ಲೋಕೇಶ್ವರ ಶಿಕ್ಷಣ ಸಮಿತಿ ಕಾರ್ಯದರ್ಶಿ ಹಾಗೂ ನಿವೃತ್ತ ಪ್ರಾಚಾರ್ಯ ಎಸ್.ಬಿ. ಕೃಷ್ಣಗೌಡರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ ಆದರ್ಶಗಳು ಸಮಾನತೆ, ಸ್ವಾತಂತ್ರ‍್ಯ, ಭಾತೃತ್ವ ಮತ್ತು ಸಾಮಾಜಿಕ ನ್ಯಾಯದ ಮೇಲೆ ಆಧಾರತಿವಾಗಿವೆ. ಶಿಕ್ಷಣ, ಸಂಘಟನೆ ಮತ್ತು ಹೋರಾಟದ ಮೂಲಕ ಜಾತಿರಹಿತ ಸಮಾಜ ನಿರ್ಮಾಣ, ಮಹಿಳಾ ಸಬಲೀಕರಣ ಸಂವಿಧಾನಾತ್ಮಕ ಹಕ್ಕುಗಳ ರಕ್ಷಣೆ, ಮತ್ತು ಮಾನವ ಘನತೆಯನ್ನು ಎತ್ತಿಹಿಡಿಯುವುದು ಅವರ ಪ್ರಮುಖ ವಿಚಾರಧಾರೆಯಾಗಿದೆ ಎಂದರು.