ಮಹಾಲಿಂಗಪುರ : ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದಿಂದ ನೀಡುವ 2024ನೇ ಸಾಲಿನ ವಾರ್ಷಿಕ ಪ್ರಶಸ್ತಿಗೆ ಹಿರಿಯ ಪತ್ರಕರ್ತ ಮಹೇಶ ಮನ್ನಯ್ಯನವರಮಠ ಭಾಜನರಾಗಿದ್ದಾರೆ. ಅತ್ಯುತ್ತಮ ಸ್ಕೂಪ್ ವರದಿಗಾಗಿ ನೀಡುವ `ಬಿ.ಎಸ್. ವೆಂಕಟರಾಂ ಪ್ರಶಸ್ತಿ'ಗೆ ಆಯ್ಕೆಯಾಗಿದ್ದಾರೆ. ಬೀದರನಲ್ಲಿ ಏ. 12ರಂದು ನಡೆಯುವ ಸಂಘದ 40ನೇ ರಾಜ್ಯ ಪತ್ರಕರ್ತರ ಸಮ್ಮೇಳನದಲ್ಲಿ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ತಿಳಿಸಿದ್ದಾರೆ.