ಕೆರೂರಲ್ಲಿ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಚಾಲನೆ

ಕೆರೂರ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಹೆಚ್‌ಪಿವಿ ಲಸಿಕಾ ಅಭಿಯಾನಕ್ಕೆ ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಪ್ರಶಾಂತ ಬಾಬು ಚಾಲನೆ ನೀಡಿದರು. ದಂತ ವೈದ್ಯಾಧಿಕಾರಿ ಡಾ. ಸವಿತಾ ಶೆಟ್ಟರ, ಫಾರ್ಮಾಸಿಸ್ಟ್ ರವಿ ಬೋರಣ್ಣವರ, ಸಿಬ್ಬಂದಿ ಸುಮಿತ್ರಾ ಡಂಬೂರ, ರುಕ್ಮಿಣಿ ನವಲಗಾನ, ಸುರೇಶ ಹದ್ಲಿ, ಏಕನಾಥ ಇರಕಲ್ ಹಾಗೂ ಆಶಾ ಕಾರ್ಯಕರ್ತೆಯರು ಇದ್ದರು.

Published on
ಕೆರೂರ: ಮಹಿಳೆಯರಲ್ಲಿ ಹೆಚ್ಚುತ್ತಿರುವ ಗರ್ಭಕಂಠದ ಕ್ಯಾನ್ಸರ್ ತಡೆಗಟ್ಟುವ ಉದ್ದೇಶದಿಂದ 14 ವರ್ಷದ ಹೆಣ್ಣುಮಕ್ಕಳಿಗೆ ಕೇಂದ್ರ ಸರ್ಕಾರದ ಮಾರ್ಗಸೂಚಿಯಂತೆ ಹೆಚ್‌ಪಿವಿ ಲಸಿಕಾ ಅಭಿಯಾನ ಜಾರಿಗೊಳಿಸಿದೆ ಎಂದು ಸಮುದಾಯ ಆರೋಗ್ಯ ಕೇಂದ್ರದ ಮುಖ್ಯ ವೈದ್ಯಾಧಿಕಾರಿ ಡಾ. ಪ್ರಶಾಂತ ಬಾಬು ಹೇಳಿದರು.

ಪಟ್ಟಣದ ಸಮುದಾಯ ಆರೋಗ ಕೇಂದ್ರದಲ್ಲಿ ಮಂಗಳವಾರ 14 ವರ್ಷದ ಹೆಣ್ಣುಮಕ್ಕಳಿಗೆ ಹೆಚ್‌ಪಿವಿ ಲಸಿಕೆ ನೀಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಹೆಣ್ಣುಮಕ್ಕಳ ಆರೋಗ್ಯ ರಕ್ಷಣೆಯಲ್ಲಿ ಈ ಲಸಿಕೆ ಮಹತ್ವದ್ದಾಗಿದೆ. ಪಟ್ಟಣ ಹಾಗೂ ಗ್ರಾಮೀಣ ಭಾಗದ ಎಲ್ಲ ಅರ್ಹ ಹೆಣ್ಣುಮಕ್ಕಳು ಉಚಿತವಾಗಿ ಲಸಿಕೆ ಪಡೆಯುವಂತೆ ಪೋಷಕರು ಹಾಗೂ ಸಾರ್ವಜನಿಕರು ಸಹಕರಿಸಬೇಕು ಎಂದು ಅವರು ಮನವಿ ಮಾಡಿದರು.
ದಂತ ವೈದ್ಯಾಧಿಕಾರಿ ಡಾ. ಸವಿತಾ ಶೆಟ್ಟರ, ಫಾರ್ಮಾಸಿಸ್ಟ್ ರವಿ ಬೋರಣ್ಣವರ, ಸಿಬ್ಬಂದಿ ಸುಮಿತ್ರಾ ಡಂಬೂರ, ರುಕ್ಮಿಣಿ ನವಲಗಾನ, ಸುರೇಶ ಹದ್ಲಿ, ಏಕನಾಥ ಇರಕಲ್ ಹಾಗೂ ಆಶಾ ಕಾರ್ಯಕರ್ತೆಯರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net