ಕಾನೂನು ಸುವ್ಯವಸ್ಥೆ ಕಾಪಾಡಿ

 ಇಳಕಲ್ಲ ಪೋಲಿಸ್ ಠಾಣೆಯ ಆವರಣದಲ್ಲಿ ಬ್ರಕೀದ್ ಹಬ್ಬದ ಅಂಗವಾಗಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಮಾತನಾಡಿದರು. ಪಿಎಸ್‌ಐ ಮಂಜುನಾಥ ಪಾಟೀಲ, ಮಲ್ಲಿಕಾರ್ಜುನ ಸತ್ತಿಗೌಡರ ಇದ್ದರು.
ಇಳಕಲ್ಲ ಪೋಲಿಸ್ ಠಾಣೆಯ ಆವರಣದಲ್ಲಿ ಬ್ರಕೀದ್ ಹಬ್ಬದ ಅಂಗವಾಗಿ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಮಾತನಾಡಿದರು. ಪಿಎಸ್‌ಐ ಮಂಜುನಾಥ ಪಾಟೀಲ, ಮಲ್ಲಿಕಾರ್ಜುನ ಸತ್ತಿಗೌಡರ ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಕರೆ
  • ಶಾಂತಿ ಸಮಿತಿ ಸಭೆ
  • ಸರ್ಕಾರ ಹಾಗೂ ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ
ಇಳಕಲ್ಲ: ಬಕ್ರೀದ್ ಹಬ್ಬವನ್ನು ಶಾಂತಿ, ಸೌಹಾರ್ದತೆ ಹಾಗೂ ಕಾನೂನು ಚೌಕಟ್ಟಿನೊಳಗೆ ಆಚರಿಸುವಂತೆ ಹುನಗುಂದ ಡಿವೈಎಸ್‌ಪಿ ಸಂತೋಷ ಬನ್ನಟ್ಟಿ ಸಾರ್ವಜನಿಕರಿಗೆ ಕರೆ ನೀಡಿದರು.
ನಗರದ ಶಹರ್ ಪೊಲೀಸ್ ಠಾಣೆ ಆವರಣದಲ್ಲಿ ಬ್ರಕೀದ್ ಹಬ್ಬದ ಅಂಗವಾಗಿ ಭಾನುವಾರ ನಡೆದ ಶಾಂತಿ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಹಬ್ಬದ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಜಾಗರೂಕತೆ ವಹಿಸಬೇಕು ಎಂದು ಸೂಚಿಸಿದರು. ಸಾರ್ವಜನಿಕರು ಪೊಲೀಸ್ ಇಲಾಖೆಯೊಂದಿಗೆ ಸಹಕರಿಸಿ ಕಾನೂನು ಸುವ್ಯವಸ್ಥೆ ಕಾಪಾಡಬೇಕು ಎಂದು ಹೇಳಿದರು.
ಪಿಎಸ್‌ಐ ಮಂಜುನಾಥ ಪಾಟೀಲ ಮಾತನಾಡಿ, ಸರ್ಕಾರ ಹಾಗೂ ಪೊಲೀಸ್ ಇಲಾಖೆ ನೀಡಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅಗತ್ಯ ಎಂದು ತಿಳಿಸಿದರು.
ಮುಸ್ಲಿಂ ಸಮುದಾಯದ ಮುಖಂಡ ಅಹ್ಮದಸಾಬ ಬಾಗವಾನ ಮಾತನಾಡಿ, ನಗರವು ಭಾವೈಕ್ಯತೆಗೆ ಹೆಸರಾಗಿದ್ದು, ಹಿಂದೂ-ಮುಸ್ಲಿಂ ಬಾಂಧವರು ಸಹೋದರತ್ವದಿಂದ ಎಲ್ಲ ಹಬ್ಬಗಳನ್ನು ಶಾಂತವಾಗಿ ಆಚರಿಸುತ್ತಾ ಬಂದಿದ್ದಾರೆ ಎಂದರು.
ಪಿಎಸ್‌ಐ ಮಲ್ಲಿಕಾರ್ಜುನ ಸತ್ತಿಗೌಡರ, ಮಹಮ್ಮದಸಾಬ ಖಾಜಿ, ಮಹಮ್ಮದಯುಸ್ು ಬಾಗವಾನ, ಮುರ್ತುಜಸಾಬ ಚಳಗೇರಿ, ರಿಯಾಜ ಮಕಾಂನದಾರ,ಅಶೋಕ ಪೂಜಾರಿ, ಶ್ಯಾಮ ಮುಧೋಳ ಮತ್ತಿತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net