ಸಂಪನ್ಮೂಲ ವ್ಯಕ್ತಿ ಸಂಗಮೇಶ ಸನತಂಗಿ ತರಬೇತಿ ನೀಡಿದರು. ಮತದಾರ ಪಟ್ಟಿಗೆ ಹೊಸ ಹೆಸರು ಸೇರ್ಪಡೆ, ಹೆಸರು ತಿದ್ದುಪಡಿ, ವಿಳಾಸ ಬದಲಾವಣೆ, ಮೃತ ಹಾಗೂ ಸ್ಥಳಾಂತರಗೊಂಡ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಕೈಬಿಡುವ ಪ್ರಕ್ರಿಯೆಗಳ ಕುರಿತು ಸಮಗ್ರ ಮಾಹಿತಿ ನೀಡಿದರು. ಮತಗಟ್ಟೆ ಮಟ್ಟದ ಅಧಿಕಾರಿಗಳು ಕ್ಷೇತ್ರದಲ್ಲಿ ಮನೆ ಮನೆಗೆ ಭೇಟಿ ನೀಡಿ ಮಾಹಿತಿಯನ್ನು ಸಂಗ್ರಹಿಸುವಾಗ ಅನುಸರಿಸಬೇಕಾದ ನಿಯಮಗಳು ಹಾಗೂ ಮಾರ್ಗಸೂಚಿಗಳ ಬಗ್ಗೆ ವಿವರವಾಗಿ ತಿಳಿಸಲಾಯಿತು.