ಬಾಗಲಕೋಟೆ ನಗರದ ಬಿವಿವಿ ಸಂಘದ ಪಾಲಿಟೆಕ್ನಿಕ್ ಕಾಲೇಜ, ಸೈನ್ಸ್ ಕಾಲೇಜ, ಕಾಮರ್ಸ ಕಾಲೇಜ, ಸರ್ಕಾರಿ ಪದವಿ ಪೂರ್ವ ಕಾಲೇಜ ಹೈಸ್ಕೂಲ ವಿಭಾಗ, ನವನಗರದ ಆದರ್ಶ ವಿದ್ಯಾಲಯದಲ್ಲಿ ಸ್ಥಾಪಿಸಲಾದ ನೀಟ್ ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಿದ ಜಿಲ್ಲಾಽಕಾರಿಗಳು, ಭದ್ರತಾ ವ್ಯವಸ್ಥೆ, ಅಭ್ಯರ್ಥಿಗಳ ಪ್ರವೇಶ, ಆಸನಗಳ ವ್ಯವಸ್ಥೆ, ಸಿಸಿಟಿವಿ ನಿಗಾ, ಕುಡಿಯುವ ನೀರು, ವಿದ್ಯುತ್ ಪೂರೈಕೆ, ಶೌಚಾಲಯ ಸೇರಿದಂತೆ ಮೂಲಸೌಕರ್ಯಗಳ ಬಗ್ಗೆ ಅಽಕಾರಿಗಳಿಂದ ಮಾಹಿತಿ ಪಡೆದುಕೊಂಡರು.