ಇಳಕಲ್ಲ ತಾಲೂಕಿನ ಹಿರೇಓತಗೇರಿ ಗ್ರಾಮದಲ್ಲಿ ಆಯುಷ್ಮಾನ ಆರೋಗ್ಯ ಮಂದಿರ ಕಟ್ಟಡ ನಿರ್ಮಾಣ ಕಾಮಗಾರಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವದ್ಧಿ ನಿಗಮ ಅಧ್ಯಕ್ಷ ಶಾಸಕ ವಿಜಯಾನಂದ ಕಾಶಪ್ಪನವರ ಭೂಮಿ ಪೂಜೆಯನ್ನು ನೆರವೇರಿಸಿದರು. ವಿಜಯಮಹಾಂತೇಶ ಗದ್ದನಕೇರಿ, ಲಕ್ಷಣ ರೇವಡಿ, ಶಂಕರಗೌಡ ಗೌಡರ, ಹುಚ್ಚಪ್ಪ ಐಹೊಳೆ, ಅಬ್ದುಲಸಾಬ ಮುಲ್ಲಾ ಇದ್ದರು.
ಆಯುಷ್ಮಾನ ಆರೋಗ್ಯ ಮಂದಿರಗಳ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ
ಇಳಕಲ್ಲ: ಗ್ರಾಮೀಣ ಜನತೆಗೆ ಗುಣಮಟ್ಟದ ಆರೋಗ್ಯ ಸೇವೆಗಳನ್ನು ಒಂದೇ ಸೂರಿನಡಿ ಒದಗಿಸುವ ಉದ್ದೇಶದಿಂದ ಪಿಎಂ ಭೀಮ್ ಯೋಜನೆಯಡಿ ಈ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ ಎಂದುಕರ್ನಾಟಕ ವೀರಶೈವ ಲಿಂಗಾಯತ ಅಭಿವದ್ಧಿ ನಿಗಮದ ಅಧ್ಯಕ್ಷ ಹಾಗೂ ಶಾಸಕ ವಿಜಯಾನಂದ ಕಾಶಪ್ಪನವರ ಹೇಳಿದರು.
ತಾಲೂಕಿನ ಚಿಕ್ಕಆದಾಪೂರ, ನಂದವಾಡಗಿ ಮತ್ತು ಹಿರೇಓತಗೇರಿ ಗ್ರಾಮಗಳಲ್ಲಿ ಆಯುಷ್ಮಾನ ಆರೋಗ್ಯ ಮಂದಿರಗಳ ನಿರ್ಮಾಣಕ್ಕೆ ಸೋಮವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ಕಾಮಗಾರಿಗಳು ನಿಗದಿತ ಪ್ರಮಾಣದ ಗುಣಮಟ್ಟದಲ್ಲಿ ಪೂರ್ಣಗೊಳ್ಳಬೇಕು ಎಂದು ಗುತ್ತಿಗೆದಾರರಿಗೆ ಸೂಚಿಸಿದರು.
ತಾಲೂಕು ಪಂಚಾಯತ್ ಮಾಜಿ ಅಧ್ಯಕ್ಷ ಅರವಿಂದ ಈಟಿ, ಗ್ರಾಮ ಪಂಚಾಯತ್ ಸದಸ್ಯೆ ಸರಸ್ವತಿ ಈಟಿ, ಡಿಎಚ್‌ಒ ಸಂಗಮೇಶ ಅಂಗಡಿ ಸೇರಿ ಸ್ಥಳೀಯ ಮುಖಂಡರು, ಅಧಿಕಾರಿಗಳು, ಆರೋಗ್ಯ ಇಲಾಖೆ ಸಿಬ್ಬಂದಿ ಮತ್ತು ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.