ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡ ತೆರವಿಗೆ ಸೂಚನೆ

ಬಾಗಲಕೋಟೆ ತಾಲೂಕಿನ ಮುಚಖಂಡಿ ಗ್ರಾಮದ ಸರ್ಕಾರಿ ಶಾಲೆಗೆ ಜಿಲ್ಲಾಽಕಾರಿ ಸಂಗಪ್ಪ ಎಂ. ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.
ಬಾಗಲಕೋಟೆ ತಾಲೂಕಿನ ಮುಚಖಂಡಿ ಗ್ರಾಮದ ಸರ್ಕಾರಿ ಶಾಲೆಗೆ ಜಿಲ್ಲಾಽಕಾರಿ ಸಂಗಪ್ಪ ಎಂ. ಭೇಟಿ ನೀಡಿ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.
Published on
ಬಾಗಲಕೋಟೆ: ತಾಲೂಕಿನ ಮುಚಖಂಡಿ ಗ್ರಾಮದ ಸರ್ಕಾರಿ ಶಾಲೆಗೆ ಜಿಲ್ಲಾಽಕಾರಿ ಸಂಗಪ್ಪ ಅವರು ಮಂಗಳವಾರ ಭೇಟಿ ನೀಡಿ ಶಿಥಿಲಾವಸ್ಥೆಯಲ್ಲಿರುವ ಶಾಲಾ ಕಟ್ಟಡವನ್ನು ಪರಿಶೀಲಿಸಿ, ತೆರವುಗೊಳಿಸುವಂತೆ ಅಽಕಾರಿಗಳಿಗೆ ಸೂಚನೆ ನೀಡಿದರು.
ಪರಿಶೀಲನಾ ವೇಳೆ ಕಟ್ಟಡದ ಸ್ಥಿತಿ ಅವಲೋಕಿಸಿದ ಜಿಲ್ಲಾಽಕಾರಿಗಳು ಹಳೆಯ ಕಟ್ಟಡ ಶಿಥಿಲಾವಸ್ಥೆಯಲ್ಲಿದ್ದು, ಯಾವುದೇ ಸಮಯದಲ್ಲಿ ಬೀಳುವ ಸ್ಥಿತಿಯಲ್ಲಿದೆ. ಕೂಡಲೇ ವಿದ್ಯಾರ್ಥಿಗಳ ಸುರಕ್ಷತೆಯ ಹಿತದೃಷ್ಠಿಯಿಂದ ನಿಯಮಾನುಸಾರ ತೆರವುಗೊಳಿಸಿ, ಕೈಗೊಂಡ ಕ್ರಮಗಳ ಬಗ್ಗೆ ಸಮಗ್ರ ವರದಿಯನ್ನು ಸಲ್ಲಿಸುವಂತೆ ಸಂಬAಽಸಿದ ಅಽಕಾರಿಗಳಿಗೆ ಸೂಚನೆ ನೀಡಿದರು.
ಶಾಲಾ ಮಕ್ಕಳಿಗೆ ಆಟದ ಮೈದಾನ ಹಾಗೂ ಕಂಪೌAಡ್ ಅವಶ್ಯಕತೆಯಿದೆ. ಈ ಕುರಿತು ತ್ವರಿತವಾಗಿ ಕ್ರಮಕೈಗೊಳ್ಳಬೇಕು. ಈ ವೇಳೆ ಶಾಲೆಯ ಮೇಲೆ ಹೈಟೆನ್ಶನ್ ವಿದ್ಯುತ್ ಲೈನ್ ಹಾಯ್ದು ಹೋಗಿದ್ದು, ತಕ್ಷಣ ತೆರವುಗೊಳಿಸಲು ಕ್ರಮವಹಿಸುವಂತೆ ಗ್ರಾಮಸ್ಥರು ಹಾಗೂ ಶಿಕ್ಷಕರು ಜಿಲ್ಲಾಽಕಾರಿಗಳಲ್ಲಿ ವಿನಂತಿಸಿಕೊAಡರು.
ಇಳಕಲ್ಲ ತಾಲೂಕಿನ ಬಲಕುಂದಿ ಗ್ರಾಮದ ಘಟನೆಯ ಹಿನ್ನಲೆಯಲ್ಲಿ ಸದರಿ ಶಾಲೆಯ ಸ್ಥಳ ಪರಿಶೀಲನೆಯಲ್ಲಿ ಕಂಡುಬAದಿರುವ ಅಂಶಗಳ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿರುವ ಎಲ್ಲ ಸರ್ಕಾರಿ ಶಾಲೆಗಳಲ್ಲಿ ಕೂಡಲೇ ನಿಯಮಾನುಸಾರ ಪರಿಶೀಲಿಸಿ ಮುಂಜಾಗ್ರತವಾಗಿ ಕೈಗೊಳ್ಳಬಹುದಾದ ಕ್ರಮಗಳನ್ನು ಕೈಗೊಂಡು ಶಾಲೆವಾರು ವರದಿ ಸಲ್ಲಿಸುವಂತೆ ಜಿಲ್ಲಾಽಕಾರಿಗಳು ತಿಳಿಸಿದರು.
ಈ ಸಂದರ್ಭದಲ್ಲಿ ಆಹಾರ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ ಇದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net