ಸ್ವಚ್ಛತೆ ಅರಿವು ಪ್ರತಿಯೊಬ್ಬರಲ್ಲೂ ಮೂಡಲಿ

ಬಾಗಲಕೋಟೆ ತಾಲೂಕಿನ ಮುಚಖಂಡಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಗುರುವಾರ ವೀರಭದ್ರೇಶ್ವರ ದೇವಸ್ಥಾನದ ಆವರಣ ಸ್ವಚ್ಛಗೊಳಿಸಿ, ಸಸಿ ನೆಡಲಾಯಿತು. ಜಿಪಂ ಸಿಇಒ ಗಜಾನನ ಬಾಲೆ, ದೇವಸ್ಥಾನದ ಅರ್ಚಕ ಪ್ರಭು ಸ್ವಾಮಿಗಳು, ಜಿಪಂ ಅಽಕಾರಿಗಳಾದ ಸಿದ್ಧರಾಮೇಶ್ವರ ಉಕ್ಕಲಿ, ಅಲ್ಲಮಪ್ರಭು ಅಲ್ಲಾಪುರ ಇತರರಿದ್ದರು.
ಬಾಗಲಕೋಟೆ ತಾಲೂಕಿನ ಮುಚಖಂಡಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಗುರುವಾರ ವೀರಭದ್ರೇಶ್ವರ ದೇವಸ್ಥಾನದ ಆವರಣ ಸ್ವಚ್ಛಗೊಳಿಸಿ, ಸಸಿ ನೆಡಲಾಯಿತು. ಜಿಪಂ ಸಿಇಒ ಗಜಾನನ ಬಾಲೆ, ದೇವಸ್ಥಾನದ ಅರ್ಚಕ ಪ್ರಭು ಸ್ವಾಮಿಗಳು, ಜಿಪಂ ಅಽಕಾರಿಗಳಾದ ಸಿದ್ಧರಾಮೇಶ್ವರ ಉಕ್ಕಲಿ, ಅಲ್ಲಮಪ್ರಭು ಅಲ್ಲಾಪುರ ಇತರರಿದ್ದರು.ಬಾಗಲಕೋಟೆ ತಾಲೂಕಿನ ಮುಚಖಂಡಿಯಲ್ಲಿ ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಗುರುವಾರ ವೀರಭದ್ರೇಶ್ವರ ದೇವಸ್ಥಾನದ ಆವರಣ ಸ್ವಚ್ಛಗೊಳಿಸಿ, ಸಸಿ ನೆಡಲಾಯಿತು. ಜಿಪಂ ಸಿಇಒ ಗಜಾನನ ಬಾಲೆ, ದೇವಸ್ಥಾನದ ಅರ್ಚಕ ಪ್ರಭು ಸ್ವಾಮಿಗಳು, ಜಿಪಂ ಅಽಕಾರಿಗಳಾದ ಸಿದ್ಧರಾಮೇಶ್ವರ ಉಕ್ಕಲಿ, ಅಲ್ಲಮಪ್ರಭು ಅಲ್ಲಾಪುರ ಇತರರಿದ್ದರು.
Published on: 

ಬಾಗಲಕೋಟೆ: ಸ್ವಚ್ಛತೆ ಬಗ್ಗೆ ಪ್ರತಿಯೊಬ್ಬರೂ ಅರಿವು ಹೊಂದಿ, ಸಾರ್ವಜನಿಕರ ಸ್ಥಳಗಳು ಹಾಗೂ ಪ್ರವಾಸಿ ತಾಣಗಳನ್ನು ಸ್ವಚ್ಛವಾಗಿಡುವ ಜವಾಬ್ದಾರಿಯನ್ನು ವಹಿಸಬೇಕು ಎಂದು ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಜಾನನ ಬಾಲೆ ಹೇಳಿದರು.

ಮುಚಖಂಡಿ ವೀರಭದ್ರೇಶ್ವರ ದೇವಸ್ಥಾನದ ಆವರಣದಲ್ಲಿ ಗುರುವಾರ ಸ್ವಚ್ಛ ಭಾರತ ಮಿಷನ್ ಯೋಜನೆಯಡಿ ಹಮ್ಮಿಕೊಂಡ ಸ್ವಚ್ಛತಾ ಹೀ ಸೇವಾ ಅಭಿಯಾನ ಕಾರ್ಯಕ್ಕೆ ಚಾಲನೆ ನೀಡಿ ಮಾತನಾಡಿದರು.

ಸ್ವಚ್ಛತೆ ಕೇವಲ ಸರ್ಕಾರ ಅಥವಾ ಸ್ಥಳೀಯ ಸಂಸ್ಥೆಗಳ ಜವಾಬ್ದಾರಿಯಲ್ಲ. ಸಾರ್ವಜನಿಕರೂ ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಡಲು ಸಕ್ರಿಯವಾಗಿ ಕೈಜೋಡಿಸಬೇಕು. ಎಲ್ಲಂದರಲ್ಲಿ ಪ್ಲಾಸ್ಟಿಕ್ ಹಾಗೂ ತ್ಯಾಜ್ಯವನ್ನು ಎಸೆಯುವುದರಿಂದ ಪರಿಸರದ ಮೇಲೆ ದುಷ್ಟಪರಿಣಾಮ ಉಂಟಾಗುತ್ತದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ವಿಶೇಷವಾಗಿ ಪ್ರವಾಸಿ ತಾಣಗಳಲ್ಲಿ ಪ್ಲಾಸ್ಟಿಕ್ ಬಳಕೆ ಸಾಧ್ಯವಾದಷ್ಟು ತಪ್ಪಿಸಬೇಕು ಎಂದರು.ಮನೆಗಳಲ್ಲಿ ಉತ್ಪತ್ತಿಯಾಗುವ ಕಸವನ್ನು ಮೂಲದಲ್ಲಿಯೇ ಹಸಿ ಕಸ ಮತ್ತು ಒಣ ಕಸ ಎಂದು ವಿಂಗಡಿಸಿ ಸ್ಥಳೀಯ ಸಂಸ್ಥೆಗಳ ತ್ಯಾಜ್ಯ ಸಂಗ್ರಹಣ ವ್ಯವಸ್ಥೆಗೆ ನೀಡಬೇಕು. ಇದರಿಂದ ತ್ಯಾಜ್ಯವನ್ನು ವೈಜ್ಞಾನಿಕವಾಗಿ ಸಂಸ್ಕರಿಸಲು ಹಾಗೂ ಮರುಬಳಕೆಗೆ ಅನುಕೂಲವಾಗಲಿದೆ. ಸಾರ್ವಜನಿಕರು ಕಸ ವಿಂಗಡಣೆಯ ಅಭ್ಯಾಸವನ್ನು ದೈನಂದಿನ ಜೀವನದ ಭಾಗವನ್ನಾಗಿ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಸ್ವಚ್ಛತಾ ಹೀ ಸೇವಾ ಅಭಿಯಾನದಡಿ ಜಿಲ್ಲೆಯ ವಿವಿಧ ಗ್ರಾಮೀಣ ಪ್ರದೇಶಗಳಲ್ಲಿ ಸ್ವಚ್ಛತಾ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದ್ದು, ಸ್ವಚ್ಛತೆಯ ಮಹತ್ವದ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಲಾಗುತ್ತಿದೆ. ಸ್ವಚ್ಛ ಪರಿಸರ ನಿರ್ಮಾಣಕ್ಕೆ ಪ್ರತಿಯೊಬ್ಬರ ಸಹಕಾರ ಅಗತ್ಯವಾಗಿದೆ ಎಂದರು.

ಸ್ವಚ್ಛತಾ ಹೀ ಸೇವಾ ಅಭಿಯಾನದ ಅಂಗವಾಗಿ ಜಿಪಂ ಸಿಇಒ ಗಜಾನನ ಬಾಲೆ, ಮುಚಖಂಡಿ ದೇವಸ್ಥಾನದ ಮುಖ್ಯ ಅರ್ಚಕ ಪ್ರಭು ಸ್ವಾಮಿಗಳು, ಜಿಪಂ ಮುಖ್ಯ ಲೆಕ್ಕಾಧಿಕಾರಿ ಸಿದ್ದರಾಮೇಶ್ವರ ಉಕ್ಕಲಿ, ಮುಖ್ಯ ಯೋಜನಾಧಿಕಾರಿ ಅಲ್ಲಮಪ್ರಭು ಅಲ್ಲಾಪುರ, ಸಹಾಯಕ ಯೋಜನಾಧಿಕಾರಿ ಭೀಮಪ್ಪ ತಳವಾರ, ತಾಪಂ ಕಾರ್ಯನಿರ್ವಾಹಕ ಅಧಿಕಾರಿ ಸುಭಾಸ ಸಂಪಗಾವಿ ಅವರು ಶ್ರಮದಾನದಲ್ಲಿ ಪಾಲ್ಗೊಂಡು ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಕಾರ್ಯ ಕೈಗೊಂಡರು. ಪ್ರದೀಪ ಯಾವಗಲ್ಲ, ಪಿಡಿಒ ರತ್ನಾ ಮೂಕಿ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net