ಉದ್ಯೋಗ ಖಾತ್ರಿ ದಿನಗೂಲಿ 382ರೂ. ಗೆ ಏರಿಕೆ

 ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ಸೋಮವಾರ ಗ್ರಾಮ ಸಭೆಯಲ್ಲಿ ಜಿಪಂ ಸಿಇಒ ಗಜಾನನ ಬಾಲೆ ಉದ್ಘಾಟಿಸಿದರು. ತಾಪಂ ಇಒ ಸುಭಾಷ ಸಂಪಗಾಂವಿ, ಸಹಾಯಕ ನಿರ್ದೇಶಕ ಸಿದ್ದು ನಕ್ಕರಗುಂದಿ, ಪಿಡಿಒ ರಮಜಾನ್ ನದ್ಾ ಇತರರಿದ್ದರು.
ಬಾಗಲಕೋಟೆ ತಾಲೂಕಿನ ಮುಗಳೊಳ್ಳಿ ಗ್ರಾಮದಲ್ಲಿ ಸೋಮವಾರ ಗ್ರಾಮ ಸಭೆಯಲ್ಲಿ ಜಿಪಂ ಸಿಇಒ ಗಜಾನನ ಬಾಲೆ ಉದ್ಘಾಟಿಸಿದರು. ತಾಪಂ ಇಒ ಸುಭಾಷ ಸಂಪಗಾಂವಿ, ಸಹಾಯಕ ನಿರ್ದೇಶಕ ಸಿದ್ದು ನಕ್ಕರಗುಂದಿ, ಪಿಡಿಒ ರಮಜಾನ್ ನದ್ಾ ಇತರರಿದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಯೋಜನೆ ಸದುಪಯೋಗ ಮಾಡಿಕೊಳ್ಳಲು ಜಿಪಂ ಸಿಇಒ ಸಲಹೆ
  • ಮುಗಳೊಳ್ಳಿ ಗ್ರಾಪಂನಲ್ಲಿ ಗ್ರಾಮಸಭೆ
  • ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಹೊಂದಿರುವ ಕುಟುಂಬವು ವರ್ಷಕ್ಕೆ ರೂ. 47,750 ವರೆಗೆ ಆದಾಯ ಗಳಿಸಲು ಅವಕಾಶವಿದೆ.
ಬಾಗಲಕೋಟೆ:

ವಿಬಿ ಜಿ ರಾಮ್ ಜಿ ಯೋಜನೆ ಅಡಿಯಲ್ಲಿ ವಾರ್ಷಿಕ ಮಾನದ ದಿನಗಳನ್ನು 100 ರಿಂದ 125ಕ್ಕೆ ಹೆಚ್ಚಿಸಿದ್ದು, ದಿನಗೂಲಿ ಸಹ ರೂ. 370 ರಿಂದ ರೂ. 382 ಕ್ಕೆ ಏರಿಕೆ ಆಗಿದ್ದು, ಯೋಜನೆ ಸದುಪಯೋಗ ಪಡಿಸಿಕೊಳ್ಳುವಂತೆ ಜಿಪಂ ಸಿಇಒ ಗಜಾನನ ಬಾಲೆ ಸಲಹೆ ನೀಡಿದರು.

ತಾಲೂಕಿನ ಮುಗಳೊಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಸೋಮವಾರ ನಡೆದ ಗ್ರಾಮ ಸಭೆಯಲ್ಲಿ ಯೋಜನೆ ಕುರಿತು ಗ್ರಾಮಸ್ಥರಿಗೆ ಮಾಹಿತಿ ನೀಡಿದ ಅವರು, ಒಂದು ಉದ್ಯೋಗ ಖಾತ್ರಿ ಜಾಬ್ ಕಾರ್ಡ್ ಹೊಂದಿರುವ ಕುಟುಂಬವು ವರ್ಷಕ್ಕೆ ರೂ. 47,750 ವರೆಗೆ ಆದಾಯ ಗಳಿಸಲು ಅವಕಾಶವಿದೆ ಎಂದು ತಿಳಿಸಿದರು.
ಯೋಜನೆಯಡಿ ಕೃಷಿ ಹೊಂಡ, ಕುರಿ ಶೆಡ್, ದನದ ಶೆಡ್ ಸೇರಿ ವೈಯಕ್ತಿಕ ಆಸ್ತಿ ನಿರ್ಮಾಣ ಕಾಮಗಾರಿಗಳು ಹಾಗೂ ರಸ್ತೆ, ಚರಂಡಿ, ಶಾಲಾ ತಡೆಗೋಡೆ, ಅಂಗನವಾಡಿ ಕಟ್ಟಡ, ಆಟದ ಮೈದಾನ ಸೇರಿದಂತೆ ಸಮುದಾಯ ಆಸ್ತಿ ನಿರ್ಮಾಣ ಕಾಮಗಾರಿಗಳನ್ನು ಕೈಗೊಂಡು ಗ್ರಾಮದ ಅಭಿವೃದ್ಧಿಗೆ ಸಹಕರಿಸುವಂತೆ ಹೇಳಿದರು.
ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗುವಂತೆ 60 ದಿನಗಳ ಕಾಲ ಯೋಜನೆಯ ಕೂಲಿ ಕೆಲಸದಿಂದ ವಿರಾಮ ನೀಡಲಾಗುತ್ತದೆ. ಕಾಮಗಾರಿ ಸ್ಥಳಗಳಲ್ಲಿ ಕಲ್ಪಿಸಲಾಗುವ ಮೂಲಸೌಲಭ್ಯಗಳ ಕುರಿತು ಮಾಹಿತಿ ನೀಡಿ, ಯೋಜನೆಯ ಸೌಲಭ್ಯಗಳನ್ನು ಗ್ರಾಮೀಣರು ಸಂಪೂರ್ಣವಾಗಿ ಸದುಪಯೋಗಪಡಿಸಿಕೊಳ್ಳುವಂತೆ ಮನವಿ ಮಾಡಿದರು.
ಗ್ರಾಮಸಭೆಯಲ್ಲಿ ಮುಗಳ್ಳೊಳ್ಳಿ ಗ್ರಾಮಕ್ಕೆ ಆರೋಗ್ಯ ಕೇಂದ್ರದ ಅಗತ್ಯತೆ ಬಗ್ಗೆ ಗ್ರಾಮಸ್ಥರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮನವಿ ಸಲ್ಲಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಇಒ ಬಾಲೆ, ಆರ್ ಆ್ಯಂಡ್ ಆರ್ ಇಲಾಖೆಯೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.
ಗ್ರಾಮಸಭೆಯ ಬಳಿಕ ಸಿಇಒ ಅವರು ಮುಗಳ್ಳೊಳ್ಳಿ ಎಲ್‌ಟಿ-1 ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿ ಕಟ್ಟಡದ ದುರಸ್ತಿ ಕಾಮಗಾರಿಗಳನ್ನು ಪರಿಶೀಲಿಸಿದರು. ಬಳಿಕ ಶುದ್ಧ ಕುಡಿಯುವ ನೀರಿನ ಘಟಕಕ್ಕೆ ಭೇಟಿ ನೀಡಿ, ತಾಂಡಾ ಅಭಿವೃದ್ಧಿ ನಿಗಮದ ಅಧಿಕಾರಿಗಳೊಂದಿಗೆ ಮಾತನಾಡಿ ಆಗಸ್ಟ್ 20ರೊಳಗೆ ಘಟಕವನ್ನು ದುರಸ್ತಿಪಡಿಸಿ ಗ್ರಾಮಸ್ಥರಿಗೆ ನೀರಿನ ಸೌಲಭ್ಯ ಒದಗಿಸುವಂತೆ ಸೂಚಿಸಿದರು.
ಇದೇ ವೇಳೆ ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿರುವ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಪೈಪ್‌ಲೈನ್ ಸೋರಿಕೆಯನ್ನು ಪರಿಶೀಲಿಸಿ, ತಕ್ಷಣ ದುರಸ್ತಿಗೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಭಗವತಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಘನ ತ್ಯಾಜ್ಯ ನಿರ್ವಹಣಾ ಘಟಕ ಹಾಗೂ ಉಪ ಆರೋಗ್ಯ ಕೇಂದ್ರಕ್ಕೂ ಭೇಟಿ ನೀಡಿ ಔಷಧ ಸಂಗ್ರಹ, ದಾಖಲೆಗಳನ್ನು ಪರಿಶೀಲಿಸಿದರು. ಕೇಂದ್ರದ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ ಸಿಬ್ಬಂದಿಗೆ ನಿರ್ದೇಶನ ನೀಡಿದರು.
ತಾಪಂ ಇಒ ಸುಭಾಷ ಸಂಪಗಾಂವಿ, ಸಹಾಯಕ ನಿರ್ದೇಶಕ ಸಿದ್ದು ನಕ್ಕರಗುಂದಿ, ಪಿಡಿಒ ರಮಜಾನ್ ನದ್ಾ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net