಡೆಯಲಿರುವ ಮತದಾನ ದಿನದಂದು ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕು ಚಲಾಯಿಸುವ ಮೂಲಕ ಪ್ರಜಾಪ್ರಭುತ್ವವನ್ನು ಸದೃಢಗೊಳಿಸಬೇಕು ಎಂದರು.
ಜಿಲ್ಲಾ ಸ್ವೀಪ್ ಸಮಿತಿ ನೋಡಲ್ ಅಧಿಕಾರಿ ಶಶಿಧರ ಕುರೇರ ಮಾತನಾಡಿ, ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಹಕ್ಕು ಚಲಾಯಿಸಬೇಕು. ತಮ್ಮ ಕುಟುಂಬ ವರ್ಗದವರಿಗೂ ಮತದಾನದ ಮಹತ್ವ ಕುರಿತು ತಿಳಿಸುವ ಮೂಲಕ ಮತದಾನ ಮಾಡುವ ನಿಟ್ಟಿನಲ್ಲಿ ಪ್ರೇರಣೆ ನೀಡಬೇಕು. ಉಪ ಚುನಾವಣೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವ ನಿಟ್ಟಿನಲ್ಲಿ ವಿನೂತನ ಮಾದರಿಯಲ್ಲಿ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಜಿ.ಪಂ. ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕ ಕೆ. ಪ್ರಭಾಕರ ಮತದಾನದ ಮಹತ್ವ ತಿಳಿಸುವ ಮೂಲಕ ಪ್ರತಿಯೊಬ್ಬರೂ ಮತದಾನ ಮಾಡಲು ಮುಂದಾಗಬೇಕು ಎಂದು ತಿಳಿಸಿದರು.
ಕಾರ್ಯಕ್ರಮದ ಆರಂಭದಲ್ಲಿ ಜಿಲ್ಲಾ ಸ್ವೀಪ್ ಸಮಿತಿಯು ಮತದಾನ ಜಾಗೃತಿ ಹಾಗೂ ಅರಿವು ಮೂಡಿಸುವುದಕ್ಕಾಗಿ ಮೇಣದ ಬತ್ತಿ ಬೆಳಕಿನಲ್ಲಿ ಭಾರತ ನಕ್ಷೆ ಅರಳಿಸುವ ಮೂಲಕ, ರಂಗೋಲಿಯಲ್ಲಿ ಭಾರತ ನಕ್ಷೆ ಬಿಡಿಸುವ ಮೂಲಕ ಮತದಾನದ ಅರಿವು ಮೂಡಿಸಲಾಯಿತು. ಇದರ ಜೊತೆಗೆ `ನಮ್ಮ ಮತ ಮಾರಾಟಕ್ಕಿಲ್ಲ' ಎಂದು ಬರೆದು ಮಹತದಾನದ ಮಹತ್ವ ಸಾರುವ ಕೆಲಸ ಮಾಡಲಾಯಿತು.
ಅಭಿಯಾನದಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಸುಭಾಷ ಸಂಪಗಾಂವಿ, ಆಡಳಿತಾದಿಕಾರಿ ಹಾಗೂ ತಾಲೂಕು ಸಮಾಜ ಕಲ್ಯಾಣಾಧಿಕಾರಿ ರವಿ ಇದ್ದಲಗಿ, ಸಹಾಯಕ ಯೋಜನಾಕಾರಿ ಭೀಮಪ್ಪ ತಳವಾರ ಸೇರಿ ಬೇವಿನಮಟ್ಟಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.