ಭಗವಂತನ ನಾಮಸ್ಮರಣೆಯಿಂದ ಜೀವನ ಪಾವನ

ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ ಕಾಶಿಲಿಂಗ ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ದುಂಡೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
ಜಮಖಂಡಿ ತಾಲೂಕಿನ ಹುನ್ನೂರು ಗ್ರಾಮದ ಕಾಶಿಲಿಂಗ ಜಾತ್ರಾ ಮಹೋತ್ಸವ ಹಾಗೂ ದೇವಸ್ಥಾನ ಉದ್ಘಾಟನಾ ಸಮಾರಂಭದಲ್ಲಿ ದುಂಡೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಹುನ್ನೂರಿನಲ್ಲಿ ಕಾಶಿಲಿಂಗ ಜಾತ್ರೆಗೆ ಅದ್ದೂರಿ ಚಾಲನೆ
  • ಜೀರ್ಣೋದ್ಧಾರಗೊಂಡ ದೇವಸ್ಥಾನದ ಉದ್ಘಾಟನೆ
ಜಮಖಂಡಿ: ತಾಲೂಕಿನ ಹುನ್ನೂರು ಗ್ರಾಮದಲ್ಲಿ 12 ವರ್ಷಗಳ ಬಳಿಕ ಆಯೋಜಿಸಿದ್ದ ಕಾಶಿಲಿಂಗ ದೇವರ ಬೃಹತ್ ಜಾತ್ರಾ ಮಹೋತ್ಸವ ಹಾಗೂ ಜೀರ್ಣೋದ್ಧಾರಗೊಂಡ ದೇವಸ್ಥಾನದ ಉದ್ಘಾಟನೆ ಸಮಾರಂಭ ಅದ್ದೂರಿಯಾಗಿ ನೆರವೇರಿತು.
ಮಧುರಖಂಡಿ ಮತ್ತು ನಂದೇಶ್ವರ ಕಮರಿಮಠದ ದುಂಡೇಶ್ವರ ಮಹಾಸ್ವಾಮಿಗಳು ಆಶೀರ್ವಚನ ನೀಡಿ, ಭಯ-ಭಕ್ತಿ ಹಾಗೂ ಪ್ರಾರ್ಥನೆಯೊಂದಿಗೆ ಭಗವಂತನ ನಾಮಸ್ಮರಣೆ ಮಾಡಿದರೆ ಜೀವನ ಪಾವನವಾಗುತ್ತದೆ ಎಂದು ತಿಳಿಸಿದರು. ಸನ್ಮಾರ್ಗದಲ್ಲಿ ನಡೆಯುವ ಮೂಲಕ ಬದುಕು ಸುಂದರಗೊಳ್ಳುತ್ತದೆ ಎಂದು ಅವರು ಹೇಳಿದರು.ʼ
ಜಾತ್ರೆಯ ಅಂಗವಾಗಿ ಬೆಳಗ್ಗೆ ಜ್ಯೋತಿರ್ಲಿಂಗಗಳಿಗೆ ಅಭಿಷೇಕ ನಡೆಯಿತು. ಸಂಜೆ ಶ್ರೀಗಳನ್ನು ಭವ್ಯ ಮೆರವಣಿಗೆಯ ಮೂಲಕ ಬರಮಾಡಿಕೊಳ್ಳಲಾಯಿತು. ಕರಡಿ ಸಂಬಾಳ, ಹಲಿಗೆ, ಡೊಳ್ಳು ಮೇಳಗಳು ಮತ್ತು ಭಜನಾ ತಂಡಗಳ ಭಾಗವಹಿಸುವಿಕೆಯಿಂದ ಮೆರವಣಿಗೆ ವಿಶೇಷ ಕಳೆ ಪಡೆದಿತು.
ಉದ್ಘಾಟನಾ ಸಮಾರಂಭದಲ್ಲಿ ದಾನಿಗಳನ್ನು ಸನ್ಮಾನಿಸಲಾಯಿತು. ಭಕ್ತರಿಗೆ ಪ್ರಸಾದ ವ್ಯವಸ್ಥೆ ಮಾಡಲಾಗಿದ್ದು, ರಾತ್ರಿ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net