ನೋ-ಟಿವಿ, ನೋ-ಮೊಬೈಲ್ ಸಮಯ ಜಾರಿ ಮಾಡಿ

ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಇರುವ ಹೆರಕಲ್ ಬಹುಗ್ರಾಮ ಕುಡಿಯುವ ನೀರಿನ ಶುದ್ಧೀಕರಣ ಘಟಕ ವೀಕ್ಷಿಸಿದ ಜಿಪಂ ಸಿಇಒ ಗಜಾನನ ಬಾಲೆ.
ಬೀಳಗಿ ತಾಲೂಕಿನ ಅನಗವಾಡಿ ಗ್ರಾಮದಲ್ಲಿ ಇರುವ ಹೆರಕಲ್ ಬಹುಗ್ರಾಮ ಕುಡಿಯುವ ನೀರಿನ ಶುದ್ಧೀಕರಣ ಘಟಕ ವೀಕ್ಷಿಸಿದ ಜಿಪಂ ಸಿಇಒ ಗಜಾನನ ಬಾಲೆ.
Published on

ಶೈಕ್ಷಣಿಕ ಹಿತದೃಷ್ಟಿಯಿಂದ ಬೀಳಗಿ ತಾಲೂಕಿನಾದ್ಯಂತ ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳಿಗೆ ಸಂಜೆ ೫.೩೦ರ ಬಳಿಕ ನೋ-ಟಿವಿ, ನೋ-ಮೊಬೈಲ್ ಸಮಯ ಜಾರಿಗೊಳಿಸಬೇಕು. ಈ ಸಮಯವನ್ನು ವಿದ್ಯಾರ್ಥಿಗಳಿಗೆ ಅಧ್ಯಯನಕ್ಕೆ ಮೀಸಲಿಡುವಂತೆ ಪಾಲಕರು ಮತ್ತು ಶಿಕ್ಷಕರು ಸಹಕರಿಸಬೇಕು ಎಂದು ಜಿಲ್ಲಾ ಪಂಚಾಯಿತಿ ಸಿಇಒ ಗಜಾನನ ಬಾಲೆ ತಿಳಿಸಿದರು.

ಜಿಲ್ಲೆಯ ಬೀಳಗಿ ತಾಲೂಕಿನ ಮನ್ನಿಕೇರಿ ಗ್ರಾಮದ ಪಿಎಂಶ್ರೀ ಸರ್ಕಾರಿ ಪ್ರೌಢಶಾಲೆಗೆ ಶುಕ್ರವಾರ ಭೇಟಿ ನೀಡಿದ್ದ ಅವರು ವಿದ್ಯಾರ್ಥಿಗಳ ಜೊತೆ ಸಂವಾದ ನಡೆಸಿದ ಬಳಿಕ ಈ ಸೂಚನೆ ನೀಡಿದ ಅವರು, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳಿಗೆ ಎಸ್ಸೆಸ್ಸೆಲ್ಸಿ ಹಾಗೂ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಆತ್ಮವಿಶ್ವಾಸದಿಂದ ಎದುರಿಸುವಂತೆ ಕೆಲವು ಟಿಪ್ಸ್ಗಳನ್ನು ನೀಡಿದರು.
ಅನಗವಾಡಿ ಗ್ರಾಮದಲ್ಲಿ ಇರುವ ಹೆರಕಲ್ ಬಹುಗ್ರಾಮ ಕುಡಿವ ನೀರಿನ ಯೋಜನೆಯ ನೀರು ಶುದ್ಧೀಕರಣದ ಘಟಕದಲ್ಲಿನ ನೀರಿನ ತೊಟ್ಟಿಗಳನ್ನು ಸಮರ್ಪವಾಗಿ ಸ್ವಚ್ಛಗೊಳಿಸದೇ ಕುಡಿವ ನೀರಿನ ಶುಚಿತ್ವದಲ್ಲಿ ತೋರಿದ ನಿರ್ಲಕ್ಷ್ಯಕ್ಕೆ ಸಂಬAಽಸಿದ ಅಽಕಾರಿಗೆ ನೋಟಿಸ್ ನೀಡಬೇಕು. ಜೊತೆಗೆ ಎರಡು ದಿನಗಳ ಒಳಗಾಗಿ ನೀರು ಶುದ್ಧೀಕರಣ ಘಟಕದಲ್ಲಿ ಇರುವ ಎಲ್ಲ ತೊಟ್ಟಿಗಳನ್ನು ಸಂಪೂರ್ಣವಾಗಿ ಸ್ವಚ್ಛಗೊಳಿಸಿ, ಕೈಗೊಂಡ ಕ್ರಮದ ವರದಿಯನ್ನು ಸಲ್ಲಿಸುವಂತೆ ಸಂಬAಽಸಿದ ಅಽಕಾರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಅನಗವಾಡಿಯ ಸಾಮಾಜಿಕ ಅರಣ್ಯ ಇಲಾಖೆಯ ಸಸಿ ಬೆಳೆಸುವ ಕೇಂದ್ರಕ್ಕೆ ಭೇಟಿ ನೀಡಿ, ಸಸಿಗಳ ಬೆಳವಣಿಗೆ ಹಾಗೂ ನಿರ್ವಹಣೆ ಪರಿಶೀಲಿಸಿದರು. ಸ್ಥಳೀಯ ಹವಾಮಾನ ಹಾಗೂ ಸಾರ್ವಜನಿಕರ ಅಗತ್ಯಕ್ಕೆ ಅನುಗುಣವಾಗಿ ವಿವಿಧ ತಳಿಯ ಸಸಿಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಸುವಂತೆ ಅರಣ್ಯ ಇಲಾಖೆ ಅಽಕಾರಿಗಳಿಗೆ ನಿರ್ದೇಶನ ನೀಡಿದರು.
ತುಮ್ಮರಮಟ್ಟಿ ಗ್ರಾಮದಲಿ ವಿಬಿ ಜಿರಾಮ್‌ಜಿ ಯೋಜನೆಯಡಿ ನಡೆಯುತ್ತಿರುವ ಕೆರೆ ಹೂಳು ತೆಗೆಯುವ ಕಾಮಗಾರಿಯನ್ನು ಪರಿಶೀಲಿಸಿ, ಕಾಮಗಾರಿಯನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಿದರು.
ಮನ್ನಿಕೇರಿ ಗ್ರಾಮದಲ್ಲಿ ನಡೆಯುತ್ತಿರುವ ಡಿಬಿಒಟಿ ಯೋಜನೆ-೨ ಕಾಮಗಾರಿಯ ಸ್ಥಳಕ್ಕೆ ಭೇಟಿ ನೀಡಿದ ಸಿಇಒ, ಕಾಮಗಾರಿಯ ಗುಣಮಟ್ಟ ಹಾಗೂ ಪ್ರಗತಿಯನ್ನು ಪರಿಶೀಲಿಸಿ ಅಗತ್ಯ ಸಲಹೆ-ಸೂಚನೆಗಳನ್ನು ನೀಡಿದರು.
ಬೀಳಗಿ ತಾಲೂಕು ಪಂಚಾಯಿತಿ ಕಚೇರಿಗೆ ಭೇಟಿ ನೀಡಿ, ವಿವಿಧ ಶಾಖೆಗಳ ಟೇಬಲ್ ಹಾಗೂ ಕಡತಗಳ ತಪಾಸಣೆ ನಡೆಸಿದರು. ಸಾರ್ವಜನಿಕರಿಗೆ ಸಂಬAಽಸಿದ ಅರ್ಜಿಗಳು ಹಾಗೂ ಕೆಲಸಗಳನ್ನು ಯಾವುದೇ ವಿಳಂಬವಿಲ್ಲದೆ ವಿಲೇವಾರಿ ಮಾಡುವಂತೆ ಅಽಕಾರಿಗಳಿಗೆ ಸೂಚಿಸಿದರು.
ಸಾರ್ವಜನಿಕ ಸೇವೆ, ಕುಡಿಯುವ ನೀರು, ಶಿಕ್ಷಣ ಹಾಗೂ ಅಭಿವೃದ್ಧಿ ಕಾಮಗಾರಿಗಳಲ್ಲಿ ಗುಣಮಟ್ಟ ಮತ್ತು ಸಮಯಪಾಲನೆಗೆ ಹೆಚ್ಚಿನ ಆದ್ಯತೆ ನೀಡಬೇಕು. ಅಽಕಾರಿಗಳು ತಮ್ಮ ಜವಾಬ್ದಾರಿಯನ್ನು ಸಮರ್ಪಕವಾಗಿ ನಿರ್ವಹಿಸಬೇಕು ಎಂದು ತಿಳಿಸಿದರು.
ಆರ್‌ಡಿಪಿಆರ್ ವಿಭಾಗದ ಸಹಾಯಕ ನಿರ್ದೇಶಕ ಮಹೇಶ ಜಗಲಿ ಹಾಗೂ ಇತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net