ರಾಜ್ಯಪಾಲರು ತಮ್ಮನ್ನು ನೇಮಕ ಮಾಡಿದ ಸರ್ಕಾರದ ತುತ್ತೂರಿಯಾಗದೆ, ಸಂವಿಧಾನದ ರಕ್ಷಕರಾಗಿ ಕಾಯ, ವಾಚ, ಮನಸ್ಸಿನಿಂದ ತಮ್ಮ ಜವಾಬ್ದಾರಿಯನ್ನು ನಿರ್ವಹಿಸಬೇಕು ಎಂಬುದು ನನ್ನ ಅನಿಸಿಕೆ. ಇಂತಹ ಸಂದರ್ಭಗಳಲ್ಲಿ ಸ್ವತಂತ್ರವಾಗಿ ಕಾರ್ಯನಿರ್ವಹಿಸುತ್ತಿರುವ ದೇಶದ ಸರ್ವೋಚ್ಛ ನ್ಯಾಯಾಲಯವು ಸ್ವಯಂಪ್ರೇರಿತವಾಗಿ ಮಧ್ಯಸ್ಥಿಕೆ ವಹಿಸಿ, ಸಂವಿಧಾನದ ಮೌಲ್ಯಗಳನ್ನು ಎತ್ತಿಹಿಡಿಯುವ ಕ್ರಮ ಕೈಗೊಳ್ಳಬೇಕೆಂಬುದು ನನ್ನ ವೈಯಕ್ತಿಕ ಅಭಿಪ್ರಾಯ.