ಡಾ. ದೇವರಾಜ್, ಏಳಮ್ಮಿ, ಸಿದ್ದಾಪುರ ಬಿಜೆಪಿ ತೆಕ್ಕೆಗೆ

ಬಾಗಲಕೋಟೆ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಡಾ.ದೇವರಾಜ ಪಾಟೀಲ, ದುಂಡಪ್ಪ ಏಳಮ್ಮಿ, ಕುರುಬ ಸಮಾಜದ ಜಿಲ್ಲಾಧ್ಯಕ್ಷ ಡಿ.ಬಿ.ಸಿದ್ದಾಪುರ ಸೇರಿದಂತೆ ಅನೇಕ ಕಾರ್ಯಕರ್ತರು ಬಿಜೆಪಿ ಸರ‍್ಪಡೆಯಾದರು. ಸಂಸದ ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮತ್ತಿತರರು ಇದ್ದರು.
ಬಾಗಲಕೋಟೆ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಭಾನುವಾರ ಸಂಜೆ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಸಮ್ಮುಖದಲ್ಲಿ ಡಾ.ದೇವರಾಜ ಪಾಟೀಲ, ದುಂಡಪ್ಪ ಏಳಮ್ಮಿ, ಕುರುಬ ಸಮಾಜದ ಜಿಲ್ಲಾಧ್ಯಕ್ಷ ಡಿ.ಬಿ.ಸಿದ್ದಾಪುರ ಸೇರಿದಂತೆ ಅನೇಕ ಕಾರ್ಯಕರ್ತರು ಬಿಜೆಪಿ ಸರ‍್ಪಡೆಯಾದರು. ಸಂಸದ ಗೋವಿಂದ ಕಾರಜೋಳ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಪಕ್ಷದ ಧ್ವಜ ನೀಡಿ ಬರಮಾಡಿಕೊಂಡು ಬಿಜೆಪಿ ರಾಜ್ಯಾಧ್ಯಕ್ಷ
  • ನೂರಾರು ಕಾರ್ಯಕರ್ತರನ್ನು ಪಕ್ಷಕ್ಕೆ ಸರ‍್ಪಡೆ ಮಾಡಿಕೊಂಡು ವಿಜಯೇಂದ್ರ
ಬಾಗಲಕೋಟೆ: ಬಾಗಲಕೋಟೆ ಉಪ ಚುನಾವಣೆ ಅಖಾಡ ರಂಗೇರಿದ್ದು, ಇದೀಗ ಬಿಜೆಪಿಗೆ ಆಗಮಿಸುವ ಮುಖಂಡರು ಮತ್ತು ಕಾರ್ಯಕರ್ತರ ಸಂಖ್ಯೆ ಹೆಚ್ಚುತ್ತಲೇ ಇದೆ.
ಭಾನುವಾರ ರಾತ್ರಿ ನವನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸಮ್ಮುಖದಲ್ಲಿ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಪಕ್ಷ ಸರ‍್ಪಡೆಯಾದರು.
ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ಡಿ.ಬಿ.ಸಿದ್ದಾಪುರ, ಕಳೆದ ವಿಧಾನಸಭೆ ಕ್ಷೇತ್ರದಲ್ಲಿ ಜೆಡಿಎಸ್‌ನಿಂದ ಸ್ಪರ್ಧೆ ಮಾಡಿದ್ದ ಡಾ.ದೇವರಾಜ ಪಾಟೀಲ, ಕಾಂಗ್ರೆಸ್ ಮುಖಂಡ ದುಂಡಪ್ಪ ಏಳಮ್ಮಿ, ಚೆನ್ನಪ್ಪ ಮಾಚಕನೂರ, ರಾಹುಲ್ ಚವ್ಹಾಣ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರಿದರು. ಅಮೀನಗಡ ಭಾಗದ ರಾಹುಲ್ ಚವಾಣ್‌ ನೇತೃತ್ವದಲ್ಲಿ ಅವರ ಬೆಂಬಲಿಗರು ಸಹ ಬಿಜೆಪಿಗೆ ಜೈಕಾರ ಹಾಕಿದರು.
ಈ ವೇಳೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಡಾ.ದೇವರಾಜ ಪಾಟೀಲ, ದುಂಡಪ್ಪ ಏಳಮ್ಮಿ, ಹಾಲುಮತ ಸಮಾಜದ ಜಿಲ್ಲಾಧ್ಯಕ್ಷ ಡಿ.ಬಿ.ಸಿದ್ದಾಪುರ ಅವರು ಬಿಜೆಪಿ ಸೇರಿದ್ದಕ್ಕೆ ಬಹಳ ಖುಷಿ ತಂದಿದೆ. ಸಾಕಷ್ಟು ಕಾರ್ಯಕರ್ತರು ಬಿಜೆಪಿಗೆ ಬಂದಿದ್ದು, ಇದರಿಂದ ಬಾಗಲಕೋಟೆ ಮತಕ್ಷೇತ್ರದಲ್ಲಿ ಸಾಕಷ್ಟು ಬದಲಾವಣೆ ಕಾಣಲಿದೆ. ಪಕ್ಷ ಇವರೆಲ್ಲರನ್ನು ಗೌರವದಿಂದ ಕಾಣುತ್ತದೆ ಎಂದರು.
ಸೋಮವಾರ ನಾಮಪತ್ರ ಸಲ್ಲಿಸಲು ಕ್ಷೇತ್ರದಿಂದ ಸಾವಿರಾರು ಜನರು ಭಾಗವಹಿಸಬೇಕು. ಕ್ಷೇತ್ರದ ಮತದಾರರು ಈ ನಾಲಾಯಕ್ ಕಾಂಗ್ರೆಸ್ ಸರ್ಕಾರವನ್ನು ಕಿತ್ತೊಗೆಯುವ ಕೆಲಸವನ್ನು ಮಾಡಬೇಕು. ಪಕ್ಷದ ಕಾರ್ಯಕರ್ತರು ಮತದಾನದ ಕೊನೆ ಕ್ಷಣದ ವರೆಗೂ ಶ್ರಮವಹಿಸಿ ಕೆಲಸ ಮಾಡುವ ಮೂಲಕ ಬಿಜೆಪಿ ಗೆಲ್ಲಿಸಬೇಕು ಎಂದರು.
ಡಾವಣಗೇರಿ ಮತ್ತು ಬಾಗಲಕೋಟೆ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ದೊಡ್ಡ ಅಂತರದಲ್ಲಿ ಗೆಲುವು ಪಡೆಯಲಿದೆ. ಗೆಲುವಿಗಾಗಿ ಎಲ್ಲರೂ ಸೇರಿ ಶ್ರಮಿಸುವಂತೆ ಬಿ.ಎಸ್.ಯಡಿಯೂರಪ್ಪ ಅವರು ತಿಳಿಸಿದ್ದಾರೆ ಎಂದು ಹೇಳಿದರು.

ಕಾಂಗ್ರೆಸ್ ಸರ್ಕಾರದ ವೈಫಲ್ಯವೇ ಅಭ್ಯರ್ಥಿಗಳಿಗೆ ದೊಡ್ಡ ಅಸ್ತ್ರ

ಇದಕ್ಕೂ ಮುನ್ನ ಬಿಜೆಪಿ ಮಾಧ್ಯಮ ಕೇಂದ್ರ ಉದ್ಘಾಟಿಸಿ ಮಾತನಾಡಿದ ವಿಜಯೇಂದ್ರ, ರಾಜ್ಯ ಸರ್ಕಾರದ ಜನವಿರೋಧಿ ನೀತಿಯಿಂದ ಜನರು ಬೇಸತ್ತಿದ್ದು, ಪಾಠ ಕಲಿಸಲು ಕಾಯುತ್ತಿದ್ದಾರೆ. ಅದರ ಪರಿಣಾಮ ಉಪ ಚುನಾವಣೆಯ ಎರಡೂ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಲಿದೆ ಎಂದರು.
ಕಾಂಗ್ರೆಸ್ ರೈತ, ಬಡವರ ವಿರೋಧಿ ಸರ್ಕಾರವಾಗಿದೆ. ಯುವಜನರ ಭವಿಷ್ಯ ಹಾಳು ಮಾಡಿದೆ. ಹಿಂದೂ ವಿರೋಧಿ ನೀತಿ ಅನುಸರಿಸುತ್ತಿದೆ. ಸರ್ಕಾರದ ವೈಫಲ್ಯವೇ ಬಿಜೆಪಿ ಅಭ್ಯರ್ಥಿಗಳಿಗೆ ಬಹುದೊಡ್ಡ ಅಸ್ತ್ರವಾಗಲಿದೆ. ಬಿಜೆಪಿ ಕಾರ್ಯಕರ್ತರು ಹುಮ್ಮಸ್ಸಿನಿಂದ ಕೆಲಸ ಮಾಡಲಿದ್ದು, ಎರಡು ಕಡೆಗೂ ಗೆಲುವು ಸಾಧಿಸಲಿದೆ ಎಂದು ತಿಳಿಸಿದರು.
ಸಂಸದ ಗೋವಿಂದ ಕಾರಜೋಳ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ಮುಖಂಡರಾದ ಎಂ.ಡಿ.ಲಕ್ಷ್ಮೀನಾರಾಯಣ, ಅರುಣ ಶಹಾಪುರ, ಪಿ.ರಾಜೀವ್, ಎಂ.ಕೆ.ಪಟ್ಟಣಶೆಟ್ಟಿ, ಜಿಲ್ಲಾಧ್ಯಕ್ಷ ಶಾಂತಗೌಡ ಪಾಟೀಲ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net