ಕಾರ್ಯಕರ್ತರನ್ನು ಕಡೆಗಣಿಸಿದರೆ ತಕ್ಕ ಪಾಠ..!

ಜಮಖಂಡಿ ನಗರದ ಕಾನಿಪ ಪತ್ರಿಕಾ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಹಿಂದೂ ಮುಖಂಡ ಉಮೇಶ ಆಲಮೇಲಕರ ಮಾತನಾಡಿದರು. ಗದಿಗೆಪ್ಪ ಧಾರವಾಡ, ಲಕ್ಷ್ಮಣ ಬಂಕಿ, ಉಮೇಶ ಗೌಳಿ ಮತ್ತಿತರರು ಇದ್ದಾರೆ.
ಜಮಖಂಡಿ ನಗರದ ಕಾನಿಪ ಪತ್ರಿಕಾ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಹಿಂದೂ ಮುಖಂಡ ಉಮೇಶ ಆಲಮೇಲಕರ ಮಾತನಾಡಿದರು. ಗದಿಗೆಪ್ಪ ಧಾರವಾಡ, ಲಕ್ಷ್ಮಣ ಬಂಕಿ, ಉಮೇಶ ಗೌಳಿ ಮತ್ತಿತರರು ಇದ್ದಾರೆ.
Published on

ಪ್ರಮುಖ ಮುಖ್ಯಾಂಶಗಳು

  • ಹಿಂದೂ ಮುಖಂಡ ಉಮೇಶ ಆಲಮೇಲಕರ ಅಸಮಾಧಾನ
  • ಪಕ್ಷದ ಮೂಲ ಸಿದ್ಧಾಂತಗಳಿಗೆ ಬೆಲೆ ಇಲ್ಲದಂತಾಗಿದೆ
  • ಬಿಜೆಪಿ ಇಂದು ಜೀವಂತವಾಗಿರುವುದು ಹಿಂದುತ್ವದಿಂದಲೇ ಹೊರತು ನಾಯಕರಿಂದಲ್ಲ
ಜಮಖಂಡಿ : ಬಿಜೆಪಿ ಇಂದು ಜೀವಂತವಾಗಿರುವುದು ಹಿಂದುತ್ವದಿಂದಲೇ ಹೊರತು ನಾಯಕರಿಂದಲ್ಲ. ಹಿಂದೂ ಕಾರ್ಯಕರ್ತರನ್ನು ಕಡೆಗಣಿಸಿ ಬಿಜೆಪಿ ಎಂದಿಗೂ ಗೆಲ್ಲಲು ಸಾಧ್ಯವಿಲ್ಲ. ಆದರೆ ಇಂದು ಪಕ್ಷದ ಮುಖಂಡರು ಕಾರ್ಯಕರ್ತರನ್ನು ನಿರ್ಲಕ್ಷದಿಂದ ಕಾಣುತ್ತಿದ್ದಾರೆ ಎಂದು ಆರೋಪಿಸಿ ಹಿಂದೂ ಮುಖಂಡ ಉಮೇಶ ಆಲಮೇಲಕರ ಅಸಮಾಧಾನ ವ್ಯಕ್ತಪಡಿಸಿದರು.
ನಗರದ ಕಾನಿಪ ಪತ್ರಿಕಾ ಭವನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು. ಬಿಜೆಪಿ ನಾಯಕತ್ವದ ವಿರುದ್ಧ ವಾಗ್ದಾಳಿ ನಡೆಸಿದ ಅವರು, ಜಮಖಂಡಿ ಕ್ಷೇತ್ರದಲ್ಲಿ ಪಕ್ಷದ ಮೂಲ ಸಿದ್ಧಾಂತಗಳಿಗೆ ಬೆಲೆ ಇಲ್ಲದಂತಾಗಿದೆ ಎಂದು ಆಕ್ರೋಶ ಹೊರಹಾಕಿದರು.
ಜಮಖಂಡಿ ಕ್ಷೇತ್ರದ ಮೂಲ ಬಿಜೆಪಿ ಹಾಗೂ ಹಿಂದೂ ಕಾರ್ಯಕರ್ತರು, ಮುಖಂಡರು ಸಾಮೂಹಿಕವಾಗಿ ರಾಜೀನಾಮೆ ನೀಡಿದ್ದರೂ, ಜಿಲ್ಲಾಧ್ಯಕ್ಷರಾಗಲಿ ಅಥವಾ ಹಿರಿಯ ನಾಯಕರಾಗಲಿ ಸೌಜನ್ಯಕ್ಕೂ ಅವರನ್ನು ಸಂಪರ್ಕಿಸಿ ಸಮಸ್ಯೆ ಆಲಿಸುವ ಪ್ರಯತ್ನ ಮಾಡಿಲ್ಲ. ಬೇರೆ ಪಕ್ಷಗಳಿಂದ ಬಂದವವರಿಂದಾಗಿ ಮೂಲ ಬಿಜೆಪಿ ಕಾರ್ಯಕರ್ತರನ್ನು ಹೊರಹಾಕುವ ತಂತ್ರ ನಡೆಯುತ್ತಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಸಿದ್ಧಾಂತಗಳನ್ನು ಗಾಳಿಗೆ ತೂರಿ ಕುಟುಂಬ ರಾಜಕಾರಣಕ್ಕೆ ಮಣೆ ಹಾಕಲಾಗುತ್ತಿದೆ. ಈಗಿನ ಜಿಲ್ಲಾಧ್ಯಕ್ಷರಿಗೆ ಗಂಭೀರ ಸಮಸ್ಯೆಗಳನ್ನು ಪರಿಹರಿಸುವ ಶಕ್ತಿ ಇಲ್ಲ. ಸಮಸ್ಯೆಗಳ ಬಗ್ಗೆ ಹೇಳಿದರೆ ನಕ್ಕು ಸುಮ್ಮನಾಗುತ್ತಾರೆ ಎಂದು ಟೀಕಿಸಿದರು.
ಜಮಖಂಡಿಗೆ ಭೇಟಿ ನೀಡುತ್ತಿರುವ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರು ಇಲ್ಲಿನ ಗೊಂದಲಗಳನ್ನು ಬಗೆಹರಿಸಬೇಕು. ಮೂಲ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದಿದ್ದರೆ ಬಾಗಲಕೋಟೆ ಉಪ ಚುನಾವಣೆಯಲ್ಲಿ ಕಾರ್ಯಕರ್ತರ ಶಕ್ತಿ ಏನೆಂಬುದನ್ನು ತೋರಿಸಬೇಕಾಗುತ್ತದೆ ಎಂದು ಎಚ್ಚರಿಸಿದರು.
ಮುಖಂಡರಾದ ಗದಿಗೆಪ್ಪ ಧಾರವಾಡ, ಲಕ್ಷ್ಮಣ ಬಂಕಿ, ಉಮೇಶ ಗೌಳಿ ಸೇರಿ ಪ್ರಮುಖರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net