ಶಿಕ್ಷಕರಾದ ಸಪನಾ ಅನಿಗೋಳ ಮತ್ತು ನಾರನಗೌಡ ಉತ್ತಂಗಿ ಮಾತನಾಡಿ, ಗ್ರಾಮೀಣ ಹಿನ್ನೆಲೆಯಿಂದ ಬೆಳೆದು ಸರ್ಕಾರಿ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡಿರುವ ಪೂಜಾ, ತನ್ನ ಮೊದಲ ಕವನ ಸಂಕಲನದ ಮೂಲಕ ಸಾಹಿತ್ಯ ಕ್ಷೇತ್ರಕ್ಕೆ ಪ್ರವೇಶಿಸಿರುವುದು ಶ್ಲಾಘನೀಯ ಸಾಧನೆ ಎಂದರು. ಸರಳ ಭಾಷೆ ಹಾಗೂ ನೈಜ ಭಾವನೆಗಳಿಂದ ಕೂಡಿದ ಕವನಗಳು ಓದುಗರ ಮನಸನ್ನು ಸ್ಪರ್ಶಿಸುವ ಸಾಮರ್ಥ್ಯ ಹೊಂದಿವೆ ಎಂದು ಹೇಳಿದರು.