ಡಾ.ಹಳಕಟ್ಟಿಯವರ ಸೇವೆ ಅವಿಸ್ಮರಣೀಯ

ಬಾಗಲಕೋಟೆಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಡಾ.ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ಉದ್ಘಾಟಿಸಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲ ದಡ್ಡಿ, ಜಿಲ್ಲಾಽಕಾರಿ ಸಂಗಪ್ಪ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಮತ್ತಿತರರಿದ್ದರು.
ಬಾಗಲಕೋಟೆಯ ಸರ್ಕಾರಿ ಆದರ್ಶ ವಿದ್ಯಾಲಯದಲ್ಲಿ ಜಿಲ್ಲಾಡಳಿತ, ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಆಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಡಾ.ಫ.ಗು.ಹಳಕಟ್ಟಿ ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ಉದ್ಘಾಟಿಸಿದರು. ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲ ದಡ್ಡಿ, ಜಿಲ್ಲಾಽಕಾರಿ ಸಂಗಪ್ಪ, ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ಹೇಳಿಕೆ
  • ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಣೆ
ಬಾಗಲಕೋಟೆ: ಕನ್ನಡ ಭಾಷೆ, ಸಾಹಿತ್ಯ, ಸಂಸ್ಕೃತಿ ಹಾಗೂ ಐತಿಹಾಸಿಕ ಪರಂಪರೆಯ ಸಂರಕ್ಷಣೆಯಲ್ಲಿ ಡಾ.ಫ.ಗು.ಹಳಕಟ್ಟಿ ಅವರ ಸೇವೆ ಅವಿಸ್ಮರಣೀಯವಾಗಿದೆ ಎಂದು ವಿಧಾನ ಪರಿಷತ್ ಶಾಸಕ ಪಿ.ಎಚ್.ಪೂಜಾರ ತಿಳಿಸಿದರು.
ನವನಗರದ ಸರ್ಕಾರಿ ಆದರ್ಶ ವಿದ್ಯಾಲಯದ ಸಭಾಭವನದಲ್ಲಿ ಗುರುವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಡಾ.ಫ.ಗು.ಹಳಕಟ್ಟಿಯವರ ಜನ್ಮದಿನದ ಅಂಗವಾಗಿ ಹಮ್ಮಿಕೊಂಡಿದ್ದ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಡಾ.ಹಳಕಟ್ಟಿ ಅವರು ತಮ್ಮ ವಕೀಲ ವೃತ್ತಿಯ ಜೊತೆಗೆ ಕನ್ನಡ ನಾಡು, ನುಡಿ, ಸಾಹಿತ್ಯ ಮತ್ತು ಸಾಂಸ್ಕೃತಿಕ ಪರಂಪರೆಯ ಉಳಿವು ಬೆಳವಣಿಗೆಗಾಗಿ ಅವರ ಜೀವನವೀಡಿ ನಡೆಸಿದ ಶ್ರಮ ಇಂದಿನ ಪೀಳಿಗೆಗೆ ಆದರ್ಶವಾಗಿದೆ. ಅವರ ಸಾಧನೆಗಳು ಕನ್ನಡಿಗರಿಗೆ ಸದಾ ಸ್ಪೂರ್ತಿದಾಯಕವಾಗಿದ್ದು, ಅವರ ಆದರ್ಶಗಳನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ದಾಖಲೆಗಳು ಮನೆಗೆ ಸೀಮಿತವಾಗಿರಿಸದೇ ಹೊರ ಪ್ರಪಂಚಕ್ಕೆ ತರುವ ಕೆಲಸ ಮಾಡಿದ್ದಾರೆ ಎಂದು ತಿಳಿಸಿದರು.
ಜಿಲ್ಲಾಽಕಾರಿ ಸಂಗಪ್ಪ ಮಾತನಾಡಿ, ಒಂದು ರಾಷ್ಟçದ ನಿಜವಾದ ಸಂಪತ್ತು ಅದರ ಸಂಸ್ಕೃತಿ, ಭಾಷೆ ಮತ್ತು ಸಾಹಿತ್ಯದಲ್ಲಿದೆ. ಆ ಅಮೂಲ್ಯ ಸಂಪತ್ತನ್ನು ಮುಂದಿನ ಪೀಳಿಗೆಗೆ ಉಳಿಸುವ ಕಾರ್ಯವೇ ಅತ್ಯಂತ ಶ್ರೇಷ್ಠ ಸೇವೆಯಾಗಿದೆ. ಈ ಸೇವೆಯನ್ನು ತಮ್ಮ ಜೀವನದ ಧ್ಯೇಯವನ್ನಾಗಿ ಮಾಡಿಕೊಂಡವರು ಡಾ.ಫ.ಗು. ಹಳಕಟ್ಟಿಯವರು. ಬಸವಾದಿ ಶರಣರ ಸಾವಿರಾರು ವಚನಗಳು ಕಾಲಗರ್ಭದಲ್ಲಿ ಮರೆಯಾಗುತ್ತಿದ್ದ ಸಂದರ್ಭದಲ್ಲಿ ಊರುರು ಸುತ್ತಿ ಮಠ-ಮಂದಿರಗಳು ಹಾಗೂ ಖಾಸಗಿ ಮನೆಗಳಲ್ಲಿ ಸಂಗ್ರಹವಾಗಿದ್ದ ತಾಳೆಗರಿಗಳು ಮತ್ತು ಹಸ್ತಪ್ರತಿಗಳನ್ನು ಹುಡುಕಿ ಅವುಗಳನ್ನು ಸಂರಕ್ಷಿಸಿ, ಮುದ್ರಿಸಿ ಕನ್ನಡ ಸಾಹಿತ್ಯಕ್ಕೆ ಅಪೂರ್ವ ಕೊಡುಗೆ ನೀಡಿದ್ದಾರೆ ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿಯ ಅಧ್ಯಕ್ಷ ಅನೀಕುಮಾರ ದಡ್ಡಿ ಮಾತನಾಡಿ, ಶರಣರು, ಮಹನೀಯರು ತಮ್ಮ ವಚನ ಸಾಹಿತ್ಯದ ಮೂಲಕ ಸಮಾಜವನ್ನು ತಿದ್ದುವ ಕೆಲಸ ಮಾಡಿದ್ದಾರೆ. ನಶಿಸಿ ಹೋಗುತ್ತಿರುವ ಸಾಹಿತ್ಯದ ಅಮೂಲ್ಯ ಸಂಪತ್ತನ್ನು ದಾಖಲಿಸುವ ಕೆಲಸ ಡಾ.ಫ.ಗು ಹಳಕಟ್ಟಿಯವರು ಮಾಡಿದ್ದಾರೆ. ಅವರು ಹಾಕಿಕೊಟ್ಟ ಹಾದಿಯಲ್ಲಿ ನಾವೆಲ್ಲರೂ ನಡೆದುಕೊಳ್ಳಬೇಕಿದೆ. ಅಂದಾಗ ಮಾತ್ರ ಅವರ ಹೆಸರಿನಲ್ಲಿ ದಿನಾಚರಣೆಯನ್ನು ಆಚರಿಸಿದಕ್ಕೆ ಸಾರ್ಥಕವಾಗುತ್ತದೆ ಎಂದು ತಿಳಿಸಿದರು.
ಕನ್ನಡ ಸಾಹಿತ್ಯ ಮತ್ತು ಸಂಸ್ಕೃತಿಯ ಮಹತ್ವ, ಪರಂಪರೆಯ ಮೌಲ್ಯ ಹಾಗೂ ಮುಂದಿನ ಪೀಳಿಗೆಗೆ ಅದನ್ನು ಉಳಿಸಿ ಬೆಳೆಸುವ ಅಗತ್ಯತೆಯ ಕುರಿತು ಗುಳೇದಗುಡ್ಡ ನಿವೃತ್ತ ಪ್ರಾಚಾರ್ಯ ಸಿದ್ದಲಿಂಗಪ್ಪ ಬರಗುಂಡಿ ವಿಶೇಷ ಉಪನ್ಯಾಸ ನೀಡಿದರು. ಡಾ.ಹಳಕಟ್ಟಿಯವ ವಚನ ಸಾಹಿತ್ಯ ಸಂರಕ್ಷಣಾ ದಿನಾಚರಣೆ ಅಂಗವಾಗಿ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡ ಪ್ರಬಂಧ ಹಾಗೂ ಭಾಷಣ ಸ್ಪಧೆಯಲ್ಲಿ ವಿಜೇತರಾದವರಿಗೆ ಪ್ರಮಾಣ ಪತ್ರ ಹಾಗೂ ಪುಸ್ತಕದ ರೂಪದ ಬಹುಮಾನ ವಿತರಣೆ ಮಾಡಲಾಯಿತು.
ಆಹಾರ ಇಲಾಖೆ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಶಾಲಾ ಶಿಕ್ಷಣ ಇಲಾಖೆ ಉಪನಿರ್ದೇಶಕ ಎ.ಜಿ.ಮನ್ನಿಕೇರಿ, ಸರ್ಕಾರಿ ಆದರ್ಶ ವಿದ್ಯಾಲಯದ ಪ್ರಾಚಾರ್ಯ ವೀರೇಶ ಪತ್ತಾರ, ವೈದ್ಯ ಡಾ.ಎಂ.ಎಸ್.ದಡ್ಡೇನವರ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net