ಮುಧೋಳ ತಾಲೂಕಿನ ಉತ್ತೂರ ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ 60 ಲಕ್ಷ ರೂ. ವೆಚ್ಚದ ಪಾಕಿರ್ಂಗ್ ಶೆಡ್ ನಿರ್ಮಾಣ ಕಾಮಗಾರಿಗೆ ಸಚಿವ ಆರ್.ಬಿ. ತಿಮ್ಮಾಪೂರ ಭೂಮಿ ಪೂಜೆ ನೆರವೇರಿಸಿದರು. ಸದುಗೌಡ ಪಾಟೀಲ, ಅಶೋಕ ಕಿವಡಿ, ಮಹಾಂತೇಶ ಮಾಚಕನೂರ, ಮುದಕಣ್ಣ ಅಂಬಿಗೇರ, ಸದಾಶಿವ ದೇಸಾಯಿ ಇತರರಿದ್ದರು.
ಮುಧೋಳ: ಗ್ರಾಮೀಣ ಜನರ ಆರೋಗ್ಯವನ್ನು ಗಮನದಲ್ಲಿಟ್ಟುಕೊಂಡು ಸರ್ಕಾರ ವಿವಿಧ ಯೋಜನೆ ಜಾರಿಗೊಳಿಸಿದ್ದು, ಇದರಿಂದ ಸ್ಥಳೀಯರಿಗೆ ಉತ್ತಮ ಸೌಲಭ್ಯಗಳು ದೊರೆಯುತ್ತವೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಆರ್.ಬಿ. ತಿಮ್ಮಾಪೂರ ಹೇಳಿದರು.
ತಾಲೂಕಿನ ಉತ್ತೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಭಾನುವಾರ 60.00 ಲಕ್ಷ ರೂ. ವೆಚ್ಚದ ಪಾರ್ಕಿಂಗ್ ಶೆಡ್ ನಿರ್ಮಾಣ ಹಾಗೂ ದುರಸ್ತಿ ಕಾಮಗಾರಿಗಳಿಗೆ ಭೂಮಿ ಪೂಜೆ ನೆರವೇರಿಸಿ ಅವರು ಮಾತನಾಡಿದರು.
ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ನಿರ್ಮಾಣವಾಗುತ್ತಿರುವ ಪಾರ್ಕಿಂಗ್ ಶೆಡ್‌ನಿಂದಾಗಿ ರೋಗಿಗಳು ಮತ್ತು ಸ್ಥಳೀಯರಿಗೆ ವಾಹನ ನಿಲುಗಡೆಗೆ ಅನುಕೂಲವಾಗುತ್ತದೆ. ಇದರ ಜತೆಗೆ ಇತರ ದುರಸ್ತಿ ಕಾರ್ಯಗಳನ್ನು ಸಹ ಕೈಗೊಳ್ಳಲಾಗುತ್ತಿದ್ದು, ಒಟ್ಟು 60 ಲಕ್ಷ ರೂ. ವೆಚ್ಚದಲ್ಲಿ ಈ ಕಾರ್ಯ ಪೂರ್ಣಗೊಳ್ಳಲಿದೆ. ಈ ಯೋಜನೆಯು ಜಿಲ್ಲಾ ಆರೋಗ್ಯ ಇಲಾಖೆಯ ಸಹಯೋಗದೊಂದಿಗೆ ಜಾರಿಗೊಳಿಸಲಾಗಿದೆ. ಗ್ರಾಮೀಣಾಭಿವೃದ್ಧಿಗೆ ನಮ್ಮ ಸರ್ಕಾರ ಬದ್ಧ ಎಂದರು.
ಉತ್ತೂರು ಗ್ರಾಮದಲ್ಲಿ ನಿರ್ಮಾಣ ಹಂತದಲ್ಲಿರುವ ಸರ್ಕಾರಿ ಪ್ರಾಥಮಿಕ ಶಾಲಾ ಕಟ್ಟಡ ಕಾಮಗಾರಿ ಸಚಿವ ಆರ್.ಬಿ. ತಿಮ್ಮಾಪೂರ ವೀಕ್ಷಣೆ ಮಾಡಿದರು.
ಮುಧೋಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದುಗೌಡ ಪಾಟೀಲ, ಲೋಕಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಶೋಕ ಕಿವಡಿ, ಮುಧೋಳ ತಾಲೂಕಾ ಗ್ಯಾರಂಟಿ ಅಧ್ಯಕ್ಷ ಮಹಾಂತೇಶ ಮಾಚಕನೂರ, ಮುದಕಣ್ಣ ಅಂಬಿಗೇರ, ಸದಾಶಿವ ದೇಸಾಯಿ ಇತರರಿದ್ದರು.