ಎಸ್‌ಐಆರ್ ಯಶಸ್ವಿಗೆ ಪ್ರತಿಯೊಬ್ಬರೂ ಸಹಕರಿಸಿ

ಬಾಗಲಕೋಟೆಯ ವಿದ್ಯಾಗಿರಿ ವೃತ್ತದಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ ಸಾಥ್ ಮತ್ತಿತರರಿದ್ದರು.
ಬಾಗಲಕೋಟೆಯ ವಿದ್ಯಾಗಿರಿ ವೃತ್ತದಲ್ಲಿ ಎಸ್‌ಐಆರ್ ಕುರಿತು ಜಾಗೃತಿ ಮೂಡಿಸಲು ಶುಕ್ರವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ಚಾಲನೆ ನೀಡಿದರು. ಜಿಲ್ಲಾಧಿಕಾರಿ ಸಂಗಪ್ಪ, ಜಿಪಂ ಸಿಇಒ ಗಜಾನನ ಬಾಲೆ ಸಾಥ್ ಮತ್ತಿತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಸಂಗಪ್ಪ ಹೇಳಿಕೆ
  • ಜನಜಾಗೃತಿಗಾಗಿ ಸೈಕಲ್ ಜಾಥಾ
ಬಾಗಲಕೋಟೆ: ಪ್ರತಿಯೊಬ್ಬ ಅರ್ಹ ನಾಗರಿಕರು ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಕಡ್ಡಾಯವಾಗಿ ಪರಿಶೀಲಿಸಿಕೊಳ್ಳಬೇಕು. ಎಸ್‌ಐಆರ್ ಯಶಸ್ವಿಯಾಗಲು ಸಾರ್ವಜನಿಕರು ಸಹಕಾರ ಅಗತ್ಯವಾಗಿದೆ ಎಂದು ಜಿಲ್ಲಾಧಿಕಾರಿ ಸಂಗಪ್ಪ ಹೇಳಿದರು.
ನಗರದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಉದ್ದೇಶದಿಂದ ಶುಕ್ರವಾರ ಹಮ್ಮಿಕೊಂಡಿದ್ದ ಸೈಕಲ್ ಜಾಥಾದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
ಮತದಾರರ ಪಟ್ಟಿಯ ಶುದ್ಧತೆ ಕಾಪಾಡುವಲ್ಲಿ ಸಾರ್ವಜನಿಕರ ಸಹಭಾಗಿತ್ವ ಅತ್ಯಂತ ಮಹತ್ವದ್ದಾಗಿದೆ. ಮತದಾರರ ಜಾಗೃತಿ ಕಾರ್ಯಕ್ರಮಗಳ ಮೂಲಕ ಎಸ್‌ಐಆರ್ ಕುರಿತು ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ವ್ಯಾಪಕ ಅರಿವು ಮೂಡಿಸಲಾಗುತ್ತಿದೆ. ಸಾರ್ವಜನಿಕರು ಬೂತ್ ಮಟ್ಟದ ಅಽಕಾರಿಗಳೊಂದಿಗೆ ಸಮನ್ವಯ ಸಾಽಸಿ, ಅಗತ್ಯ ಮಾಹಿತಿಯನ್ನು ಒದಗಿಸುವಂತೆ ಮನವಿ ಮಾಡಿದರು.
ವಿದ್ಯಾಗಿರಿ ವೃತ್ತದಲ್ಲಿ ಸೈಕಲ್ ಜಾಥಾಗೆ ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತçದ ಚಾಲನೆ ನೀಡಿದರು. ಜಾಥಾದಲ್ಲಿ ವಿದ್ಯಾರ್ಥಿಗಳು ವಿವಿಧ ಇಲಾಖೆಗಳ ಅಽಕಾರಿಗಳು ಮತ್ತು ಸಿಬ್ಬಂದಿ, ಬಿಎಲ್‌ಒಗಳು ಹಾಗೂ ಮತದಾರ ಜಾಗೃತಿ ತಂಡಗಳು ಎಸ್‌ಐಆರ್ ಕುರಿತು ಜಾಗೃತಿ ಮೂಡಿಸುವ ಫಲಕಗಳನ್ನು ಪ್ರದರ್ಶಿಸಿದರು. ಜಾಥಾ ವಿದ್ಯಾಗಿರಿ ವೃತ್ತದಿಂದ 14ನೇ ಕ್ರಾಸ್ ಮೂಲಕ ಕಲಾದಗಿ ಮೇನ್ ರೋಡ, ಅಯೋದ್ಯಾ ಹೋಟೆಲ್ ಕ್ರಾಸ್, ವಿದ್ಯಾಗಿರಿ 22ನೇ ಕ್ರಾಸ್, ಪಂಜುರ್ಲಿ ಹೋಟೆಲ್ ಮೂಲಕ ಮರಳಿ ವಿದ್ಯಾಗಿರಿ ಕ್ರಾಸ್‌ಗೆ ಮುಕ್ತಾಯಗೊಂಡಿತು.
ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ, ಉಪ ವಿಭಾಗಾಽಕಾರಿ ಸಂತೋಷ ಜಗಲಾಸರ, ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ಜಿಪಂ ಮುಖ್ಯ ಯೊಜನಾಽಕಾರಿ ಅಲ್ಲಮಪ್ರಭು, ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ವಾಸುದೇವ ಬಡಿಗೇರ, ತಹಸೀಲ್ದಾರ್ ವಾಸುದೇವ ಸ್ವಾಮಿ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net