ಕಬ್ಬಿಗೆ ಸೂಕ್ತ ಬೆಲೆ ಆಗ್ರಹಿಸಿ ರೈತರ ರಸ್ತೆ ತಡೆ

ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಬ್ಬಿಗೆ ಸೂಕ್ತ ಬೆಲೆ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ರೈತ ಮುಖಂಡರು ರಸ್ತೆ ತಡೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ, ರೈತ ಮುಖಂಡ ವೀರಣ್ಣ ಹಳೇಗೌಡರ, ಸುಭಾಷ ಶಿರಬೂರ, ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಮಂಜುನಾಥ ಅರಕೇರಿ ಮತ್ತಿತರರಿದ್ದರು.
ಮುಧೋಳದ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ಕಬ್ಬಿಗೆ ಸೂಕ್ತ ಬೆಲೆ ಹಾಗೂ ಬಾಕಿ ಪಾವತಿಗೆ ಆಗ್ರಹಿಸಿ ರೈತ ಮುಖಂಡರು ರಸ್ತೆ ತಡೆ ನಡೆಸಿದರು. ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ, ರೈತ ಮುಖಂಡ ವೀರಣ್ಣ ಹಳೇಗೌಡರ, ಸುಭಾಷ ಶಿರಬೂರ, ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಮಂಜುನಾಥ ಅರಕೇರಿ ಮತ್ತಿತರರಿದ್ದರು.
Published on: 

ಮುಧೋಳ : ಕಬ್ಬಿಗೆ ನ್ಯಾಯಯುತ ಬೆಲೆ ನಿಗದಿಪಡಿಸಿ, ಪ್ರತಿ ಟನ್‌ಗೆ ಹೆಚ್ಚುವರಿಯಾಗಿ ರೂ. ೩೦೦ ರಂತೆ ಬಾಕಿ ಹಣ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ನೇತೃತ್ವದಲ್ಲಿ ರೈತರು ಮಂಗಳವಾರ ನಗರದ ವಿಜಯಪುರ-ಬೆಳಗಾವಿ ರಾಜ್ಯ ಹೆದ್ದಾರಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿ ರಸ್ತೆ ತಡೆ ನಡೆಸಿ ಪ್ರತಿಭಟಿಸಿದರು.

ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತಪ್ಪ ಕಾಂಬಳೆ ಮಾತನಾಡಿ, ರೈತರ ಒಗ್ಗಟ್ಟಿನ ಕೊರತೆಯನ್ನು ಸಕ್ಕರೆ ಕಾರ್ಖಾನೆಗಳ ಮಾಲೀಕರು ತಮ್ಮ ಅನುಕೂಲಕ್ಕೆ ಬಳಸಿಕೊಳ್ಳುತ್ತಿದ್ದಾರೆ. ಕಬ್ಬಿನ ದರ ನಿಗದಿಯಂತಹ ಪ್ರಮುಖ ನಿರ್ಧಾರಗಳನ್ನು ಕೈಗೊಳ್ಳುವಾಗ ರೈತರ ಅಭಿಪ್ರಾಯ ಹಾಗೂ ಒಪ್ಪಿಗೆ ಪಡೆಯಬೇಕು. ಹಿಂದಿನ ಸಕ್ಕರೆ ಸಚಿವ ಶಿವಾನಂದ ಪಾಟೀಲ ನೀಡಿದ್ದ ಭರವಸೆಯಂತೆ ರಾಜ್ಯದಲ್ಲಿ ಹೆಚ್ಚಿನ ಸಂಖ್ಯೆಯ ತೂಕದ ಯಂತ್ರಗಳನ್ನು ಅಳವಡಿಸಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡ ವೀರಣ್ಣ ಹಳೇಗೌಡರ ಮಾತನಾಡಿ, ರಾಜಕಾರಣಿಗಳು ರೈತರನ್ನು ವಿಭಜಿಸುವ ಪ್ರಯತ್ನಗಳಿಗೆ ರೈತರು ಅವಕಾಶ ನೀಡಬಾರದು. ಸಂಘಟಿತರಾಗಿ ಹೋರಾಡುವುದರ ಜತೆಗೆ ಅಽಕಾರದ ಸ್ಥಾನಗಳನ್ನೂ ಪಡೆಯಲು ಮುಂದಾಗಬೇಕು. ಸಕ್ಕರೆ ಕಾರ್ಖಾನೆಗಳು ಲಾಭ ಗಳಿಸುತ್ತಿದ್ದರೂ ರೈತರಿಗೆ ನ್ಯಾಯಯುತ ಬೆಲೆ ನೀಡದಿರುವುದು ವಿಷಾದನೀಯ ಎಂದರು.

ಸಮಸ್ಯೆ ಇತ್ಯರ್ಥಕ್ಕೆ ಕಾಲಾವಕಾಶ ಕೋರಿದ ಉಪವಿಭಾಗಾಽಕಾರಿ ಸ್ಥಳಕ್ಕೆ ಭೇಟಿ ನೀಡಿದ ಉಪ ವಿಭಾಗಾಽಕಾರಿ ಶ್ವೇತಾ ಬೀಡಿಕರ, ರೈತರ ಹೆಚ್ಚುವರಿ ಹಣ ಪಾವತಿ ಬೇಡಿಕೆ ಕುರಿತು ಸಭೆ ನಡೆಸಿದ ಬಳಿಕ ಜಿಲ್ಲಾಽಕಾರಿಗಳು ಸಕ್ಕರೆ ಆಯುಕ್ತರಿಗೆ ಮಾಹಿತಿ ನೀಡಿದ್ದಾರೆ. ಇದು ರಾಜ್ಯಮಟ್ಟದ ಸಮಸ್ಯೆಯಾಗಿರುವುದರಿಂದ ಮುಖ್ಯಮಂತ್ರಿ ನೇತೃತ್ವದಲ್ಲಿ ಇತ್ಯರ್ಥವಾಗುವ ನಿರೀಕ್ಷೆಯಿದೆ. ಆದ್ದರಿಂದ ಇನ್ನೂ ಎರಡ್ಮೂರು ದಿನ ಕಾಯುವಂತೆ ರೈತರಲ್ಲಿ ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಬಸವಂತಪ್ಪ ಕಾಂಬಳೆ, ರೈತರ ಬಾಕಿ ಹಣವನ್ನು ಶೀಘ್ರ ಪಾವತಿಸುವಂತೆ ಸಕ್ಕರೆ ಕಾರ್ಖಾನೆಗಳ ಮಾಲೀಕರಿಗೆ ಸೂಚನೆ ನೀಡಬೇಕು ಎಂದು ಒತ್ತಾಯಿಸಿದರು.

ರೈತ ಮುಖಂಡರಾದ ಸುಭಾಷ ಶಿರಬೂರ, ದುಂಡಪ್ಪ ಯರಗಟ್ಟಿ, ಮುತ್ತಪ್ಪ ಕೋಮಾರ, ಮಂಜುನಾಥ ಅರಕೇರಿ, ಈರಪ್ಪ ಹಂಚಿನಾಳ, ಹನಮಂತ ನಬಾಬ ಹಾಗೂ ಉದಯ ಬಡಕಲಿ ಸೇರಿ ಹಲವರು ಪಾಲ್ಗೊಂಡಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net