ಕೆರೂರದ ಕಿಲ್ಲಾಪೇಟೆಯ ಶಾದಿ ಮಹಲ್‌ನಲ್ಲಿ ನಡೆದ ಎಸ್‌ಐಆರ್ ಜಾಗತಿ ಸಭೆಯಲ್ಲಿ ಶಾಸಕ ಭೀಮಸೇನ ಚಿಮ್ಮನಕಟ್ಟಿ ಮಾತನಾಡಿದರು. ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ. ಎಂ.ಜಿ. ಕಿತ್ತಲಿ, ಮುಖಂಡರಾದ ಆನಂದ ದೊಡಮನಿ, ಶೌಕತಲಿ ವಾಚಮೇಕರ್, ಸದಾನಂದ ಮದಿ, ಪರಸಪ್ಪಜ್ಜ ಚೂರಿ, ಮೋದಿನಸಾಬ ದೊಡಕಟ್ಟಿ ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿಕೆ
ಎಸ್‌ಐಆರ್ ಜಾಗತಿ ಸಭೆ
ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು
ಕೆರೂರ: ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ಯಾವುದೇ ಅರ್ಹ ಮತದಾರರು ಹೊರಗುಳಿಯದಂತೆ ಕಾರ್ಯಕರ್ತರು ಬೂತ್ ಮಟ್ಟದಲ್ಲಿ ಜಾಗತಿ ಮೂಡಿಸಿ, ಪಕ್ಷ ಸಂಘಟನೆಗೂ ಒತ್ತು ನೀಡಬೇಕು ಎಂದು ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ಪಟ್ಟಣದ ಕಿಲ್ಲಾಪೇಟೆಯ ಶಾದಿ ಮಹಲ್‌ನಲ್ಲಿ ನಡೆದ ಎಸ್‌ಐಆರ್ ಜಾಗತಿ ಸಭೆಯಲ್ಲಿ ಮಾತನಾಡಿದ ಅವರು, ವೈಯಕ್ತಿಕ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಎಲ್ಲರೂ ಒಗ್ಗಟ್ಟಿನಿಂದ ಪಕ್ಷ ಸಂಘಟನೆಗೆ ಶ್ರಮಿಸಬೇಕು ಎಂದರು.
ಬಹುಮತದ ಸರ್ಕಾರದ ಲವಾಗಿ ಜನರಿಗೆ ಪಂಚ ಗ್ಯಾರಂಟಿ ಯೋಜನೆಗಳು ದೊರೆತಿದ್ದು, ಜನಸಾಮಾನ್ಯರ ಹಿತ ಕಾಪಾಡುವುದು ಪ್ರತಿಯೊಬ್ಬ ಕಾರ್ಯಕರ್ತನ ಜವಾಬ್ದಾರಿ ಎಂದು ಹೇಳಿದರು. ಬೂತ್ ಮಟ್ಟದ ಅಧಿಕಾರಿಗಳನ್ನು ಭೇಟಿ ಮಾಡಿ ಮತದಾರರ ಪಟ್ಟಿಯ ಪರಿಷ್ಕರಣೆ ಕುರಿತು ಮಾಹಿತಿ ಪಡೆದು, ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಗಮನಹರಿಸುವಂತೆ ಸೂಚಿಸಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಡಾ. ಎಂ.ಜಿ. ಕಿತ್ತಲಿ ಮಾತನಾಡಿ, ಎಸ್‌ಐಆರ್ ಕಾರ್ಯದಲ್ಲಿ ಕಾರ್ಯಕರ್ತರು ಹಾಗೂ ಬಿಎಲ್‌ಎಗಳು ಸಮನ್ವಯದಿಂದ ಕೆಲಸ ಮಾಡಬೇಕು. ಮತದಾರರ ಗುರುತಿನ ಚೀಟಿ ಮತ್ತು ಮತದಾನ ಹಕ್ಕಿನ ಮಹತ್ವವನ್ನು ಜನರಿಗೆ ತಿಳಿಸಬೇಕು ಎಂದು ಹೇಳಿದರು. ಪ್ರತಿಯೊಂದು ಬೂತ್‌ನ ಪ್ರಗತಿ ಹಾಗೂ ಸಮಸ್ಯೆಗಳ ಬಗ್ಗೆ ಅಕಾರಿಗಳಿಂದ ಮಾಹಿತಿ ಪಡೆದು ಪರಿಷ್ಕರಣೆ ಕಾರ್ಯ ಯಶಸ್ವಿಗೊಳಿಸುವಂತೆ ಕರೆ ನೀಡಿದರು.