ದಲಿತರಿಗೆ ಮೀಸಲಾದ ಹಣ ದುರುಪಯೋಗ

ಬಾಗಲಕೋಟೆ ನಗರದಲ್ಲಿ ಶನಿವಾರ ಸಂಸದ ಗೋವಿಂದ ಕಾರಜೋಳ ಅವರ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
ಬಾಗಲಕೋಟೆ ನಗರದಲ್ಲಿ ಶನಿವಾರ ಸಂಸದ ಗೋವಿಂದ ಕಾರಜೋಳ ಅವರ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಪರವಾಗಿ ಮನೆ ಮನೆಗೆ ತೆರಳಿ ಮತಯಾಚನೆ ಮಾಡಿದರು.
Published on

ಪ್ರಮುಖ ಮುಖ್ಯಾಂಶಗಳು

  • ಕಾಂಗ್ರೆಸ್ ಸರ್ಕಾರ
  • ಕಾರಜೋಳ ಟೀಕಾ ಪ್ರಹಾರ
  • ಬಿಜೆಪಿ 50 ಸಾವಿರ ಅಂತರದಿಂದ ಗೆಲ್ಲಲಿದೆ
ಬಾಗಲಕೋಟೆ: ಭ್ರಷ್ಟಾಚಾರ ಮತ್ತು ಸ್ವಜನ ಪಕ್ಷಪಾತದಲ್ಲಿ ಮುಳುಗಿರುವ ಕಾಂಗ್ರೆಸ್ ಸರ್ಕಾರ, ದಲಿತರಿಗೆ ಮೀಸಲಿರುವ ಅನುದಾನವನ್ನು ದುರುಪಯೋಗ ಪಡಿಸಿಕೊಳ್ಳುತ್ತಿದೆ ಎಂದು ಸಂಸದ ಗೋವಿಂದ ಕಾರಜೋಳ ಅವರು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ಟೀಕಾ ಪ್ರಹಾರ ನಡೆಸಿದರು.
ಉಪ ಚುನಾವಣೆ ಹಿನ್ನೆಲೆಯಲ್ಲಿ ಶನಿವಾರ ನಗರದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರೊಂದಿಗೆ ನಗರದ 15, 16ನೇ ವಾರ್ಡ್ಗಳಲ್ಲಿ ಮನೆ ಮನೆಗೆ ತೆರಳಿ ಮತಯಾಚನೆ ನಡೆಸಿ ಅವರು ಮಾತನಾಡಿದರು.
ಕಳೆದ ಮೂರು ವರ್ಷಗಳಿಂದ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಬಾಗಲಕೋಟೆ ಕ್ಷೇತ್ರದಲ್ಲಿ ಒಂದೇ ಒಂದು ಅಭಿವೃದ್ಧಿ ಕೆಲಸವಾಗಿಲ್ಲ. ಈ ಬಾರಿ ಉಪ ಚುಣಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ 50 ಸಾವಿರ ಮತಗಳ ಅಂತರದಿಂದ ಗೆಲವು ಸಾಧಿಸಲಿದ್ದಾರೆ ಎಂದು ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ಆಡಳಿತದಿಂದ ಜನರು ರೋಸಿ ಹೋಗಿದ್ದಾರೆ. ಬಿಜೆಪಿ ಆಡಳಿತಾವಧಿಯಲ್ಲಿ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಅನೇಕ ಅಭಿವೃದ್ಧಿ ಕಾಮಗಾರಿಗಳು ನಡೆದಿದ್ದವು. 2023ರ ಚುನಾವಣೆಯಲ್ಲಿ ವೀರಣ್ಣ ಚರಂತಿಮಠ ಅವರಿಗೆ ಮತ ನೀಡದೆ ತಪ್ಪು ಮಾಡಿಕೊಂಡಿದ್ದೇವೆ ಎಂದು ಜನರು ಹೇಳುತ್ತಿದ್ದು. ಈ ಚುನಾವಣೆಯಲ್ಲಿ ಭಾರಿ ಅಂತರದಲ್ಲಿ ಗೆಲ್ಲಿಸುವ ನಿರ್ಧಾರ ಮಾಡಿದ್ದಾರೆ ಎಂದರು.
ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ, ರಾಜ್ಯಸಭಾ ಸದಸ್ಯ ನಾರಾಯಣಸಾ ಭಾಂಡಗೆ, ಡಾ. ದೇವರಾಜ ಪಾಟೀಲ, ಅಯ್ಯಪ್ಪ ವಾಲ್ಮೀಕಿ, ಸಲಿಂ ಮೋಮಿನ್, ನರಸಪ್ಪಾ ಅಂಬಿಗೇರ, ದುರಗಪ್ಪ ನಾಯಕ, ಹಣಮಂತ ಬಿಚ್ಚಲಿ, ಪರಶು ಕುರಬರ, ನಾಗರಾಜ ಕಟ್ಟಿಮನಿ, ರಾಜು ಕೋಟೆಕಲ್ಲ, ಬಸವರಾಜ ಅಂಬಿಗೇರ, ಮಲ್ಲಿಕಾರ್ಜುನ ಸುರಪೂರ ಮತ್ತಿತರರು ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net