ಬಲಿಷ್ಠ ಭಾರತಕ್ಕೆ ಆರೋಗ್ಯವಂತ ಮಕ್ಕಳು ಅವಶ್ಯ

 ಬಾಗಲಕೋಟೆ ನಗರದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಚಿಕ್ಕಮಕ್ಕಳ ವಿಭಾಗದಲ್ಲಿ ಶುಕ್ರವಾರ ಆಸ್ಪತ್ರೆಯಲ್ಲಿ ಬಿವಿವಿ ಸಂಘದ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ) ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಸಿಹಿ ಮತ್ತು ಹಣ್ಣು ವಿತರಿಸಿದರು. ವೈದ್ಯಕೀಯ ಅಧೀಕ್ಷಕ ಡಾ. ಶ್ರೀರಾಮ ಕೋರಾ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞ ವೈದ್ಯರಾದ ಡಾ. ರಮೇಶ ಪೋಳ ಇದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಬೇಕಾಗಿದೆ
  • ಉತ್ತಮ ಶಿಕ್ಷಣದ ಜೊತೆಗೆ ಆರೋಗ್ಯ, ಸಂಸ್ಕಾರಯುತ ಜೀವನ ಕಲ್ಪಿಸಬೇಕು
  • ಮಕ್ಕಳ ದಿನಾಚರಣೆ
ಬಾಗಲಕೋಟೆ: ಮಕ್ಕಳ ಆರೋಗ್ಯಕ್ಕೆ ಆದ್ಯತೆ ನೀಡಬೇಕಾಗಿದೆ. ಉತ್ತಮ ಶಿಕ್ಷಣದ ಜೊತೆಗೆ ಆರೋಗ್ಯ, ಸಂಸ್ಕಾರಯುತ ಜೀವನ ಕಲ್ಪಿಸಬೇಕು. ಬಲಿಷ್ಠ ಭಾರತಕ್ಕಾಗಿ ಆರೋಗ್ಯವಂತ ಮಕ್ಕಳ ಅಗತ್ಯವಿದೆ ಎಂದು ಬಿವಿವಿ ಸಂಘದ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿ ಕಾರ್ಯಾಧ್ಯಕ್ಷ ಅಶೋಕ ಎಂ. ಸಜ್ಜನ (ಬೇವೂರ) ಹೇಳಿದರು.
ಮಕ್ಕಳ ದಿನಾಚರಣೆ ಅಂಗವಾಗಿ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜಿನ ಚಿಕ್ಕಮಕ್ಕಳ ವಿಭಾಗದಲ್ಲಿ ಶುಕ್ರವಾರ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಮಕ್ಕಳಿಗೆ ಸಿಹಿ ಮತ್ತು ಹಣ್ಣು ವಿತರಿಸಿ ಅವರು ಮಾತನಾಡಿದರು.
ಕುಮಾರೇಶ್ವರ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗ ಅತ್ಯುತ್ತಮ ವೈದ್ಯಕೀಯ ಸೇವೆ ಒದಗಿಸುತ್ತಿದೆ. ಚಿಕ್ಕಮಕ್ಕಳ ತಜ್ಞ ವೈದ್ಯರು ಸೇವಾ ಮನೋಭಾವದಿಂದ ಕಾರ್ಯ ನಿರ್ವಹಿಸುತ್ತಿದ್ದಾರೆ. ಮಕ್ಕಳ ಆರೋಗ್ಯ ಕಾಪಾಡುವ ನಿಟ್ಟಿನಲ್ಲಿ ಅಗತ್ಯದ ಎಲ್ಲ ಪ್ರಕಾರದ ವೈದ್ಯಕೀಯ ಚಿಕಿತ್ಸಾ ಸೌಲಭ್ಯಗಳನ್ನು ಒದಗಿಸಲಾಗಿದೆ ಎಂದರು.
ಥಲಸ್ಸೆಮಿಯಾ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಲು ಕುಮಾರೇಶ್ವರ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದಲ್ಲಿ ಥಲಸ್ಸೆಮಿಯಾ ಮತ್ತು ಹಿಮೋಫಿಲಿಯಾ ಸೊಸೈಟಿ ಸ್ಥಾಪಿಸಲಾಗಿದೆ. ಈ ಸೊಸೈಟಿಗೆ 2022ರಲ್ಲಿ ರಾಜ್ಯ ಸರ್ಕಾರದಿಂದ ಸ್ವಾತಂತ್ರೊೃೀತ್ಸವ ಅಮೃತ ಮಹೋತ್ಸವದ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸಂದಿರುವುದು ಚಿಕ್ಕಮಕ್ಕಳ ವಿಭಾಗದ ಉನ್ನತ ಸೇವೆಗೆ ದೊರೆತ ಫಲ. ಈ ಎಲ್ಲ ಸೇವೆಗೆ ಬಿವಿವಿ ಸಂಘದ ಕಾರ್ಯಾಧ್ಯಕ್ಷ ವೀರಣ್ಣ ಚರಂತಿಮಠ ಅವರ ಶ್ರಮ, ಶಕ್ತಿ ಅಡಗಿದೆ ಎಂದು ಬಣ್ಣಿಸಿದರು.
ವೈದ್ಯಕೀಯ ಅಧೀಕ್ಷಕ ಡಾ. ಶ್ರೀರಾಮ ಕೋರಾ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞ ವೈದ್ಯರಾದ ಡಾ. ರಮೇಶ ಪೋಳ, ಡಾ. ವಿನಯಕುಮಾರ, ಡಾ. ರಮೇಶ ನೀಲನ್ನವರ, ಡಾ. ಪ್ರವೀಣ, ಡಾ. ಮನೋಜ, ಡಾ. ಅನೀತಾ ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net