ನೀಟ್ ಮರು ಪರೀಕ್ಷೆ ಸಿದ್ಧತೆ ಪರಿಶೀಲನೆ

ಬಾಗಲಕೋಟೆಯಲ್ಲಿ ಭಾನುವಾರ ನೀಟ್ ಮರು ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಶನಿವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಮತ್ತಿತರ ಅಧಿಕಾರಿಗಳು ಇದ್ದರು.
ಬಾಗಲಕೋಟೆಯಲ್ಲಿ ಭಾನುವಾರ ನೀಟ್ ಮರು ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಶನಿವಾರ ನಗರದ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಭೇಟಿ ನೀಡಿ ಸಿದ್ಧತೆ ಪರಿಶೀಲಿಸಿದರು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ಧಾರ್ಥ ಗೋಯಲ್ ಮತ್ತಿತರ ಅಧಿಕಾರಿಗಳು ಇದ್ದರು.
Published on

ಪ್ರಮುಖ ಮುಖ್ಯಾಂಶಗಳು

  • ಜಿಲ್ಲಾಧಿಕಾರಿ ಸಂಗಪ್ಪ ಭೇಟಿ
  • ಅಧಿಕಾರಿಗಳಿಂದ ಮಾಹಿತಿ
  • ಮಾರ್ಗಸೂಚಿಗಳನ್ನು ಪಾಲಿಸಿ
ಬಾಗಲಕೋಟೆ: ಜಿಲ್ಲೆಯಲ್ಲಿ ಇಂದು ನಡೆಯುತ್ತಿರುವ ನೀಟ್-2026 ಮರು ಪರೀಕ್ಷೆಯನ್ನು ಸುಗಮ ಹಾಗೂ ಪಾರದರ್ಶಕವಾಗಿ ನಡೆಸುವ ನಿಟ್ಟಿನಲ್ಲಿ ವಿವಿಧ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಸಂಗಪ್ಪ ಅವರು ಶನಿವಾರ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಬಾಗಲಕೋಟೆ ನಗರದ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜ್, ಸೈನ್ಸ್ ಕಾಲೇಜ್, ಕಾಮರ್ಸ್ ಕಾಲೇಜ್, ಸರ್ಕಾರಿ ಪದವಿ ಪೂರ್ವ ಕಾಲೇಜ್ ಹೈಸ್ಕೂಲ್ ವಿಭಾಗ, ನವನಗರದ ಆದರ್ಶ ವಿದ್ಯಾಲಯದಲ್ಲಿ ಸ್ಥಾಪಿಸಲಾದ ನೀಟ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಧಿಕಾರಿಗಳು, ಭದ್ರತಾ ವ್ಯವಸ್ಥೆ, ಅಭ್ಯರ್ಥಿಗಳ ಪ್ರವೇಶ, ಆಸನಗಳ ವ್ಯವಸ್ಥೆ, ಸಿಸಿಟಿವಿ ನಿಗಾ, ಕುಡಿಯುವ ನೀರು, ವಿದ್ಯುತ್ ಪೂರೈಕೆ, ಶೌಚಗೃಹ ಸೇರಿ ಮೂಲ ಸೌಕರ್ಯಗಳ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.
ಪರೀಕ್ಷಾ ಕೇಂದ್ರಗಳಲ್ಲಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ ನಿಗದಿಪಡಿಸಿರುವ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪರೀಕ್ಷಾ ಅಭ್ಯರ್ಥಿಗಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಕ್ರಮಕೈಗೊಳ್ಳಲು ತಿಳಿಸಿದರು.
ನೀಟ್ ಮರು ಪರೀಕ್ಷೆಗೆ 11 ಪರೀಕ್ಷಾ ಕೇಂದ್ರಗಳಿದ್ದು, ಪ್ರತಿಯೊಂದು ಕೇಂದ್ರಗಳಿಗೆ 10 ಜನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ಗೌಪ್ಯ ಸಾಮಗ್ರಿಗಳನ್ನು ಸುರಕ್ಷಿತವಾಗಿ ನಿರ್ವಹಿಸಲು ಬ್ಯಾಂಕಿನ ಸ್ಟ್ರಾಂಗ್ ರೂಮ್‌ಗೆ ಓರ್ವ ಎಎಸ್‌ಐ ಮತ್ತು 4 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿದೆ. ಪರೀಕ್ಷೆಗಳು ಮಧ್ಯಾಹ್ನ 2 ರಿಂದ ಸಂಜೆ 5.15 ಗಂಟೆಯವರೆಗೆ ನಡೆಯಲಿದ್ದು, ಪರೀಕ್ಷಾ ಅಭ್ಯರ್ಥಿಗಳ ಪ್ರಿಸ್ಕಿಂಗ್ ಕಾರ್ಯ ಬೆಳಗ್ಗೆ 11 ರಿಂದ ಮಧ್ಯಾಹ್ನ 1.30 ಗಂಟೆವರೆಗೆ ನಡೆಯಲಿದೆ ಎಂದು ತಿಳಿಸಿದರು.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಾರ್ಥ ಗೋಯಲ್, ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎ.ಸಿ. ಮನ್ನಿಕೇರಿ, ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜನ ಪ್ರಾಚಾರ್ಯ ಪ್ರಭಾಕರ ಪಾಟೀಲ ಸೇರಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net