ಈ ವೇಳೆ ೧೫ ಸಂತ್ರಸ್ತರಿಗೆ ಹಕ್ಕುಪತ್ರ ಹಾಗೂ ೪೬ ಜನರಿಗೆ ಇ-ಖಾತಾ ಉತಾರ ವಿತರಣೆ ಮಾಡಲಾಯಿತು. ಕಾರ್ಯಕ್ರಮದಲ್ಲಿ ಬುಡಾದ ಅಧ್ಯಕ್ಷ ಅಬ್ದುಲ್‌ರಜಾಜ ಬೇನೂರ, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಽಕಾರದ ಅಧ್ಯಕ್ಷ ಅನೀಲ ದಡ್ಡಿ, ಬಾಗಲಕೋಟೆ ಪಟ್ಟಣ ಅಭಿವೃದ್ಧಿ ಪ್ರಾಽಕಾರದ ಮುಖ್ಯ ಅಭಿಯಂತರ ಚಂದ್ರಹಾಸ ಬಂಡಿ, ಪುನರ್ವಸತಿ ಅಽಕಾರಿ ಪ್ರಶಾಂತ ಬಾರಿಗಿಡದ ಸೇರಿದಂತೆ ಇತರರು ಉಪಸ್ಥಿತರಿದ್ದರು.