ದೈಹಿಕ ಶಿಕ್ಷಣ ಸದೃಢ ಸಮಾಜ ನಿರ್ಮಾಣಕ್ಕೆ ಮುಖ್ಯ

ಬಾದಾಮಿ ನಗರದ ಕುಮಾರೇಶ್ವರ ಸಭಾಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ ಸಭೆ, ಶೈಕ್ಷಣಿಕ ಕಾರ್ಯಾಗಾರ, ನಿವೃತ್ತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಶಾಸಕ ಭೀಮಸೇನ ಚಿಮ್ಮನಕಟ್ಟಿ ಉದ್ಘಾಟಿಸಿದರು.  ಚೌಡಪ್ಪ, ಬಿ.ಎಸ್.ಅಬ್ಬಿಗೇರಿ, ಬಿ.ಎಚ್.ಹಳಗೇರಿ, ಎಂ.ಸಿ.ನಾಲತವಾಡ ಇತರರಿದ್ದರು.

Published on

ಪ್ರಮುಖ ಮುಖ್ಯಾಂಶಗಳು

  • ಭೀಮಸೇನ ಶಾಸಕ ಚಿಮ್ಮನಕಟ್ಟಿ ಹೇಳಿಕೆ
  • ರಾಜ್ಯ ಕಾರ್ಯಕಾರಿಣಿ ಸಭೆ
  • ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುವ ಅವಕಾಶ ದೊರೆತಿದ್ದು ಸಂತಸ ತಂದಿದೆ.
ಬಾದಾಮಿ: ದೈಹಿಕ ಶಿಕ್ಷಣ ಶಿಕ್ಷಕರು ವಿದ್ಯಾರ್ಥಿಗಳಲ್ಲಿ ಶಿಸ್ತು, ಆರೋಗ್ಯ, ಆತ್ಮವಿಶ್ವಾಸ, ನಾಯಕತ್ವ ಹಾಗೂ ಕ್ರೀಡಾ ಮನೋಭಾವ ಬೆಳೆಸುವ ಮೂಲಕ ಸದೃಢ ಸಮಾಜ ನಿರ್ಮಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತಿದ್ದಾರೆ. ಅವರ ಸೇವೆ ಶಿಕ್ಷಣ ಕ್ಷೇತ್ರಕ್ಕೆ ಮಾತ್ರವಲ್ಲ, ರಾಷ್ಟ್ರದ ಭವಿಷ್ಯಕ್ಕೂ ಅಮೂಲ್ಯ ಕೊಡುಗೆಯಾಗಿದೆ ಶಾಸಕ ಭೀಮಸೇನ ಚಿಮ್ಮನಕಟ್ಟಿ ಹೇಳಿದರು.
ನಗರದ ಶ್ರೀ ಕುಮಾರೇಶ್ವರ ಸಭಾಭವನದಲ್ಲಿ ಜಿಲ್ಲಾ ಹಾಗೂ ತಾಲೂಕು ಕರ್ನಾಟಕ ರಾಜ್ಯ ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ವತಿಯಿಂದ ಭಾನುವಾರ ಆಯೋಜಿಸಿದ್ದ ರಾಜ್ಯ ಕಾರ್ಯಕಾರಿಣಿ ಸಭೆ, ಶೈಕ್ಷಣಿಕ ಕಾರ್ಯಾಗಾರ, ನಿವೃತ್ತರಿಗೆ ಸನ್ಮಾನ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಶಿಕ್ಷಣ ಕ್ಷೇತ್ರಕ್ಕೆ ಅಮೂಲ್ಯ ಸೇವೆ ಸಲ್ಲಿಸಿ ನಿವೃತ್ತರಾದ ದೈಹಿಕ ಶಿಕ್ಷಣ ಶಿಕ್ಷಕರನ್ನು ಸನ್ಮಾನಿಸಿ ಗೌರವಿಸುವ ಅವಕಾಶ ದೊರೆತಿದ್ದು ಸಂತಸ ತಂದಿದೆ ಎಂದರು. ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ಅಧ್ಯಕ್ಷ ಚೌಡಪ್ಪ ಅಧ್ಯಕ್ಷತೆ ವಹಿಸಿದ್ದರು.
ಬಿ.ಎಸ್.ಅಬ್ಬಿಗೇರಿ, ಬಿ.ಎಚ್.ಹಳಗೇರಿ, ಎಂ.ಸಿ.ನಾಲತವಾಡ, ಬಿ.ಟಿ.ಹಳ್ಳಿ, ಡಿ.ಕೆ.ಚಿಮಣಿ, ಅವಿನಾಶ ಮೇಟಿ, ಆರ್.ಟಿ.ಪಟ್ಟಣಶೆಟ್ಟಿ, ಎಚ್.ಎಸ್.ಪಾಟೀಲ, ಸಂತೋಷ ಪಟ್ಟಣಶೆಟ್ಟಿ, ಎಂ.ಸಿ.ಜುಮ್ಮನ್ನವರ, ಎಂ.ಎಂ.ಬೆಳವಣಿಕಿ ಇತರರಿದ್ದರು.
ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net