ಕುಳಗೇರಿ ಕ್ರಾಸ್‌ನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆಯಲ್ಲಿ ಪಿಯುಸಿಯಲ್ಲಿ ಸಾಧನೆ ಮಾಡಿದ ಅಲೆಮಾರಿ ಜನಾಂಗದ ನೀಲಾವತಿ ಯಣ್ಣಿ ಅವರನ್ನು ಸತ್ಕರಿಸಲಾಯಿತು. ಶಾಂತಲಿಂಗ ಶ್ರೀಗಳು, ಬಿಆರ್‌ಸಿ ಬಿ.ಆರ್. ರಾಯನಗೌಡ್ರ, ಸಿ.ಎ್. ಕುರಿ, ಎಂ.ಡಿ. ಸಕ್ಕರಿ, ಜೆ.ಆರ್. ಕದಂ, ಸಂಗಪ್ಪ ಪೂಜಾರ, ಪ್ರೊ.ಆರ್ ಬಿ ಚಿನಿವಾಲರ, ಅಮರೇಶ ತೆಗ್ಗಿನಮನಿ ಮತ್ತಿತರರಿದ್ದರು.
ಕುಳಗೇರಿ ಕ್ರಾಸ್: ನೈಋತ್ಯ ರೈಲ್ವೆ ಇಲಾಖೆಯ ನೇಮಕಾತಿ ಪರೀಕ್ಷೆಗಳಲ್ಲಿ ಕನ್ನಡವನ್ನು ಕಡೆಗಣಿಸಿರುವುದನ್ನು ತೀವ್ರವಾಗಿ ಖಂಡಿಸಿದರು. ಪ್ರಾದೇಶಿಕ ಭಾಷೆಗೆ ಅನ್ಯಾಯವಾಗುತ್ತಿದ್ದು, ಕನ್ನಡವನ್ನು ಪರೀಕ್ಷೆಯಲ್ಲಿ ಬಳಸದೇ ಇರುವುದು ಅಪಮಾನಕರ ಎಂದು ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದ ಪೂಜ್ಯ ಶಾಂತಲಿಂಗ ಶ್ರೀಗಳು ಹೇಳಿದರು.
ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ ಹಾಗೂ ಶ್ರೀದೊರೆಸ್ವಾಮಿ ವಿವಿದೋದ್ಧೇಶ ಟ್ರಸ್ಟ್ ಭೈರನಹಟ್ಟಿ ಇವರ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಕನ್ನಡ ಸಾಹಿತ್ಯ ಪರಿಷತ್ತಿನ ಸಂಸ್ಥಾಪನಾ ದಿನಾಚರಣೆ ಹಾಗೂ ನಾದಬ್ರಹ್ಮಾನಂದ ಸ್ವಾಮಿಗಳ ಜಯಂತ್ಯುತ್ಸವ ಸಮಾರಂಭದಲ್ಲಿ ಅವರು ಮಾತನಾಡಿದರು.
ಕರ್ನಾಟಕದಲ್ಲಿ ಕನ್ನಡ ಅಧಿಕತ ಭಾಷೆಯಾಗಿದೆ. ರಾಜ್ಯ ಸರಕಾರದ ಎಲ್ಲ ಇಲಾಖೆಗಳಲ್ಲಿ ಕನ್ನಡ ಅನುಷ್ಠಾನವನ್ನು ಕಡ್ಡಾಯಗೊಳಿಸಿದೆ. ಈ ಕುರಿತು ಮುಖ್ಯಮಂತ್ರಿ ಹಾಗೂ ರಾಜ್ಯದ 28 ಸಂಸದರು, ರಾಜ್ಯ ಸಭಾ ಸದಸ್ಯರು ಮತ್ತು ರೈಲ್ವೆ ಇಲಾಖೆ ಸಚಿವ ಮಾನ್ಯ ವಿ. ಸೋಮಣ್ಣನವರು ಮೌನ ಮುರಿದು ಕನ್ನಡಕ್ಕಾಗುತ್ತಿರುವ ಅನ್ಯಾಯವನ್ನು ತಡೆಯಬೇಕು ಎಂದು ಪೂಜ್ಯರು ಮನವಿ ಮಾಡಿದರು.
ಕಂಠಿ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಚನ್ನಬಸಪ್ಪ ಕಂಠಿ, ಕನ್ನಡ ಸಾಹಿತ್ಯ ಪರಿಷತ್ ಕನ್ನಡ ಭಾಷೆ, ಸಾಹಿತ್ಯ ಹಾಗೂ ಸಂಸ್ಕೃತಿಯ ಉಳಿವಿಗೆ ಮಹತ್ವದ ಕೊಡುಗೆ ನೀಡುತ್ತಿದೆ ಎಂದು ಹೇಳಿದರು. ರಾಜ್ಯ ಏಕೀಕರಣದಲ್ಲೂ ಪರಿಷತ್ತಿನ ಪಾತ್ರ ಮಹತ್ವದ್ದಾಗಿದೆ ಎಂದರು.
ಅಲೆಮಾರಿ ಜನಾಂಗದ ನೀಲಾವತಿ ಯಣ್ಣಿ ಹಾಗೂ ಸರ್ಕಾರಿ ಶಾಲೆಯ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು.
ಬಿಆರ್‌ಸಿ ಬಿ.ಆರ್. ರಾಯನಗೌಡ್ರ, ಸಿ.ಎ್. ಕುರಿ, ಎಂ.ಡಿ. ಸಕ್ಕರಿ, ಜೆ.ಆರ್. ಕದಂ, ಸಂಗಪ್ಪ ಪೂಜಾರ, ಪ್ರೊ.ಆರ್ ಬಿ ಚಿನಿವಾಲರ, ಅಮರೇಶ ತೆಗ್ಗಿನಮನಿ ಸೇರಿ ಅನೇಕರು ಉಪಸ್ಥಿತರಿದ್ದರು. ಪ್ರೊ. ಆರ್.ಕೆ. ಐನಾಪೂರ ನಿರೂಪಿಸಿದರು. ಮಹಾಂತೇಶ ಹಿರೇಮಠ ಸ್ವಾಗತಿಸಿ, ವಂದಿಸಿದರು.