ಉಪ ಚುನಾವಣೆ ಗೆಲ್ಲಲು ಸಿದ್ದರಾಗಿ

ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಉಪ ಚುನಾವಣೆ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿದರು. ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಶಾಸಕ ಜೆ.ಟಿ. ಪಾಟೀಲ, ಅಜಯಕುಮಾರ ಸರನಾಯಕ, ನಾಗರಾಜ ಹದ್ಲಿ ಮತ್ತಿತರರು ಇದ್ದರು.
ಬಾಗಲಕೋಟೆ ಜಿಲ್ಲಾ ಕಾಂಗ್ರೆಸ್ ಕಚೇರಿಗೆ ಮಂಗಳವಾರ ಭೇಟಿ ನೀಡಿದ್ದ ಸಚಿವ ಸತೀಶ್ ಜಾರಕಿಹೊಳಿ ಅವರು ಉಪ ಚುನಾವಣೆ ಬಗ್ಗೆ ಕಾರ್ಯಕರ್ತರಿಂದ ಮಾಹಿತಿ ಸಂಗ್ರಹಿಸಿದರು. ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಶಾಸಕ ಜೆ.ಟಿ. ಪಾಟೀಲ, ಅಜಯಕುಮಾರ ಸರನಾಯಕ, ನಾಗರಾಜ ಹದ್ಲಿ ಮತ್ತಿತರರು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾರ್ಯಕರ್ತರಿಗೆ ಸಚಿವ ಜಾರಕಿಹೊಳಿ ಸೂಚನೆ
  • ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆ
  • ಪಕ್ಷಕ್ಕೆ ಗೆಲುವು ತಂದುಕೊಡಲು ಮುಖಂಡರು, ಕಾರ್ಯಕರ್ತರು ಸನ್ನದ್ಧರಾಗಬೇಕು
ಬಾಗಲಕೋಟೆ: ಬಾಗಲಕೋಟೆ ವಿಧಾನಸಭಾ ಕ್ಷೇತ್ರಕ್ಕೆ ನಡೆಯಲಿರುವ ಉಪಚುನಾವಣೆಯಲ್ಲಿ ಪಕ್ಷಕ್ಕೆ ಗೆಲುವು ತಂದುಕೊಡಲು ಮುಖಂಡರು, ಕಾರ್ಯಕರ್ತರು ಸನ್ನದ್ಧರಾಗಬೇಕು ಎಂದು ಸಚಿವ ಸತೀಶ ಜಾರಕಿಹೊಳಿ ಸೂಚನೆ ನೀಡಿದರು.
ಮಂಗಳವಾರ ಕಾಂಗ್ರೆಸ್ ಜಿಲ್ಲಾ ಕಚೇರಿಯಲ್ಲಿ ಪಕ್ಷದ ಮುಖಂಡರು, ಕಾರ್ಯಕರ್ತರೊಂದಿಗೆ ಉಪಚುನಾವಣೆ ಕುರಿತು ಸಮಾಲೋಚನೆ ನಡೆಸಿದರು.
ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ನಗರ, ಪಟ್ಟಣ ಹಾಗೂ ಎಷ್ಟು ಹಳ್ಳಿಗಳು ಬರುತ್ತವೆ. ಎಲ್ಲ ಬ್ಲಾಕ್‌ಗಳು ಇವೆ. ಅಲ್ಲೆಲ್ಲ ಪಕ್ಷದ ಸಂಘಟನೆ ಹೇಗಿದೆ ಎಂಬುದು ಸೇರಿದಂತೆ ವಿವಿಧ ಮಾಹಿತಿ ಪಡೆದುಕೊಂಡರು.
ಮುಖಂಡ ಚಂದ್ರಶೇಖರ ರಾಠೋಡ ಮಾತನಾಡಿ, ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಗೆಲ್ಲುವುದು ಅಷ್ಟು ಸುಲಭವಲ್ಲ. ಚುನಾವಣೆಯಲ್ಲಿ ಎದುರಾಳಿ ಪಕ್ಷದ ನಾಯಕರ ವಿರುದ್ಧ ಹೋರಾಟ ಮಾಡಿ ಗೆಲ್ಲಿಸಿರುತ್ತೇವೆ. ಆದರೆ, ಸರ್ಕಾರ ರಚನೆಯಾಗಿ ಎರಡೂವರೆ ವರ್ಷಗಳಾದರೂ ನಾಮನಿರ್ದೇಶನ ಮಾಡಿಲ್ಲ. ಇದೀಗ ಬಿಟಿಡಿಎ ಅಧ್ಯಕ್ಷ ಸ್ಥಾನವೂ ಖಾಲಿಯಾಗಿದೆ. ಕಾರ್ಯಕರ್ತರಿಗೆ ರಾಜ್ಯಮಟ್ಟ ಹಾಗೂ ಜಿಲ್ಲಾ ಮಟ್ಟದಲ್ಲಿ ನಾಮನಿರ್ದೇಶನಗಳು ಬಹುತೇಕ ಆಗಿಲ್ಲ. ಇನ್ನು ಕೆಲವು ವಿಚಾರಗಳನ್ನು ಇಲ್ಲಿ ಹೇಳಲು ಆಗಲ್ಲ. ಪ್ರತ್ಯೇಕವಾಗಿ ಅವಕಾಶ ಮಾಡಿಕೊಟ್ಟರೆ ವಿಷಯ ಗಮನಕ್ಕೆ ತರುತ್ತೇವೆ. ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು ಎಂದು ತಿಳಿಸಿದರು.
ಮುಖಂಡ ದ್ಯಾಮಣ್ಣ ಗಾಳಿ ಮಾತನಾಡಿ, ಬಾಗಲಕೋಟೆಯಲ್ಲಿ ಮೂರೂವರೆ ದಶಕಗಳ ಕಾಲ ಕಾಂಗ್ರೆಸ್ ಪಕ್ಷ ಗೆದ್ದಿರಲಿಲ್ಲ. 2013ರಲ್ಲಿ ಎಚ್.ವೈ. ಮೇಟಿ ಅವರಿಂದ ಗೆಲುವು ಪಡೆಯಲು ಸಾಧ್ಯವಾಯಿತು. 2018ರಲ್ಲೂ ಅವರಿಂದಾಗಿ ಗೆಲುವು ಬಂದಿತು. ಮೇಟಿ ಅವರು ತಮ್ಮ ಅನುಭವ, ಸಂಘಟನೆ ಮೂಲಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಗೆಲುವು ಸಾಧಿಸಿದ್ದರು. ಇದೀಗ ಅವರ ಕುಟುಂಬದವರಿಗೇ ಟಿಕೆಟ್ ನೀಡಬೇಕು ಎಂದು ಹೇಳಿದರು.
ಪಕ್ಷದ ಜಿಲ್ಲಾ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಶಾಸಕ ಜೆ.ಟಿ. ಪಾಟೀಲ, ಬುಡಾ ಅಧ್ಯಕ್ಷ ರಜಾಕ್ ಬೇನೂರ, ಮಾಜಿ ಸಚಿವ ಅಜಯಕುಮಾರ ಸರನಾಯಕ, ಪಕ್ಷದ ಹಿರಿಯ ಮುಖಂಡ ಪ್ರಕಾಶ ತಪಶೆಟ್ಟಿ, ಪ್ರಚಾರ ಸಮಿತಿ ಅಧ್ಯಕ್ಷ ನಾಗರಾಜ ಹದ್ಲಿ, ಎಸ್.ಎನ್. ರಾಂಪುರ, ಶ್ರೀನಿವಾಸ ಬಳ್ಳಾರಿ, ಮಲ್ಲಿಕಾರ್ಜುನ ಮೇಟಿ, ರಕ್ಷಿತಾ ಈಟಿ, ಬಸವಂತಪ್ಪ ಮೇಟಿ, ಸಂತೋಷ ಹೊಕ್ರಾಣಿ, ನಿಂಗಪ್ಪ ಕೋಟಿ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net