ಅಲೆಮಾರಿ ಅರೆ ಅಲೆಮಾರಿ ಜನರಿಗೆ ಸೌಲಭ್ಯ ತಲುಪಿಸಿ

ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಅಲೆಮಾರಿ ಅರೆ ಅಲೆಮಾರಿ ಜನಾಂಗದವರು ಕುಂದು ಕೊರತೆ ಸಭೆ ನಡೆಯಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಎಂ.ಜಗದೀಶ, ವಿವಿಧ ಇಲಾಖೆ ಅಽಕಾರಿಗಳು ಇದ್ದರು.
ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾಽಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಅಲೆಮಾರಿ ಅರೆ ಅಲೆಮಾರಿ ಜನಾಂಗದವರು ಕುಂದು ಕೊರತೆ ಸಭೆ ನಡೆಯಿತು. ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಎಂ.ಜಗದೀಶ, ವಿವಿಧ ಇಲಾಖೆ ಅಽಕಾರಿಗಳು ಇದ್ದರು.
Published on
ಬಾಗಲಕೋಟೆ: ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಅಭಿವೃದ್ಧಿಗೆ ಸರ್ಕಾರದ ವಿವಿಧ ಯೋಜನೆಗಳನ್ನು ತಲುಪಿಸುವಲ್ಲಿ ಇಲಾಖೆಗಳು ಸಮನ್ವಯದಿಂದ ಕಾರ್ಯವಾಗಬೇಕೆಂದು ಜಿಲ್ಲಾಽಕಾರಿ ಸಂಗಪ್ಪ ಅವರು ಅಽಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾಽಕಾರಿಗಳ ಸಭಾಂಗಣದಲ್ಲಿ ಗುರುವಾರ ಜರುಗಿದ ಅಲೆಮಾರಿ ಹಾಗೂ ಅರೆ ಅಲೆಮಾರಿ ಜನಾಂಗದವರ ಕುಂದು ಕೊರತೆ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಸಮುದಾಯದ ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಗಳ ಸೌಲಭ್ಯಗಳಿಂದ ಯಾವುದೇ ಕಾರಣಕ್ಕೂ ವಂಚಿತರಾಗದAತೆ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಽಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಯೋಜನೆಗಳಿಗೆ ಸಂಬAಽಸಿದ ಅರ್ಜಿಗಳನ್ನು ನಿಗಽತ ಅವಽಯಲ್ಲಿ ವಿಲೇವಾರಿ ಮಾಡಿ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ನಿಟ್ಟಿನಲ್ಲಿ ಕ್ರಮಕೈಗೊಳ್ಳಲು ತಿಳಿಸಿದರು.
ಜಿಲ್ಲೆಯಲ್ಲಿ ಅಲೆಮಾರಿ ಹಾಗೂ ಅಲೆ ಅಲೆಮಾರಿ ಜನಾಂಗದ ಮಕ್ಕಳ ಶಿಕ್ಷಣಕ್ಕೆ ವಿಶೇಷ ಆದ್ಯತೆ ನೀಡಬೇಕು. ಆರೋಗ್ಯ ತಪಾಸಣೆ, ವಸತಿ ಹಾಗೂ ಜೀವನೋಪಾಯಕ್ಕೆ ಸಂಬAಽಸಿದ ಯೋಜನೆಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಿ ಸಮುದಾಯದ ಜೀವನಮಟ್ಟ ಸುಧಾರಣೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಸಣ್ಣ ಪುಟ್ಟ ಉದ್ಯೋಗ ಕೈಗೊಳ್ಳಲು ಬ್ಯಾಂಕ್‌ಗಳ ಮೂಲಕ ಸಾಲ ವಿತರಣೆಗೆ ಮುಂದಾಗುವAತೆ ಸಭೆಯಲ್ಲಿದ್ದ ಜಿಲ್ಲಾ ಅಗ್ರಣಿ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ರಾಜಕುಮಾರ ಹೂಗಾರ ಜಿಲ್ಲಾಽಕಾರಿಗಳು ಹೇಳಿದರು.
ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಽಕಾರಿ ಪಂಕಜ ಮಾತನಾಡಿ, ಕಳೆದ ೨೦೨೫-೨೬ನೇ ಸಾಲಿನಲ್ಲಿ ಅಲೆಮಾರಿ, ಅರೆ ಅಲೆಮಾರಿ ಜನಾಂಗಕ್ಕೆ ಸೇರಿದ ೧ ರಿಂದ ೮ನೇ ವಿದ್ಯಾರ್ಥಿಗಳಿಗೆ ಪ್ರತಿ ಪ್ರತಿ ತಿಂಗಳು ೨ ಸಾವಿರ ರೂ. ೯ ರಿಂದ ೧೦ನೇ ತರಗತಿ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳು ೪ ಸಾವಿರ ರೂ.ಗಳಂತೆ ಒಟ್ಟು ೪೮೪ ವಿದ್ಯಾರ್ಥಿಗಳಿಗೆ ಪ್ರೋತ್ಸಾಹಧನ ಹಾಗೂ ಮೆಟ್ರಿಕ್ ನಂತರ ಪಿಯುಸಿ, ಡಿಪ್ಲೋಮಾ, ಪದವಿ, ಬಿಇ, ಎಂಬಿಬಿಎಸ್, ಬಿಡಿಎಸ್ ಹಾಗೂ ಇನ್ನಿತರ ವೃತ್ತಿಪರ ಕೋರ್ಸಗಳಲ್ಲಿ ಅಭ್ಯಾಸ ಮಾಡುತ್ತಿರುವ ೨೬೪ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ವಸತಿ ಯೋಜನೆಯಡಿ ೬೩ ಮನೆಗಳ ಗುರಿ ಹೊಂದಲಾಗಿದ್ದು, ಇದರ ಜೊತೆಗೆ ಮೂಲಭೂತ ಸೌಕರ್ಯ, ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ತಿಳಿಸಿದರು.
ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಸದಾಶಿವ ಬಡಿಗೇರ ಮಾತನಾಡಿ, ಪರಿಶಿಷ್ಟ ಜಾತಿಯ ಅಲೆಮಾರಿ ಸಮುದಾಯದ ಜನಸಂಖ್ಯೆ ೩೫೨೬೫ ಇದ್ದರೆ, ಪರಿಶಿಷ್ಟ ಪಂಗಡದ ಅಲೆಮಾರಿ ಜನಸಂಖ್ಯೆ ಒಟ್ಟು ೪೨೫೭ ಇದೆ. ಸದರಿ ಸಮುದಾಯಕ್ಕೆ ಅಲೆಮಾರಿ ಅಭಿವೃದ್ಧಿ ನಿಗಮದಡಿ ೨೦೨೫-೨೬ನೇ ಸಾಲಿಗೆ ಪರಿಶಿಷ್ಟ ಜಾತಿಯ ಅಲೆಮಾರಿ ಜನಾಂಗಕ್ಕೆ ಸಾರಥಿ ಯೊಜನೆ, ನೇರಸಾಲ, ಉದ್ಯಮ ಶೀಲತಾ ಯೋಜನೆ, ಮೈಕ್ರೋ ಕ್ರೆಡಿಟ್, ಗಂಗಾ ಕಲ್ಯಾಣ, ಭೂ ಒಡೆತನ ಸೇರಿದಂತೆ ವಿವಿಧ ಯೋಜನೆಯಡಿ ಒಟ್ಟು ೮೪ ಫಲಾನುಭವಿಗಳಿಗೆ ಸೌಲಭ್ಯ ನೀಡಿದರೆ, ಪರಿಶಿಷ್ಟ ಪಂಗಡದ ಅಲೆಮಾರಿ ಜನಾಂಗದ ೧೨ ಫಲಾನುಭವಿಗಳಿಗೆ ಸೌಲಭ್ಯ ಒದಗಿಸಲಾಗಿದೆ ಎಂದು ವಿವರಿಸಿದರು.
ಸಭೆಯಲ್ಲಿ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಗಜಾನನ ಬಾಲೆ, ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಽಕಾರಿ ಎಂ.ಜಗದೀಶ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಮಂಜುನಾಥ ಡಿ ಸೇರಿದಂತೆ ಅಲೆಮಾರಿ ಮತ್ತು ಅರೆ ಅಲೆಮಾರಿ ಸಮುದಾಯದ ಪ್ರತಿನಿಽಗಳು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net