ಗುಣಮಟ್ಟ ಕಾಮಗಾರಿ ಅನುಷ್ಠಾನಗೊಳಿಸಿ

 ಕೆಲವಡಿ ಹಾಗೂ ಹಾಗೂ ಹಂಗರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್. ವೈ. ಬಸರಿಗಿಡದ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಕೆಲವಡಿ ಹಾಗೂ ಹಾಗೂ ಹಂಗರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯತ್ ಉಪಕಾರ್ಯದರ್ಶಿ ಎನ್. ವೈ. ಬಸರಿಗಿಡದ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿ.ಪಂ. ಉಪಕಾರ್ಯದರ್ಶಿ ಎನ್.ವೈ. ಬಸರಿಗಿಡದ ಹೇಳಿಕೆ
  • ಕೆರೆ ಹೂಳೆತ್ತುವ ಕಾಮಗಾರಿ ಸ್ಥಳ ಪರಿಶೀಲನೆ
  • ಮಾಸ್ಟರ್ ರೋಲ್ ಹಾಜರಾತಿ ಹಾಗೂ ಇತರೆ ದಾಖಲೆಗಳನ್ನು ಪ್ರತಿದಿನ ನವೀಕರಿಸಲು ಸೂಚಿಸಿದರು.
ಗುಳೇದಗುಡ್ಡ : ತಾಲೂಕಿನ ಕೆಲವಡಿ ಹಾಗೂ ಹಂಗರಗಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ವಿಬಿಜಿ ರಾಮ್ ಜಿ ಯೋಜನೆ ಅಡಿಯಲ್ಲಿ ನಡೆಯುತ್ತಿರುವ ಕೆರೆ ಹೂಳೆತ್ತುವ ಕಾಮಗಾರಿಗಳಿಗೆ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಎನ್.ವೈ. ಬಸರಿಗಿಡದ ಅವರು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದರು.
ಪರಿಶೀಲನೆ ವೇಳೆ ಕಾಮಗಾರಿ ಸ್ಥಳದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕೂಲಿ ಕಾರ್ಮಿಕರೊಂದಿಗೆ ಸಂವಾದ ನಡೆಸಿ, ಉದ್ಯೋಗ ಸೌಲಭ್ಯ, ಎನ್‌ಎಂಎಂಎಸ್ ಹಾಜರಾತಿ ನಿರ್ವಹಣೆ ಹಾಗೂ ಕಾಮಗಾರಿ ಪ್ರಗತಿಯ ಕುರಿತು ಮಾಹಿತಿ ಪಡೆದರು. ಕೆರೆಯಿಂದ ಹೊರತೆಗೆಯಲಾಗುತ್ತಿರುವ ಹೂಳನ್ನು ತಾಂತ್ರಿಕವಾಗಿ ಕೆರೆ ಬದಿಗಳಲ್ಲಿ ಹಾಗೂ ನಿಗದಿತ ಸ್ಥಳಗಳಲ್ಲಿ ಸಮರ್ಪಕವಾಗಿ ಹಾಕಬೇಕು ಎಂದು ತಾಂತ್ರಿಕ ಅಭಿಯಂತರರಿಗೆ ಸೂಚಿಸಿದರು
ಕಾಮಗಾರಿ ಸ್ಥಳದಲ್ಲಿ ಜಾಬ್ ಕಾರ್ಡ್ ಲಭ್ಯವಿಲ್ಲದಿರುವುದು ಗಮನಕ್ಕೆ ಬಂದ ಹಿನ್ನೆಲೆಯಲ್ಲಿ, ಕಾಮಗಾರಿ ನಡೆಯುವ ಸ್ಥಳದಲ್ಲಿಯೇ ಜಾಬ್ ಕಾರ್ಡ್ ಕಡ್ಡಾಯವಾಗಿ ಇರಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು. ಮಾಸ್ಟರ್ ರೋಲ್ ಹಾಜರಾತಿ ಹಾಗೂ ಇತರೆ ದಾಖಲೆಗಳನ್ನು ಪ್ರತಿದಿನ ನವೀಕರಿಸಲು ಸೂಚಿಸಿದರು.
ತಾಂತ್ರಿಕ ಅಭಿಯಂತರರು ಪ್ರತಿದಿನ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ, ಕಾಮಗಾರಿಯ ಪ್ರಗತಿ, ಗುಣಮಟ್ಟ ಹಾಗೂ ತಾಂತ್ರಿಕ ಮಾನದಂಡಗಳನ್ನು ಪರಿಶೀಲಿಸಬೇಕು. ಕಾರ್ಮಿಕರಿಗೆ ಅಗತ್ಯ ತಾಂತ್ರಿಕ ಮಾರ್ಗದರ್ಶನ ನೀಡುವುದರ ಜೊತೆಗೆ, ಕಾಮಗಾರಿಯನ್ನು ಯೋಜನೆಯ ಮಾರ್ಗಸೂಚಿಗಳಿಗೆ ಅನುಗುಣವಾಗಿ ಅನುಷ್ಠಾನಗೊಳಿಸಬೇಕು ಎಂದು ನಿರ್ದೇಶನ ನೀಡಿದರು.
ಉದ್ಯೋಗಕ್ಕಾಗಿ ಬೇಡಿಕೆ ಸಲ್ಲಿಸುವ ಪ್ರತಿಯೊಬ್ಬ ಅರ್ಹ ಕುಟುಂಬಕ್ಕೂ ಸಮಯಕ್ಕೆ ಸರಿಯಾಗಿ ಉದ್ಯೋಗ ಕಲ್ಪಿಸುವುದು ಗ್ರಾಮ ಪಂಚಾಯತ್‌ಗಳ ಜವಾಬ್ದಾರಿಯಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಗ್ರಾಮೀಣ ಕಾರ್ಮಿಕರನ್ನು ಯೋಜನೆಗೆ ಸೇರ್ಪಡೆಗೊಳಿಸಿ, ಉದ್ಯೋಗ ಸೃಷ್ಟಿ ಗುರಿಯನ್ನು ಸಾಧಿಸಲು ಅಧಿಕಾರಿಗಳು ವಿಶೇಷ ಗಮನಹರಿಸಬೇಕು ಎಂದು ತಿಳಿಸಿದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net