ಸಮಾನತೆಯ ಸಂದೇಶ ಸಾರಿದವರು ನಾರಾಯಣಗುರು

ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಶಾಸಕ ಉಮೇಶ ಮೇಟಿ ಉದ್ಘಾಟಿಸಿದರು. ಜಿಲ್ಲಾಽಕಾರಿ ಸಂಗಪ್ಪ ಸೇರಿದಂತೆ ಇತರರು ಇದ್ದರು.
ಬಾಗಲಕೋಟೆ ಜಿಲ್ಲಾಡಳಿತ ಭವನದಲ್ಲಿ ಶುಕ್ರವಾರ ಬ್ರಹ್ಮಶ್ರೀ ನಾರಾಯಣಗುರು ಜಯಂತಿಯನ್ನು ಶಾಸಕ ಉಮೇಶ ಮೇಟಿ ಉದ್ಘಾಟಿಸಿದರು. ಜಿಲ್ಲಾಽಕಾರಿ ಸಂಗಪ್ಪ ಸೇರಿದಂತೆ ಇತರರು ಇದ್ದರು.
Published on

ಜಾತಿ, ಧರ್ಮದ ಬೇಧ-ಭಾವಗಳನ್ನು ಮೀರಿ ಎಲ್ಲರೂ ಸಮಾನರು ಎಂಬ ಸಂದೇಶವನ್ನು ಸಾರಿದವರು ಬ್ರಹ್ಮಶ್ರೀ ನಾರಾಯಣಗುರು ಎಂದು ಬಾಗಲಕೋಟೆ ಶಾಸಕ ಉಮೇಶ ಮೇಟಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿರುವ ಆಡಿಟೋಟಿಯಂ ಹಾಲ್‌ನಲ್ಲಿ ಶುಕ್ರವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣಗುರು ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.
ನಾರಾಯಣಗುರುಗಳು ಸಮಾಜದಲ್ಲಿ ಸಮಾನತೆ, ಸಹೋದರತ್ವ, ಶಿಕ್ಷಣ ಹಾಗೂ ಸಾಮಾಜಿಕ ಸುಧಾರಣೆಗೆ ಮಹತ್ವದ ಸಂದೇಶ ನೀಡಿದ ಮಹಾನ್ ಸಮಾಜ ಸುಧಾರಕರಾಗಿದ್ದಾರೆ. ಒಂದೇ ಜಾತಿ, ಒಂದೇ ಮತ, ಒಂದೇ ದೇವರು ಎಂಬ ನಾರಾಯಣ ಗುರುಗಳ ಸಂದೇಶ ಇಂದಿಗೂ ಸಮಾಜಕ್ಕೆ ದಾರಿದೀಪವಾಗಿದೆ. ಶಿಕ್ಷಣದ ಮೂಲಕ ಸಮಾಜದ ಅಭಿವೃದ್ಧಿ ಸಾಧ್ಯ ಎಂಬುದನ್ನು ಪ್ರತಿಪಾದಿಸಿದ ಗುರುಗಳ ಆದರ್ಶಗಳನ್ನು ಯುವಜನತೆ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅನೀಲಕುಮಾರ ದಡ್ಡಿ ಮಾತನಾಡಿ, ಸಮಾಜದ ಅಭಿವೃದ್ಧಿಯಲ್ಲಿ ಶಿಕ್ಷಣದ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡುವ ಮೂಲಕ ಅವರನ್ನು ಉತ್ತಮ ಭವಿಷ್ಯದತ್ತ ಕೊಂಡೊಯ್ಯಬೇಕು. ವಿದ್ಯಾರ್ಥಿಗಳು ಕಠಿಣ ಪರಿಶ್ರಮ, ಶಿಸ್ತು ಹಾಗೂ ಉತ್ತಮ ಸಂಸ್ಕಾರವನ್ನು ಬೆಳೆಸಿಕೊಂಡು ಸಮಾಜಕ್ಕೆ ತಮ್ಮದೇ ಆದ ಕೊಡುಗೆ ನೀಡಬೇಕು ಎಂದು ಅವರು ಹೇಳಿದರು.
ನಿವೃತ್ತ ಉಪನ್ಯಾಸಕ ಮಹಾಂತೇಶ ಈಳಗೇರ ಉಪನ್ಯಾಸ ನೀಡಿದರು. ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಸಾಧನೆ ಮಾಡಿದ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಪುರಸ್ಕಾರ ನೀಡಲಾಯಿತು. ಶೈಕ್ಷಣಿಕ ಕ್ಷೇತ್ರದಲ್ಲಿ ಉತ್ತಮ ಅಂಕ ಗಳಿಸಿದ ಹಾಗೂ ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.
ಜಿಲ್ಲಾಽಕಾರಿ ಸಂಗಪ್ಪ, ಸಮುದಾಯದ ಮುಖಂಡರಾದ ಆನಂದ ಈಳಗೇರ, ಮುತ್ತರಾಜ ಕರಡಿ, ಮಹಾದೇವ ಹಾದಿಮನಿ ಇತರರು ಉಪಸ್ಥಿತರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net