ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಽಕಾರಿ ಡಾ.ಮಂಜುನಾಥ ಡಿ.ಎನ್ ಮಾತನಾಡಿ, ಜಿಲ್ಲಾದ್ಯಂತ ೦ ರಿಂದ ೫ ವರ್ಷದೊಳಗಿನ ಒಟ್ಟು ೨,೧೦,೫೨೯ ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕುವ ಗುರಿ ಹೊಂದಲಾಗಿದ್ದು, ಅದಕ್ಕಾಗಿ ೧೨೮೨ ಪೋಲಿಯೋ ಬೂತಗಳನ್ನು ಸ್ಥಾಪಿಸಲಾಗಿದೆ. ಒಟ್ಟು ೪,೦೭,೭೭೭ ಮನೆಗಳನ್ನು ಗುರುತಿಸಿ ಭೇಟಿ ನೀಡಲು ೧೩೯೦ ತಂಡಗಳನ್ನು ರಚಿಸಲಾಗಿದ್ದು, ಈ ಕಾರ್ಯಕ್ರಮದ ಮೇಲ್ವಿಚಾರಣೆಗೆ ಒಟ್ಟು ೨೬೫ ಮೇಲ್ವಿಚಾರಕರನ್ನು ನಿಯೋಜಿಸಲಾಗಿದೆ. ತೋಟದ ಮನೆಗಳನ್ನು ಭೇಟಿ ಮಾಡಲು ೬೩ ಮೊಬೈಲ್ ತಂಡಗಳನ್ನು ಗುರುತಿಸಲಾಗಿದೆ. ರೈಲು ನಿಲ್ದಾಣ, ಬಸ್ ನಿಲ್ದಾಣ, ಪ್ರವಾಸಿ ತಾಣಗಳು, ಪ್ರಸಿದ್ದ ದೇವಾಲಯಗಳಿಗೆ ಬರುವ ಮಕ್ಕಳಿಗೆ ಲಸಿಕೆಯನ್ನು ಹಾಕಲು ೪೫ ಟ್ರಾನ್ಸಿಸ್ಟ್ ತಂಡಗಳನ್ನು ರಚಿಸಲಾಗಿದೆ ಎಂದು ವಿವರಿಸಿದರು.