ದೀರ್ಘಾವಧಿ ಪ್ರಧಾನಿಯಾಗಿ ಮೋದಿ ದಾಖಲೆ

ಗುಳೇದಗುಡ್ಡದ ದತ್ತಾತ್ರೇಯ ದೇವಸ್ಥಾನದಲ್ಲಿ ಪ್ರಧಾನಿ ನರೇಂದ್ರ ಮೋದಿ ದೀರ್ಘಾವಧಿ ಚುನಾಯಿತ ಪ್ರಧಾನಿಯಾಗಿ ದಾಖಲೆ ನಿರ್ಮಿಸಿದ ಹಿನ್ನೆಲೆ ಬಿಜೆಪಿ ಕಾರ್ಯಕರ್ತರಿಂದ ವಿಶೇಷ ಪೂಜೆ ನಡೆಯಿತು. ಬಿಜೆಪಿ ಮುಖಂಡ ಅಶೋಕ ಹೆಗಡಿ, ಸಂಪತಕುಮಾರ ರಾಠಿ, ಕಮಲಕಿಶೋರ ಮಾಲಪಾಣಿ, ದೀಪಕ ನೇಮದಿ, ಮಹೇಶ ಭಾರತಿ ಮತ್ತಿತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ದತ್ತಾತ್ರೇಯ ದೇವಸ್ಥಾನದಲ್ಲಿ ವಿಶೇಷ ಪೂಜೆ
  • ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿಯಾಗಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಹೆಮ್ಮೆಯ ಸಂಗತಿ
  • ಮಾಜಿ ಪ್ರಧಾನಿ ನೆಹರೂ ಅವರ ಅಧಿಕಾರಾವಧಿ ದಾಖಲೆ ಮೀರಿಸಿರುವುದು ಐತಿಹಾಸಿಕ ಕ್ಷಣವಾಗಿದೆ
ಗುಳೇದಗುಡ್ಡ: ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ದೀರ್ಘಾವಧಿಯ ಚುನಾವಣಿತ ಪ್ರಧಾನಿಯಾಗಿ ಹೊಸ ದಾಖಲೆ ನಿರ್ಮಿಸಿರುವ ಹಿನ್ನೆಲೆ ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ವಿಶೇಷ ಪೂಜೆ ಸಲ್ಲಿಸಿದರು.
ಪಟ್ಟಣದ ದತ್ತಾತ್ರೇಯ ದೇವಸ್ಥಾನದಲ್ಲಿ ಬುಧವಾರ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಮುಖಂಡ ಅಶೋಕ ಹೆಗಡಿ ಮಾತನಾಡಿ, ಮೋದಿ ಅವರು ಸತತ ಮೂರನೇ ಬಾರಿ ಪ್ರಧಾನಿಯಾಗಿ ದೇಶವನ್ನು ಯಶಸ್ವಿಯಾಗಿ ಮುನ್ನಡೆಸುತ್ತಿರುವುದು ಹೆಮ್ಮೆಯ ಸಂಗತಿಯಾಗಿದೆ ಎಂದು ಹೇಳಿದರು. ಅಲ್ಲದೆ, ಅವರು ಮಾಜಿ ಪ್ರಧಾನಿ ನೆಹರೂ ಅವರ ಅಧಿಕಾರಾವಧಿ ದಾಖಲೆ ಮೀರಿಸಿರುವುದು ಐತಿಹಾಸಿಕ ಕ್ಷಣವಾಗಿದೆ ಎಂದರು.
ಮೋದಿ ಅವರ ಮುಂದಿನ ಆಡಳಿತವೂ ದೇಶದ ಅಭಿವದ್ಧಿಗೆ ಮತ್ತಷ್ಟು ಬಲ ನೀಡಲಿ ಎಂದು ಕಾರ್ಯಕರ್ತರು ಹಾರೈಸಿದರು.
ಸಂಪತಕುಮಾರ ರಾಠಿ, ಕಮಲಕಿಶೋರ ಮಾಲಪಾಣಿ, ದೀಪಕ ನೇಮದಿ, ಮಹೇಶ ಭಾರತಿ, ಗಣೇಶ ಶೀಲವಂತ, ಪ್ರಶಾಂತ ಜವಳಿ ಸೇರಿ ಅನೇಕರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net