ಮುಧೋಳ ನಗರದ ಸರ್ಕಾರಿ ತಾಲೂಕು ಆಸ್ಪತ್ರೆಗೆ ಶಾಸಕ, ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸದುಗೌಡ ಪಾಟೀಲ, ಅಶೋಕ ಕಿವಡಿ, ಅಧಿಕಾರಿಗಳಿದ್ದರು.
ಬಡ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು.
ಮುಧೋಳ:
ಆಸ್ಪತ್ರೆಯಲ್ಲಿ ಶುಚಿತ್ವಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ರೋಗಿಗಳಿಗೆ ಹೊರಗಡೆಯಿಂದ ಔಷಧಗಳನ್ನು ಬರೆಯದಂತೆ ಎಚ್ಚರಿಕೆ ವಹಿಸಬೇಕು ಎಂದು ಶಾಸಕ, ಮಾಜಿ ಸಚಿವ ಆರ್.ಬಿ. ತಿಮ್ಮಾಪೂರ ಕಟ್ಟುನಿಟ್ಟಿನ ಸೂಚನೆ ನೀಡಿದರು.
ನಗರದ ಸರ್ಕಾರಿ ತಾಲೂಕು ಆಸ್ಪತ್ರೆಗೆ ತಿಮ್ಮಾಪೂರ ಶುಕ್ರವಾರ ದಿಢೀರ್ ಭೇಟಿ ನೀಡಿ, ಆಸ್ಪತ್ರೆಯ ಕಾರ್ಯ ನಿರ್ವಹಣೆ ಹಾಗೂ ರೋಗಿಗಳಿಗೆ ದೊರೆಯುತ್ತಿರುವ ಸೌಲಭ್ಯಗಳ ಬಗ್ಗೆ ಪರಿಶೀಲನೆ ನಡೆಸಿದರು.
ಆಸ್ಪತ್ರೆಯ ವಿವಿಧ ವಿಭಾಗಗಳಿಗೆ ಭೇಟಿ ನೀಡಿದ ಶಾಸಕರು, ರೋಗಿಗಳಿಗೆ ಲಭ್ಯವಿರುವ ಚಿಕಿತ್ಸಾ ಸೌಲಭ್ಯಗಳು, ಅಗತ್ಯ ಔಷಧಗಳ ಲಭ್ಯತೆ ಮತ್ತು ವಾರ್ಡ್‌ಗಳಲ್ಲಿನ ಸ್ವಚ್ಛತೆಯ ಕುರಿತು ಕೂಲಂಕಷವಾಗಿ ಪರಿಶೀಲನೆ ನಡೆಸಿದರು.
ವೈದ್ಯಾಧಿಕಾರಿಗಳು ಹಾಗೂ ಸಿಬ್ಬಂದಿ ವರ್ಗದವರೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ಬಡ ರೋಗಿಗಳಿಗೆ ಹಾಗೂ ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ನೋಡಿಕೊಳ್ಳಬೇಕು. ಚಿಕಿತ್ಸೆಯಲ್ಲಿ ವಿಳಂಬ ಮಾಡದೇ ತ್ವರಿತವಾಗಿ ಸ್ಪಂದಿಸಬೇಕು ಮತ್ತು ಗುಣಮಟ್ಟದ ಆರೋಗ್ಯ ಸೇವೆ ಒದಗಿಸಬೇಕು ಎಂದು ತಿಳಿಸಿದರು.
ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ನ್ಯಾಯವಾದಿ ಅಶೋಕ ಕಿವಡಿ, ಮುಖಂಡರಾದ ಸದಾಶಿವ ಕದಮ, ಬಸು ಬಳಿಗಾರ, ಚಿನ್ನು ಅಂಬಿ, ಪಿಂಟು ಕದಮ ಇತರರಿದ್ದರು.