ನಗರದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಬಸವರಾಜ ಬೊಮ್ಮಾಯಿ ಸರ್ಕಾರ ಹಾಗೂ ಇದೇ ವರ್ಷ ಸಿದ್ದರಾಮಯ್ಯ ಸರ್ಕಾರ 9ನೇ ಷೆಡ್ಯೂಲ್‌ಗೆ ಸೇರಿಸುವಂತೆ ಕೇಂದ್ರಕ್ಕೆ ಪತ್ರ ಬರೆದಿದ್ದಾರೆ. ಆದರೂ ಅದಕ್ಕೆ ಬೇಕಾದ ಒತ್ತಡವನ್ನು ಹಾಕುತ್ತಿಲ್ಲ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮತ ಪಡೆದು ಗೆದ್ದು ಬಂದಿರುವ 224 ಶಾಸಕರು, ರಾಜ್ಯದ ಸಂಸದವರು ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕಬೇಕು ಎಂದು ಒತ್ತಾಯಿಸಿದರು.