ಬಾಗಲಕೋಟೆ ಬಿವಿವಿ ಸಂಘದ ಎಸ್. ನಿಜಲಿಂಗಪ್ಪ ಮೆಡಿಕಲ್ ಕಾಲೇಜ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆಯ ಚಿಕ್ಕಮಕ್ಕಳ ವಿಭಾಗದಲ್ಲಿ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಸ್ತನ್ಯಪಾನ ಸ್ನೇಹಿ ಆಸ್ಪತ್ರೆ ಕಾರ್ಯಾಧ್ಯಕ್ಷೆ ಡಾ. ಭುವನೇಶ್ವರಿ ಯಳಮಲಿ ಮಾತನಾಡಿದರು. ಸೀರೋಗ ವಿಭಾಗದ ಮುಖ್ಯಸ್ಥೆ ಡಾ. ಆಶಾಲತಾ ಮಲ್ಲಾಪೂರ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಅಶೋಕ ಬಡಕಲಿ, ಚಿಕ್ಕಮಕ್ಕಳ ತಜ್ಞ ಡಾ. ರಮೇಶ ಪೋಳ ಇದ್ದರು.
ಒಟ್ಟಾರೆ ಸ್ತನ್ಯಪಾನದಿಂದ ತಾಯಿ ಮತ್ತು ಶಿಶುವಿನ ಆರೋಗ್ಯ ಉತ್ತಮಗೊಳ್ಳುತ್ತದೆ.
ಬಾಗಲಕೋಟೆ :
ನೈಸರ್ಗಿಕ ತಾಯಿ ಹಾಲಿನಿಂದ ಮಗುವಿಗೆ ಪೌಷ್ಠಿಕತೆ ದೊರೆಯುವುದರ ಜೊತೆಗೆ ರೋಗ ನಿರೋಧಕ ಶಕ್ತಿ ಲಭ್ಯವಾಗುತ್ತದೆ. ತಾಯಿಹಾಲು ಅಮೃತಕ್ಕೆ ಸಮ ಎಂದು ಸ್ತನ್ಯಪಾನ ಸ್ನೇಹಿ ಆಸ್ಪತ್ರೆ ಕಾರ್ಯಾಧ್ಯಕ್ಷೆ ಡಾ. ಭುವನೇಶ್ವರಿ ಯಳಮಲಿ ಅಭಿಪ್ರಾಯಪಟ್ಟರು.
ಬಿವಿವಿ ಸಂಘದ ಎಸ್.ನಿಜಲಿಂಗಪ್ಪ ಮೆಡಿಕಲ್ ಕಾಲೇಜ್ ಮತ್ತು ಹಾನಗಲ್ಲ ಕುಮಾರೇಶ್ವರ ಆಸ್ಪತ್ರೆ ಚಿಕ್ಕಮಕ್ಕಳ ವಿಭಾಗದಲ್ಲಿ ಆ. 1ರಿಂದ 7ರ ವರೆಗೆ ಆಯೋಜಿಸಲಾದ ವಿಶ್ವ ಸ್ತನ್ಯಪಾನ ಸಪ್ತಾಹ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಕುಮಾರೇಶ್ವರ ಆಸ್ಪತ್ರೆಯಲ್ಲಿ ಸ್ತನ್ಯಪಾನದ ಮಹತ್ವ ಮತ್ತು ಅದರಿಂದಾಗುವ ಪ್ರಯೋಜನಗಳ ಕುರಿತು ತಾಯಿಂದಿರಿಗೆ ಅರಿವು ಮೂಡಿಸಲಾಗುತ್ತಿದೆ. ಈ ಉದ್ದೇಶಕ್ಕಾಗಿ ವೈದ್ಯಕೀಯ ವಿದ್ಯಾರ್ಥಿಗಳಿಂದ ಕಿರುನಾಟಕ ಪ್ರದರ್ಶನಗಳನ್ನು ಏರ್ಪಡಿಸಲಾಗುತ್ತಿದೆ. ಒಟ್ಟಾರೆ ಸ್ತನ್ಯಪಾನದಿಂದ ತಾಯಿ ಮತ್ತು ಶಿಶುವಿನ ಆರೋಗ್ಯ ಉತ್ತಮಗೊಳ್ಳುತ್ತದೆ ಎಂದರು.
ಸ್ತ್ರೀರೋಗ ವಿಭಾಗದ ಮುಖ್ಯಸ್ಥೆ ಡಾ. ಆಶಾಲತಾ ಮಲ್ಲಾಪೂರ, ಚಿಕ್ಕಮಕ್ಕಳ ವಿಭಾಗದ ಮುಖ್ಯಸ್ಥ ಡಾ. ಅಶೋಕ ಬಡಕಲಿ, ಚಿಕ್ಕ ಮಕ್ಕಳ ತಜ್ಞ ಡಾ. ರಮೇಶ ಪೋಳ ಇದ್ದರು.