ವಿದ್ಯಾರ್ಥಿಯ ಜನಿವಾರ ತೆಗಿಸಿರುವುದು ಸರಿಯಲ್ಲ

 ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿ ಬ್ರಾಹ್ಮಣ ಮಹಾಸಭಾ ಮುಖಂಡರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಅವರಿಗೆ ಮನವಿ ಸಲ್ಲಿಸಿದರು.
ಬಾಗಲಕೋಟೆ ನಗರದ ಜಿಲ್ಲಾಡಳಿತ ಭವನದಲ್ಲಿ ಬ್ರಾಹ್ಮಣ ಮಹಾಸಭಾ ಮುಖಂಡರು ಪ್ರತಿಭಟನೆ ನಡೆಸಿ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಅವರಿಗೆ ಮನವಿ ಸಲ್ಲಿಸಿದರು.
Published on

ಪ್ರಮುಖ ಮುಖ್ಯಾಂಶಗಳು

  • ಬ್ರಾಹ್ಮಣ ಮಹಾಸಭಾ ನೇತೃತ್ವದಲ್ಲಿ ಪ್ರತಿಭಟನೆ
  • ಧಾರ್ಮಿಕ ಭಾವನೆಗಳಿಗೆ ಧಕ್ಕೆ
  • ಜನಿವಾರವು ಬ್ರಾಹ್ಮಣ ಸಮುದಾಯದವರಿಗೆ ಕೇವಲ ದಾರವಲ್ಲ. ಅದು ಧಾರ್ಮಿಕ ನಂಬಿಕೆ, ಸಂಸ್ಕೃತಿ, ಸಂಪ್ರದಾಯ, ಆತ್ಮ ಗೌರವದ ಪ್ರತೀಕವಾಗಿದೆ.
ಬಾಗಲಕೋಟೆ : ಸಿಇಟಿ ಪರೀಕ್ಷೆ ಬರೆಯಲು ಹೋಗಿದ್ದ ವಿದ್ಯಾರ್ಥಿಯ ಜನಿವಾರ ತೆಗೆಸಿದ್ದ ಪ್ರಕರಣದಲ್ಲಿ ತಪ್ಪಿತಸ್ಥ ಕಾಲೇಜು, ಅಧಿಕಾರಿಗಳ ವಿರುದ್ದ ಕ್ರಮಕೈಗೊಳ್ಳಬೇಕು ಎಂದು ಅಖಿಲ ಭಾರತೀಯ ಬ್ರಾಹ್ಮಣ ಮಹಾ ಸಭಾ ನೇತೃತ್ವದಲ್ಲಿ ಜಿಲ್ಲಾಡಳಿತ ಭವನ ಎದುರು ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನಾ ಮರವಣಿಗೆ ಮೂಲಕ ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಮುಖಂಡರು ಅಧಿಕಾರಿಗಳು, ಸರ್ಕಾರ ವಿರುದ್ಧ ೋಷಣೆ ಕೂಗಿದರು. ಬಳಿಕ ಅಪರ ಜಿಲ್ಲಾಧಿಕಾರಿ ಅಶೋಕ ತೇಲಿ ಅವರಿಗೆ ಮನವಿ ಸಲ್ಲಿಸಿದರು.
ಜನಿವಾರವು ಬ್ರಾಹ್ಮಣ ಸಮುದಾಯದವರಿಗೆ ಕೇವಲ ದಾರವಲ್ಲ. ಅದು ಧಾರ್ಮಿಕ ನಂಬಿಕೆ, ಸಂಸ್ಕೃತಿ, ಸಂಪ್ರದಾಯ, ಆತ್ಮ ಗೌರವದ ಪ್ರತೀಕವಾಗಿದೆ. ಅದನ್ನು ತೆಗೆದಿಟ್ಟು ಪರೀಕ್ಷೆ ಬರೆಯಲು ಅವಕಾಶ ನೀಡಿದ್ದು, ಮೂಲ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ದೂರಿದರು.
ಬೆಂಗಳೂರಿನ ಮಡಿವಾಳದ ಕೃಪಾನಿಧಿ ಕಾಲೇಜು ಹಾಗೂ ಚಿಕ್ಕಬಳ್ಳಾಪುರದ ನಾಗಾರ್ಜುನ ಕಾಲೇಜಿನಲ್ಲಿ ಈ ಘಟನೆ ನಡೆದಿದ್ದು, ಧಾರ್ಮಿಕ ಭಾವನೆಗಳಿಗೆ ಧಕ್ಕೆ ತರಲಾಗಿದೆ. ಕೂಡಲೇ ಇದಕ್ಕೆ ಕಾರಣರಾದವರ ಮೇಲೆ ಕ್ರಮ ತೆಗೆದುಕೊಳ್ಳಬೇಕು. ಇಲ್ಲವಾದಲ್ಲಿ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಮುಂದಿನ ದಿನಗಳಲ್ಲಿ ಯಾವುದೇ ಪರೀಕ್ಷಾ ಕೇಂದ್ರಗಳಲ್ಲಿ ವಿದ್ಯಾರ್ಥಿಗಳ ಧಾರ್ಮಿಕ ಗುರುತುಗಳಿಗೆ ಧಕ್ಕೆ ಉಂಟಾಗದಂತೆ ಸ್ಪಷ್ಟ ಮಾರ್ಗಸೂಚಿ ರಚಿಸಬೇಕು. ಧಾರ್ಮಿಕ ಭಾವನೆಗಳನ್ನು ಗೌರವಿಸಬೇಕು. ಕೇವಲ ಭರವಸೆಯಲ್ಲಿ ಕಾಲ ಹರಣ ಮಾಡಬಾರದು ಎಂದು ಆಗ್ರಹಿಸಿದರು.
ಪ್ರತಿಭಟನೆ ಸಂದರ್ಭದಲ್ಲಿ ಪಂ. ಬಿಂದುಮಾಧವಾಚಾರ್ಯ ನಾಗಸಂಪಿಗೆ, ಪಂ. ಭೀಮಸೇನಾಚಾರ್ಯ ಪಾಂಡುರಂಗಿ, ಮಹಾಸಂಘದ ಜಿಲ್ಲಾಧ್ಯಕ್ಷ ನರಸಿಂಹ (ನವೀನ) ದೇಶಪಾಂಡೆ, ಮಹಾ ಸಂಘದ ರಾಜ್ಯ ಉಪಾಧ್ಯಕ್ಷ ನಾರಾಯಣ ದೇಸಾಯಿ, ಪಂ. ವಿಜಯೇಂದ್ರಾಚಾರ್ಯ ಯತ್ನಟ್ಟಿ, ಪ್ರಧಾನ ಕಾರ್ಯದರ್ಶಿ ಗುರುರಾಜ ಕುಲಕರ್ಣಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಮೋಹಿನಿ ಗಾಂವಕರ, ದ.ರಾ. ಪುರೋಹಿತ, ಪ್ರಹ್ಲಾದ ಹುಯಿಲಗೋಳ, ಸತ್ಯನಾರಾಯಣ ಗುಡಿ, ಅರುಣ ದೇಸಾಯಿ, ಕೆ.ಬಿ. ದೇಸಾಯಿ, ಅನಂತ ಮಳಗಿ, ಬದರಿ ಆಚಾರ್ಯ ಗುಡಿ, ಶ್ರೀಹರಿ ಡಂಬಳ, ಅರುಣ ಕುಲಕರ್ಣಿ, ಅಕ್ಷರಾ ಕುಲಕರ್ಣಿ, ಆನಂದ ಕಲಕೇರಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net