ಸ್ವಾವಲಂಬಿ ಬದುಕಿಗೆ ಜಿಟಿಟಿಸಿ ತರಬೇತಿ ಸಹಕಾರಿ

 ಕೂಡಲಸಂಗಮ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಹಮ್ಮಿಕೊಂಡಿದ್ದ  ಸ್ವಾಗತ ಸಮಾರಂಭವನ್ನು ತರಬೇತಿ ಕೇಂದ್ರದ ಮುಖ್ಯಸ್ಥ ದೇವದಾಸ ನಾಯಕ ಉದ್ಘಾಟಿಸಿದರು.  ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ, ಪ್ರಾಚಾರ್ಯೆ ಸೌಮ್ಯ, ಶಿವಕುಮಾರ ಕಂಚ್ಯಾಣಿ, ಪ್ರಶಾಂತ ಪಟ್ಟದಕಲ್ಲ, ಶಿವಲೀಲಾ ಚೌಧರಿ, ನಿರಂಜನ್ ನಂಜಯ್ಯನಮಠ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ ಹೇಳಿಕೆ
  • ಸ್ವಾಗತ ಸಮಾರಂಭ
  • ವಿದ್ಯಾರ್ಥಿಗಳ ಕಲಿಕಾ ಮಟ್ಟಕ್ಕೆ ಅನುಗುಣವಾದ ಪ್ರಾಯೋಗಿಕ ತರಬೇತಿ
ಕೂಡಲಸಂಗಮ: ಕೌಶಲಯುತ ಶಿಕ್ಷಣದ ಮೂಲಕ ಸ್ವಾವಲಂಬಿ ಬದುಕು ರೂಪಿಸಿಕೊಳ್ಳಲು ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ) ಮಹತ್ವದ ಪಾತ್ರವಹಿಸುತ್ತಿದೆ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಜಾಸ್ಮಿನ್ ಕಿಲ್ಲೆದಾರ ಹೇಳಿದರು.
ಇಲ್ಲಿನ ಜಿಟಿಟಿಸಿ ಕೇಂದ್ರದಲ್ಲಿ ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಆಧುನಿಕ ತಂತ್ರಜ್ಞಾನಾಧಾರಿತ ಕೌಶಲ ತರಬೇತಿ ನೀಡುವ ಮೂಲಕ ಉದ್ಯೋಗಾವಕಾಶಗಳನ್ನು ಸಷ್ಟಿಸುವ ಕಾರ್ಯವನ್ನು ಈ ಕೇಂದ್ರ ಯಶಸ್ವಿಯಾಗಿ ನಿರ್ವಹಿಸುತ್ತಿದೆ ಎಂದರು. ಈ ಸಂಸ್ಥೆಯಿಂದ ತರಬೇತಿ ಪಡೆದ ಅನೇಕರು ಉದ್ಯೋಗ ಮತ್ತು ಉದ್ಯಮ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ್ದಾರೆ ಎಂದು ಹೇಳಿದರು.
ಮುಖ್ಯಸ್ಥ ದೇವದಾಸ ನಾಯಕ ಮಾತನಾಡಿ, ವಿದ್ಯಾರ್ಥಿಗಳ ಕಲಿಕಾ ಮಟ್ಟಕ್ಕೆ ಅನುಗುಣವಾದ ಪ್ರಾಯೋಗಿಕ ತರಬೇತಿ ನೀಡಲಾಗುತ್ತಿದ್ದು, ಇಲ್ಲಿ ತರಬೇತಿ ಪಡೆದವರಿಗೆ ಕೈಗಾರಿಕಾ ಕ್ಷೇತ್ರದಲ್ಲಿ ಹೆಚ್ಚಿನ ಬೇಡಿಕೆ ಇದೆ ಎಂದು ತಿಳಿಸಿದರು.
ಪ್ರಾಚಾರ್ಯೆ ಸೌಮ್ಯ ಮಾತನಾಡಿ, ಅನುಭವಸಂಪನ್ನ ಉಪನ್ಯಾಸಕರಿಂದ ವಿದ್ಯಾರ್ಥಿಗಳು ಕೌಶಲಗಳನ್ನು ಸಂಪೂರ್ಣವಾಗಿ ಅಳವಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.
ಶಿವಕುಮಾರ ಕಂಚ್ಯಾಣಿ, ಪ್ರಶಾಂತ ಪಟ್ಟದಕಲ್ಲ, ಶಿವಲೀಲಾ ಚೌಧರಿ, ನಿರಂಜನ್ ನಂಜಯ್ಯನಮಠ, ಗಂಗಪ್ಪ, ಮಹಾದೇವಿ, ವೀರಣ್ಣ, ಪೂಜಾ ಮುಂತಾದವರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net