ಎಸ್‌ಐಆರ್ ಸಾಮಾನ್ಯ ಕೆಲಸ ಎಂದು ಭಾವಿಸಬೇಡಿ

ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಎಸ್‌ಐಆರ್ ಕುರಿತು ವಿಶೇಷ ತರಬೇತಿ ಕಾರ್ಯಾಗಾರವನ್ನು ಶಾಸಕ ಉಮೇಶ ಮೇಟಿ ಉದ್ಘಾಟಿಸಿದರು. ನಾಗರಾಜ ಹದ್ಲಿ, ಬಸವಂತಪ್ಪ ಮೇಟಿ, ಎಸ್.ಎನ್.ರಾಂಪುರ, ಮಲ್ಲಿಕಾರ್ಜುನ ಮೇಟಿ, ಎನ್.ಬಿ.ಗಸ್ತಿ ಮತ್ತಿತರರು ಇದ್ದರು.
ಬಾಗಲಕೋಟೆ ತಾಲೂಕಿನ ತಿಮ್ಮಾಪುರ ಗ್ರಾಮದಲ್ಲಿ ಶನಿವಾರ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಏರ್ಪಡಿಸಿದ್ದ ಎಸ್‌ಐಆರ್ ಕುರಿತು ವಿಶೇಷ ತರಬೇತಿ ಕಾರ್ಯಾಗಾರವನ್ನು ಶಾಸಕ ಉಮೇಶ ಮೇಟಿ ಉದ್ಘಾಟಿಸಿದರು. ನಾಗರಾಜ ಹದ್ಲಿ, ಬಸವಂತಪ್ಪ ಮೇಟಿ, ಎಸ್.ಎನ್.ರಾಂಪುರ, ಮಲ್ಲಿಕಾರ್ಜುನ ಮೇಟಿ, ಎನ್.ಬಿ.ಗಸ್ತಿ ಮತ್ತಿತರರು ಇದ್ದರು.
Published on
ಬಾಗಲಕೋಟೆ: ಮತದಾರರ ಪಟ್ಟಿಯ ವಿಶೇಷ ತೀವೃ ಪರಿಷ್ಕರಣೆಯಲ್ಲಿ ಯಾವುದೇ ಅರ್ಹ ಮತದಾರರ ಹೆಸರು ಮತದಾರರ ಪಟ್ಟಿಯಿಂದ ಕೈಬಿಟ್ಟು ಹೋಗದಂತೆ ಬೂತ ಅಧ್ಯಕ್ಷರು, ಏಜಂಟರು ಹಾಗೂ ಕಾರ್ಯಕರ್ತರು ವಿಶೇಷ ಕಾಳಜಿ ವಹಿಸಿ ಕೆಲಸ ಮಾಡಬೇಕು. ಎಸ್‌ಐಆರ್ ಪ್ರಕ್ರಿಯೆ ಒಂದು ಸಾಮಾನ್ಯ ಕೆಲಸ ಎಂದು ಯಾರೂ ಭಾವಿಸಬಾರದು ಎಂದು ಶಾಸಕ ಉಮೇಶ ಮೇಟಿ ಕಾಂಗ್ರೆಸ್ ಕಾರ್ಯಕರ್ತರಿಗೆ ಸಲಹೆ ನೀಡಿದರು.
ಬಾಗಲಕೋಟೆ ಕ್ಷೇತ್ರದ ತಿಮ್ಮಾಪುರ ಗ್ರಾಮದಲ್ಲಿ ಎಸ್‌ಐಆರ್ ಕುರಿತು ಪಕ್ಷದ ಕಾರ್ಯಕರ್ತರಿಗೆ ಶನಿವಾರ ಏರ್ಪಡಿಸಿದ್ದ ವಿಶೇಷ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದರು.
ಪ್ರಜಾಪ್ರಭುತ್ವದಲ್ಲಿ ಮತದಾರನೇ ಅತ್ಯಂತ ದೊಡ್ಡ ಶಕ್ತಿ. ಪ್ರತಿಯೊಬ್ಬ ಅರ್ಹ ಮತದಾರನ ಮತ ದೇಶದ ಭವಿಷ್ಯವನ್ನು ರೂಪಿಸುವ ಅಮೂಲ್ಯ ಹಕ್ಕಾಗಿದೆ. ಆದ್ದರಿಂದ ಯಾವುದೇ ಅರ್ಹ ಮತದಾರನ ಹೆಸರೂ ಮತದಾರರ ಪಟ್ಟಿಯಿಂದ ಕೈಬಿಡದಂತೆ ಎಚ್ಚರ ವಹಿಸಬೇಕು. ಇದು ಪ್ರತಿಯೊಬ್ಬ ಮತದಾರನ ಹಕ್ಕನ್ನು ಸಂರಕ್ಷಿಸುವ ಅತ್ಯಂತ ಮಹತ್ವದ ಜವಾಬ್ದಾರಿಯಾಗಿದೆ ಎಂದು ತಿಳಿಸಿದರು.
ಪ್ರತಿಯೊಬ್ಬ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಪರಿಶೀಲಿಸಬೇಕು. ಹೊಸದಾಗಿ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ ಅಥವಾ ಕೈಬಿಟ್ಟಿರುವ ಹೆಸರುಗಳಿದ್ದರೆ ಕೂಡಲೇ ಅಗತ್ಯ ದಾಖಲೆಗಳನ್ನು ಸಂಗ್ರಹಿಸಿ ಸಂಬAಽಸಿದ ಅಽಕಾರಿಗಳ ಮೂಲಕ ಸರಿಪಡಿಸಬೇಕು. ಮತದಾರರಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಿ, ಯಾವುದೇ ಗೊಂದಲ ಉಂಟಾಗದAತೆ ಮಾರ್ಗದರ್ಶನ ನೀಡಬೇಕು. ನಮ್ಮ ಮತದಾರರ ಹಕ್ಕನ್ನು ಕಾಪಾಡುವುದು ಕಾಂಗ್ರೆಸ್ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತನ ಹೊಣೆಗಾರಿಕೆಯಾಗಿದೆ. ಎಲ್ಲರೂ ಒಗ್ಗಟ್ಟಿನಿಂದ, ಪ್ರಾಮಾಣಿಕವಾಗಿ ಹಾಗೂ ಬದ್ಧತೆಯಿಂದ ಕಾರ್ಯನಿರ್ವಹಿಸಿ ಈ ಅಭಿಯಾನವನ್ನು ಯಶಸ್ವಿಗೊಳಿಸಬೇಕು ಎಂದು ಹೇಳಿದರು .
ಪಕ್ಷದ ಮುಖಂಡ ಎನ್.ಬಿ.ಗಸ್ತಿ ಮಾತನಾಡಿ, ಎಸ್‌ಐಆರ್ ಪ್ರಕ್ರಿಯೆಯನ್ನು ಯಾವುದೇ ಕಾರಣಕ್ಕೂ ನಿರ್ಲಕ್ಷ್ಯ ಮಾಡಬಾರದು. ಇದು ಕೇವಲ ಚುನಾವಣಾ ಪ್ರಕ್ರಿಯೆಯಲ್ಲ, ಪ್ರತಿಯೊಬ್ಬ ನಾಗರಿಕನ ಮತದಾನದ ಹಕ್ಕನ್ನು ರಕ್ಷಿಸುವ ಮಹತ್ವದ ಅಭಿಯಾನವಾಗಿದೆ. ಎಲ್ಲ ಬೂತ್ ಅಧ್ಯಕ್ಷರು, ಬೂತ್ ಏಜೆಂಟರು ಹಾಗೂ ಕಾರ್ಯಕರ್ತರು ತಮ್ಮ ವ್ಯಾಪ್ತಿಯ ಪ್ರತಿಯೊಂದು ಮನೆಗೆ ಭೇಟಿ ನೀಡಿ ಮತದಾರರ ಪಟ್ಟಿಯನ್ನು ಸೂಕ್ಷ÷್ಮವಾಗಿ ಪರಿಶೀಲಿಸಬೇಕು. ಯಾರ ಹೆಸರು ಕೈಬಿಟ್ಟಿದ್ದರೂ, ಹೊಸದಾಗಿ ಸೇರ್ಪಡೆ ಮಾಡಿಸಬೇಕಿದ್ದರೂ ಅಥವಾ ತಿದ್ದುಪಡಿ ಅಗತ್ಯವಿದ್ದರೂ ಕೂಡಲೇ ಅಗತ್ಯ ದಾಖಲೆಗಳನ್ನು ಪಡೆದು ಸಂಬAಽಸಿದ ಅಽಕಾರಿಗಳ ಮೂಲಕ ಕ್ರಮ ಕೈಗೊಳ್ಳಬೇಕು. ಜನರಲ್ಲಿ ಎಸ್‌ಐಆರ್ ಕುರಿತು ಇರುವ ಗೊಂದಲಗಳನ್ನು ನಿವಾರಿಸಿ, ಯಾವುದೇ ಅರ್ಹ ಮತದಾರ ಮತದಾನದ ಹಕ್ಕಿನಿಂದ ವಂಚಿತರಾಗದAತೆ ನೋಡಿಕೊಳ್ಳಬೇಕು. ತಳಮಟ್ಟದಲ್ಲಿ ಶ್ರದ್ಧೆಯಿಂದ ಕೆಲಸ ಮಾಡಿದರೆ ಮಾತ್ರ ಪಕ್ಷ ಮತ್ತಷ್ಟು ಬಲಿಷ್ಠವಾಗುತ್ತದೆ ಎಂದು ತಿಳಿಸಿದರು.
ಜಿಪಂ ಮಾಜಿ ಅಧ್ಯಕ್ಷ ಬಸವಂತಪ್ಪ ಮೇಟಿ, ಮಲ್ಲಿಕಾರ್ಜುನ ಮೇಟಿ, ಪ್ರಚಾರ ಸಮಿತಿಯ ಜಿಲ್ಲಾಧ್ಯಕ್ಷ ನಾಗರಾಜ ಹದ್ಲಿ, ಪ್ರಭು ಹಳ್ಳೂರ, ಬ್ಲಾಕ ಅಧ್ಯಕ್ಷ ಎಸ್.ಎನ್.ರಾಂಪುರ, ರಮೇಶ್ ಕೊಳ್ಳಾರ, ಜಟ್ಟಪ್ಪ ಮಾದಾಪುರ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net