ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರ ವಹಿಸಿ

ಬಾಗಲಕೋಟೆ ಜಿಲ್ಲೆ ಬೀಳಗಿ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಽಕಾರಿ ಸಂಗಪ್ಪ ಅವರು ಮತದಾರರ ಪಟ್ಟಿಯ ವಿಶೆಷ ಸಮಗ್ರ ಪರಿಷ್ಕರಣೆ ಕಾರ್ಯದ ಸಿಬ್ಬಂದಿ ಕಾರ್ಯವೈಖರಿ ಹಾಗೂ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿ
ಬಾಗಲಕೋಟೆ ಜಿಲ್ಲೆ ಬೀಳಗಿ ತಹಸೀಲ್ದಾರ ಕಚೇರಿಗೆ ಭೇಟಿ ನೀಡಿದ ಜಿಲ್ಲಾಽಕಾರಿ ಸಂಗಪ್ಪ ಅವರು ಮತದಾರರ ಪಟ್ಟಿಯ ವಿಶೆಷ ಸಮಗ್ರ ಪರಿಷ್ಕರಣೆ ಕಾರ್ಯದ ಸಿಬ್ಬಂದಿ ಕಾರ್ಯವೈಖರಿ ಹಾಗೂ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿ
Published on
ಬಾಗಲಕೋಟೆ: ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆಗೆ ನೇಮಿಸಲಾಗಿರುವ ಹೆಚ್ಚುವರಿ ಸಹಾಯಕ ಮತದಾರರ ನೋಂದಣಾಕಾರಿಗಳು, ಯಾವುದೇ ಅರ್ಹ ಮತದಾರರು ಮತದಾರರ ಪಟ್ಟಿಯಿಂದ ಹೊರಗುಳಿಯದಂತೆ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಽಕಾರಿ ಸಂಗಪ್ಪ ಸೂಚಿಸಿದರು.
ಮತದಾರರ ಪಟ್ಟಿಯ ವಿಶೆಷ ಸಮಗ್ರ ಪರಿಷ್ಕರಣೆ ಕಾರ್ಯದ ಹಿನ್ನೆಲೆಯಲ್ಲಿ ಬೀಳಗಿ ತಹಶೀಲ್ದಾರ ಕಚೇರಿಗೆ ಸೋಮವಾರ ಭೇಟಿ ನೀಡಿ, ಸಿಬ್ಬಂದಿಯ ಕಾರ್ಯವೈಖರಿ ಹಾಗೂ ಪರಿಷ್ಕರಣೆ ಪ್ರಕ್ರಿಯೆಯ ಪ್ರಗತಿಯನ್ನು ಪರಿಶೀಲಿಸಿ ಮಾತನಾಡಿದರು.
ಮತದಾರರಿಂದ ಅಗತ್ಯ ದಾಖಲೆಗಳನ್ನು ಪಡೆದು, ನಿಯಮಾನುಸಾರ ಪರಿಶೀಲನೆ ನಡೆಸಬೇಕು. ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಯಾವುದೇ ಅರ್ಹ ಮತದಾರರಿಗೆ ಅನ್ಯಾಯವಾಗದಂತೆ ಹಾಗೂ ಯಾವುದೇ ರೀತಿಯ ಲೋಪಗಳಿಗೆ ಅವಕಾಶ ನೀಡದಂತೆ ಕಾರ್ಯನಿರ್ವಹಿಸಬೇಕು ಎಂದು ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ಜಿಲ್ಲೆಯ ಎಲ್ಲ ವಿಧಾನಸಭಾ ಮತಕ್ಷೇತ್ರಗಳಲ್ಲಿ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ ಕಾರ್ಯವು ಶಾಂತಿಯುತವಾಗಿ ನಡೆಯುತ್ತಿದ್ದು, ಪ್ರಕ್ರಿಯೆಯಲ್ಲಿ ಯಾವುದೇ ಲೋಪಗಳು ಉಂಟಾಗದAತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಎಸ್‌ಐಆರ್ ಕಾರ್ಯದಲ್ಲಿ ನಿಯಮಾನುಸಾರ ಪಾರದರ್ಶಕತೆ ಕಾಯ್ದುಕೊಂಡು, ಅರ್ಹ ಮತದಾರರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುವಂತೆ ಹೇಳಿದರು.
ಎಸ್‌ಐಆರ್‌ಗೆ ಸಂಬAಽಸಿದAತೆ ನೋ ಮ್ಯಾಪಿಂಗ್ ಆಗಿರುವ ಮತದಾರರಿಗೆ ಸಮಂಜಸ ದಾಖಲೆಗಳನ್ನು ಸಲ್ಲಿಸುವಂತೆ ನೋಟಿಸ್ ನೀಡಿರುವುದು ಹಾಗೂ ಈ ಕುರಿತು ವಿಚಾರಣೆ ನಡೆಸುತ್ತಿರುವ ಪ್ರಕ್ರಿಯೆಯನ್ನು ಪರಿಶೀಲಿಸಿದರು. ಮತದಾರರಿಂದ ಪಡೆಯಲಾಗುತ್ತಿರುವ ದಾಖಲೆಗಳು, ಅವುಗಳ ಪರಿಶೀಲನೆ ಹಾಗೂ ಕೈಗೊಳ್ಳಲಾಗುತ್ತಿರುವ ಕ್ರಮಗಳ ಕುರಿತು ಅಽಕಾರಿಗಳಿಂದ ಮಾಹಿತಿ ಪಡೆದರು.
ಬೀಳಗಿ ತಹಸೀಲ್ದಾರ ವಿನೋದ ಹತ್ತಳ್ಳಿ ಇತರೆ ಅಽಕಾರಿ ಹಾಗೂ ಸಿಬ್ಬಂದಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net