ಮಹಿಳಾ ಸಬಲೀಕರಣಕ್ಕೆ ಗ್ಯಾರಂಟಿ ಸಹಕಾರಿ

ಬಾಗಲಕೋಟೆ ಜಿ.ಪಂ. ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಜಿ.ಪಂ. ಸಿಇಒ ಗಜಾನನ ಬಾಲೆ, ಶಿವಪ್ಪ ಕೊನೇರಿ, ಜಯಶ್ರೀ ತಿಮ್ಮಾಪೂರ ಇತರರಿದ್ದರು.
ಬಾಗಲಕೋಟೆ ಜಿ.ಪಂ. ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಜಿ.ಪಂ. ಸಿಇಒ ಗಜಾನನ ಬಾಲೆ, ಶಿವಪ್ಪ ಕೊನೇರಿ, ಜಯಶ್ರೀ ತಿಮ್ಮಾಪೂರ ಇತರರಿದ್ದರು.ಬಾಗಲಕೋಟೆ ಜಿ.ಪಂ. ಸಭಾ ಭವನದಲ್ಲಿ ಗುರುವಾರ ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಅಧ್ಯಕ್ಷತೆಯಲ್ಲಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಯಿತು. ಸಮಿತಿ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ, ಜಿ.ಪಂ. ಸಿಇಒ ಗಜಾನನ ಬಾಲೆ, ಶಿವಪ್ಪ ಕೊನೇರಿ, ಜಯಶ್ರೀ ತಿಮ್ಮಾಪೂರ ಇತರರಿದ್ದರು.
Published on: 

ಬಾಗಲಕೋಟೆ: ಮಹಿಳೆಯರ ಆರ್ಥಿಕ ಸಬಲೀಕರಣಕ್ಕೆ, ರಾಜ್ಯ ಸರ್ಕಾರ ನೀಡಿರುವ ಪಂಚ ಗ್ಯಾರಂಟಿ ಯೋಜನೆಗಳು ಸಹಕಾರಿಯಾಗಿವೆ ಎಂದು ಕರ್ನಾಟಕ ರಾಜ್ಯ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಜರುಗಿದ ಪಂಚ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಜೀವನ ಮಟ್ಟ ಸುಧಾರಿಸುವುದರೊಂದಿಗೆ ಮಹಿಳೆಯರು ತಮ್ಮ ಸ್ವಾವಲಂಬಿ ಬದುಕು ಕಟ್ಟಿಕೊಳ್ಳಲು ನೆರವು ನೀಡಿವೆ ಎಂದರು.

ವಿಶೇಷವಾಗಿ ಶಕ್ತಿ ಯೋಜನೆ ಹೆಚ್ಚಿನ ಸಂಖ್ಯೆ ಮಹಿಳೆಯರಿಗೆ ಅನುಕೂಲ ಮಾಡಿಕೊಟ್ಟಿದೆ. ಮಹಿಳೆಯರು ತಾವು ತಯಾರಿಸಿದ ಉತ್ಪನ್ನಗಳನ್ನು ರಾಜ್ಯದ ವಿವಿಧ ಭಾಗಗಳಿಗೆ ಕೊಂಡೊಯ್ದು ಮಾರಾಟ ಮಾಡಲು ತುಂಬಾ ಅನುಕೂಲವಾಗಿದೆ. ಈ ಹಿನ್ನೆಲೆ ಮಹಿಳೆಯರ ಪ್ರಯಾಣವು ಹೆಚ್ಚಾಗಿದ್ದು ಬಸ್ ಕಂಡಕ್ಟರ್ ಮತ್ತು ಚಾಲಕರು ಪ್ರಯಾಣ ಮಾಡುವ ಮಹಿಳೆಯರ ಕುರಿತು ಹಗುರವಾಗಿ ಮಾತನಾಡದೇ ಮಹಿಳಾ ಸಬಲೀಕರಣಕ್ಕೆ ಪ್ರೇರಣೆ ನೀಡಬೇಕು. ಬಸ್ ಕಂಡಕ್ಟರ್ ಮತ್ತು ಚಾಲಕರು ಮಹಿಳೆಯರಿಗೆ, ವಿದ್ಯಾರ್ಥಿಗಳಿಗೆ ಬಸ್ ನಿಲ್ಲಿಸದೇ, ದುರ್ವರ್ತನೆ ತೋರಿದಲ್ಲಿ ಸಂಬಂಧಿಸಿದ ಇಲಾಖಾ ಅಧಿಕಾರಿಗಳು ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಎಚ್ಚರಿಸಿದರು.

ವಾಕರಸಾ ಸಂಸ್ಥೆ ಬಾಗಲಕೋಟೆ ವಿಭಾಗೀಯ ನಿಯಂತ್ರಣಾಧಿಕಾರಿಗಳು ಸಭೆಗೆ ಮಾಹಿತಿ ನೀಡಿ ಬಾಗಲಕೋಟೆ ವಿಭಾಗವು ಪ್ರತಿ ದಿನ ಸರಾಸರಿ ೧೨೮.೫೨ ಲಕ್ಷದಷ್ಟು ಆದಾಯ ಗಳಿಸುತ್ತಿದ್ದು, ೨೦೨೬ ಏಪ್ರಿಲ್ ೧ರಿಂದ ಸೆಪ್ಟೆಂಬರ್ ೨೭ ರವರೆಗೆ ವಿಭಾಗದ ಒಟ್ಟು ಆದಾಯ ೨೩೧೩೪.೧೬ ಲಕ್ಷ ರೂ. ಇದ್ದು, ಇದರಲ್ಲಿ ಶಕ್ತಿ ಯೋಜನೆಯ ಪಾಲು ೧೩೨೩೫.೨೬ ಲಕ್ಷ ರೂ. ಆಗಿದೆ. ಅಂದರೆ ಒಟ್ಟು ಆದಾಯದಲ್ಲಿ ಶಕ್ತಿ ಯೋಜನೆಯ ಪಾಲು ಶೇ. ೫೭ರಷ್ಟು ಇರುತ್ತದೆ ಎಂದು ತಿಳಿಸಿದರು.

ಬಾಗಲಕೋಟೆ ಜಿಲ್ಲೆ ವ್ಯಾಪ್ತಿಯಲ್ಲಿ ಅಗಸ್ಟ್ ೨೦೨೩ರಿಂದ ೨೦೨೬ರ ಆಗಸ್ಟ್ವರೆಗಿನ ಅಂತ್ಯಕ್ಕೆ ಅಂದಾಜು ಒಟ್ಟು ೫೮೦.೯೯ ಕೋಟಿ ಗೃಹಜ್ಯೋತಿ ಹೊಂದಾಣಿಕೆ ಪ್ರಕಾರ ಅನುದಾನವಾಗಿರುತ್ತದೆ ಎಂದು ಹೆಸ್ಕಾಂ ಅಧಿಕಾರಿಗಳು ಅಂಕಿ-ಅಂಶ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪ ನಿರ್ದೇಶಕರು, ಗೃಹ ಲಕ್ಷ್ಮೀ ಯೋಜನೆಯೂ ಪ್ರಾರಂಭವಾದಾಗಿನಿಂದ ಹಿಡಿದು ೨೦೨೬ರ ಜೂನ್‌ವರೆಗೆ ೨೫೬೬ ಕೋಟಿ ರೂ. ಜಿಲ್ಲೆಯ ಫಲಾನುಭವಿಗಳ ಬ್ಯಾಂಕ್ ಖಾತೆಗೆ ಜಮೆ ಆಗಿರುತ್ತದೆ ಎಂದು ಹೇಳಿದರು.

ಆಹಾರ ಇಲಾಖೆ ಜಂಟಿ ನಿರ್ದೇಶಕರು ಸಭೆಗೆ ಮಾಹಿತಿ ನೀಡಿ, ಅನ್ನ ಭಾಗ್ಯ ಯೋಜನೆಯಡಿಯಲ್ಲಿ ಜಿಲ್ಲೆಯ ಅರ್ಹ ಕುಟುಂಬಗಳಿಗೆ ಆಹಾರ ಭದ್ರತೆ ಒದಗಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅನೀಲಕುಮಾರ ದಡ್ಡಿ, ಉಪಾಧ್ಯಕ್ಷರಾದ ಶಿವಪ್ಪ ಕೊನೇರಿ, ಜಯಶ್ರೀ ತಿಮ್ಮಾಪೂರ, ರವೀಂದ್ರ ಯಡಹಳ್ಳಿ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಗಜಾನನ ಬಾಲೆ, ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net