ಸುಸ್ಥಿರ ಉದ್ಯೋಗಾವಕಾಶಕ್ಕೆ ಕ್ರಮ

ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಉದ್ಯೋಗ ನಿಧಿ ಅನುಷ್ಠಾನ ಕುರಿತು ಸಭೆ ನಡೆಯಿತು. ಜಿಲ್ಲಾ ಅಗ್ರಣಿ ಬ್ಯಾಂಕಿನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಿರಣ ಮಂಡಿ ಇತರರಿದ್ದರು.
ಬಾಗಲಕೋಟೆ ಜಿಲ್ಲಾಧಿಕಾರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಉದ್ಯೋಗ ನಿಧಿ ಅನುಷ್ಠಾನ ಕುರಿತು ಸಭೆ ನಡೆಯಿತು. ಜಿಲ್ಲಾ ಅಗ್ರಣಿ ಬ್ಯಾಂಕಿನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಿರಣ ಮಂಡಿ ಇತರರಿದ್ದರು.ಬಾಗಲಕೋಟೆ ಜಿಲ್ಲಾಽಕಾರಿ ಸಭಾಂಗಣದಲ್ಲಿ ಮಂಗಳವಾರ ಜಿಲ್ಲಾಧಿಕಾರಿ ಸಂಗಪ್ಪ ಅಧ್ಯಕ್ಷತೆಯಲ್ಲಿ ಉದ್ಯೋಗ ನಿಧಿ ಅನುಷ್ಠಾನ ಕುರಿತು ಸಭೆ ನಡೆಯಿತು. ಜಿಲ್ಲಾ ಅಗ್ರಣಿ ಬ್ಯಾಂಕಿನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಕೈಗಾರಿಕಾ ಇಲಾಖೆ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಿರಣ ಮಂಡಿ ಇತರರಿದ್ದರು.
Published on: 

ಬಾಗಲಕೋಟೆ: ಉದ್ಯೋಗ ನಿಧಿ ಯೋಜನೆಯಡಿ ಆಯ್ಕೆಯಾದ 11 ಜಿಲ್ಲೆಗಳಲ್ಲಿ ಬಾಗಲಕೋಟೆ ಜಿಲ್ಲೆಯು ಒಂದಾಗಿದ್ದು, ಜಿಲ್ಲೆಯಲ್ಲಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ಕ್ರಮಕೈಗೊಳ್ಳುವಂತೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರದ ಜಿಲ್ಲಾಧಿಕಾರಿಗಳ ಸಭಾಂಗಣದಲ್ಲಿ ಮಂಗಳವಾರ ಉದ್ಯೋಗ ನಿಧಿ ಯೋಜನೆ ಅನುಷ್ಠಾನ ಕುರಿತು ಜರುಗಿದ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಆರ್ಥಿಕವಾಗಿ ಹಿಂದುಳಿದ ಜಿಲ್ಲೆಗಳಲ್ಲಿ ಕೈಗಾರಿಕೆ ಹಾಗೂ ಖಾಸಗಿ ಹೂಡಿಕೆಯನ್ನು ಹೆಚ್ಚಿಸುವುದು ಮತ್ತು ಸ್ಥಳೀಯ ಯುವಕರಿಗೆ ಸುಸ್ಥಿರ ಉದ್ಯೋಗಾವಕಾಶಗಳನ್ನು ಸೃಷ್ಟಿಸುವ ಉದ್ದೇಶದಿಂದ ಪ್ರೊ.ಎಂ.ಗೋವಿAದ ರಾವ್ ಸಮಿತಿಯ ವರದಿ ಮತ್ತು ಶಿಫಾರಸುಗಳ ಆಧಾರದ ಮೇಲೆ ರಾಜ್ಯದ 11 ಕಡಿಮೆ ಅಭಿವೃದ್ಧಿ ಹೊಂದಿದ ಜಿಲ್ಲೆಗಳಲ್ಲಿ ಉದ್ಯೋಗ ನಿಧಿ ಯೋಜನೆಯನ್ನು ಸರ್ಕಾರ ಅನುಷ್ಠಾನಗೊಳಿಸುತ್ತಿದೆ ಎಂದರು.

ಈ ಯೋಜನೆಯಡಿ ಹೊಸ ಉದ್ಯೋಗ ಸೃಷ್ಟಿಸುವ ಅರ್ಹ ಉದ್ಯಮಿಗಳು, ಕೈಗಾರಿಕೆಗಳಿಗೆ ಪ್ರತಿ ಉದ್ಯೋಗ ಸೃಷ್ಟಿಗೆ ಮಾಸಿಕ ಉದ್ಯೋಗ ಪ್ರೋತ್ಸಾಹಧನವಾಗಿ 2,500 ರೂ.ಗಳಂತೆ ಗರಿಷ್ಠ 24 ತಿಂಗಳ ವರೆಗೆ ನೀಡಲಾಗುತ್ತದೆ. ವಾರ್ಷಿಕವಾಗಿ ಸುಮಾರು 4550 ಉದ್ಯೋಗ ಸೃಷ್ಟಿಸುವ ಗುರಿ ಇದ್ದು, ಯೋಜನೆಯ ಮಾರ್ಗಸೂಚಿಯನ್ವಯ ಯೋಜನೆ ಅನುಷ್ಠಾನಗೊಳಿಸಬೇಕಿದೆ. ಇದಕ್ಕಾಗಿ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಮಟ್ಟದ ಅನುಷ್ಠಾನ ಸಮಿತಿಯನ್ನು ರಚಿಸಲಾಗುತ್ತಿದ್ದು, ಈ ಸಮಿತಿಗೆ ಜಿಲ್ಲೆಯ ಪ್ರಮುಖ ಕೈಗಾರಿಕಾ ಸಂಘಗಳ ಗರಿಷ್ಟ ಇಬ್ಬರು ಪ್ರತಿನಿಧಿಗಳನ್ನು ಸದಸ್ಯರಾಗಿ ಆಯ್ಕೆ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಆರಂಭದಲ್ಲಿ ಯೋಜನೆಯ ವ್ಯಾಪ್ತಿಯಿಂದ ಬಾಗಲಕೋಟೆ ಜಿಲ್ಲೆಯನ್ನು ಕೈಬಿಡಲಾಗಿತ್ತು. ಜಿಲ್ಲಾ ಉಸ್ತುವಾರಿ ಸಚಿವ ವಿಜಯಾನಂದ ಕಾಶಪ್ಪನವರು ಜಿಲ್ಲೆಯ ಆರ್ಥಿಕ ಪರಿಸ್ಥಿತಿ, ಕೈಗಾರಿಕಾ ಸಾಮರ್ಥ್ಯ ಹಾಗೂ ಸ್ಥಳೀಯ ಯುವಕರ ಉದ್ಯೋಗದ ಅಗತ್ಯವನ್ನು ಮುಖ್ಯಮಂತ್ರಿಗಳಿಗೆ ಮನವರಿಕೆ ಮಾಡಿಕೊಟ್ಟ ಹಿನ್ನೆಲೆಯಲ್ಲಿ ಬಾಗಲಕೋಟೆ ಜಿಲ್ಲೆಯನ್ನು ಯೋಜನೆಗೆ ಸೇರ್ಪಡೆ ಮಾಡಲಾಗಿದೆ. ಆದ್ದರಿಂದ ಈ ಭಾಗದ ಯುವಕರಿಗೆ ಪ್ರಯೋಜನ ದೊರೆಯುವಂತೆ ಮಾಡಲು ಅಽಕಾರಿಗಳಿಗೆ ಸೂಚಿಸಿದರು.

ಕೈಗಾರಿಕೆ ಇಲಾಖೆಯ ಜಂಟಿ ನಿರ್ದೇಶಕ ಪ್ರಶಾಂತ ಬಾರಿಗಿಡದ ಮಾತನಾಡಿ, ಉದ್ಯಮ ಪೋರ್ಟಲ್‌ನಲ್ಲಿ ನೋಂದಾಯಿತ ಉತ್ಪಾದನಾ ವಲಯ ಮತ್ತು ಸೇವಾ ವಲಯಕ್ಕೆ ಸೇರಿದ ಸೂಕ್ಷ÷್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳು ಈ ಯೋಜನೆ ಸೌಲಭ್ಯ ಪಡೆಯಲು ಅರ್ಹರಾಗಿರುತ್ತಾರೆ. ಯೋಜನೆ ಜಾರಿಗೆ ಬಂದ ದಿನಾಂಕದ ನಂತರ ಹಾಲಿ ಇರುವ ಉದ್ದಿಮೆಗಳು ಹಾಗೂ ಹೊಸದಾಗಿ ಪ್ರಾರಂಭವಾಗುವ ಉದ್ಯಮಗಳು ಸೃಷ್ಟಿಸುವ ಹೊಸ, ಹೆಚ್ಚುವರಿ ಉದ್ಯೋಗಿಗಳಿಗೆ ಮಾತ್ರ ಅನ್ವಯವಾಗಲಿದೆ. 18ರಿಂದ 45 ವರ್ಷದೊಳಗಿದ್ದು, ಅರ್ಹ ಉದ್ದಿಮೆಗಳು ಉದ್ಯೋಗ ನಿಧಿ ಪೋರ್ಟನ್‌ನಲ್ಲಿ ನೋಂದಾಯಿಸುವುದು ಕಡ್ಡಾಯವಾಗಿದೆ ಎಂದು ತಿಳಿಸಿದರು.

ನಿರುದ್ಯೋಗಿ ಯುವಕ, ಯುವತಿಯರು ನೇರವಾಗಿ ವಾಸಸ್ಥಳ ದೃಢೀಕರಣ ಪತ್ರ, ಆಧಾರ ಕಾರ್ಡ್ ಇಲ್ಲವೇ ಚುನಾವಣಾ ಗುರುತಿನ ಚೀಟಿ ದಾಖಲಾತಿಗಳೊಂದಿಗೆ ಉದ್ಯೋಗ ಪಡೆಯಲು ನೋಂದಾಯಿಸಿಕೊಳ್ಳಬಹುದಾಗಿದೆ ಎಂದರು.

ಜಿಲ್ಲಾ ಕೌಶಲ ಅಭಿವೃದ್ಧಿ ಅಧಿಕಾರಿ ಹಿರೇಮಠ, ಜಿಲ್ಲಾ ಅಗ್ರಣಿ ಬ್ಯಾಂಕಿನ ವ್ಯವಸ್ಥಾಪಕ ರಾಜಕುಮಾರ ಹೂಗಾರ, ಜಿಲ್ಲಾ ಕಾರ್ಮಿಕ ಅಧಿಕಾರಿ ರಮೇಶ ಸುಂಬಡ, ಕೈಮಗ್ಗ ಮತ್ತು ಜವಳಿ ಇಲಾಖೆಯ ಉಪನಿರ್ದೇಶಕ ಸಂತೋಷ ಚಾರಖಾನಿ, ಜಿಲ್ಲಾ ಉದ್ಯೋಗ ವಿನಿಮಯ ಅಧಿಕಾರಿ ಕಿರಣ ಮಂಡಿ ಇತರರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net